ಶಿಕ್ಷಣದಿಂದ ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆ

ಕಿನ್ನಿಗೋಳಿ: ಮೌಲ್ಯಯುತ ಸಂಸ್ಕಾರ ಭರಿತ ಶಿಕ್ಷಣದಿಂದ ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆ ಸಾಧ್ಯ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್ ಕುಮಾರ್ ಬೊಳ್ಳೂರು ಹೇಳಿದರು. ಭಾನುವಾರ ಗುತ್ತಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.
ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಿಲೋಮಿನಾ ಸಿಕ್ವೇರ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ನಿವೃತ್ತ ಶಿಕ್ಷಕ ಹರಿರಾವ್ ಅವರನ್ನು ಸನ್ಮಾನಿಸಲಾಯಿತು.
ತಾ. ಪಂ. ಸದಸ್ಯ ದಿವಾಕರ ಕರ್ಕೇರಾ, ಗ್ರಾ. ಪಂ. ಉಪಾಧ್ಯಕ್ಷೆ ಸುಜಾತಾ ಪೂಜಾರಿ, ಗ್ರಾ. ಪಂ. ಸದಸ್ಯರಾದ ದೇವಪ್ರಸಾದ್ ಪುನರೂರು, ಶ್ಯಾಮಲ ಪಿ. ಹೆಗ್ಡೆ , ವಾಣಿ, ಮಾಜಿ ಜಿಲ್ಲಾ ಪಂ. ಸದಸ್ಯ ಪ್ರಮೋದ್ ಕುಮಾರ್, ಯುಗಪುರುಷದ ಸಂಪಾದಕ ಭುವನಾಭಿರಾಮ ಉಡುಪ, ಶಾಂತಿನಗರ ಬಿಲ್ಲವ ಸಂಘದ ಅಧ್ಯಕ್ಷ ಬಾಲಕೃಷ್ಣ ಡಿ.ಸಾಲ್ಯಾನ್, ಮೂಕಾಂಬಿಕಾ ದೇವಳ ಧರ್ಮದರ್ಶಿ ವಿವೇಕಾನಂದ, ಮೂಕಾಂಬಿಕಾ ಸೇವಾ ಸಮಿತಿ ಅಧ್ಯಕ್ಷ ಚಂದ್ರಶೇಖರ್, ಸಿಆರ್‌ಪಿ ಜಗದೀಶ ನಾವಡ , ಶಾಲಾ ನಾಯಕ ನಿತೇಶ್ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ರೀಟಾ ಡೇಸಾ ವಾರ್ಷಿಕ ವರದಿ ವಾಚಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಾರಾಯಣ ಪೂಜಾರಿ ಸ್ವಾಗತಿಸಿದರು. ಅಂಗನವಾಡಿ ಶಿಕ್ಷಕಿ ಶಶಿಕಲಾ ಬಹುಮಾನ ವಿಜೇತರ ವಿವರ ತಿಳಿಸಿದರು. ಸಹ ಶಿಕ್ಷಕಿ ಯಶೋಧ ಹಾಗೂ ಸಂತೋಷ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.

Kinnigoli-1912201607

Comments

comments

Comments are closed.

Read previous post:
Kinnigoli-1912201606
ನಿಡ್ಡೋಡಿ ಗ್ರಾಮೋತ್ಸವ

ಕಿನ್ನಿಗೋಳಿ: ಹಳ್ಳಿಗಳಲ್ಲಿ ಹಣಕ್ಕಿಂತ ಮಿಗಿಲಾದ ಭಾವನಾತ್ಮಕ ಸಂಬಂಧಗಳಿವೆ. ಹಳ್ಳಿಯಲ್ಲಿ ಹಣವಿಲ್ಲದಿದ್ದರೂ ಬದುಕು ನಡೆಸಬಹುದು. ಈಗ ಹಳ್ಳಿಗಳಲ್ಲೂ ರೈತನೊಂದಿಗಿನ ಸಂಬಂಧ ದೂರವಾಗುತ್ತಿದೆ ಎಂದು ಖ್ಯಾತ ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದರು....

Close