ಸಾರ್ವಜನಿಕ ಈದ್ ಮಿಲಾದ್

ಕಿನ್ನಿಗೋಳಿ: ಸಮಾಜದ ಎಲ್ಲಾ ಧರ್ಮಗಳ ಚಿಂತನೆಗಳೊಂದಿಗೆ ಪ್ರೀತಿ ಅನ್ಯೋನತೆಯಿಂದ ಬಾಳಬೇಕು ಧರ್ಮ ಚಿಂತಕರ ಧ್ಯೇಯ ಉದ್ಧೇಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕಿನ್ನಿಗೋಳಿ ಚರ್ಚ್ ಸಹಾಯಕ ಧರ್ಮಗುರು ಫಾ. ಜಾರ್ಜ್ ಕ್ರಾಸ್ತ ಹೇಳಿದರು.
ಕಿನ್ನಿಗೊಳಿ-ಪದ್ಮನೂರು ಸಾರ್ವಜನಿಕ ಯಕ್ಷಗಾನ ಬಯಲಾಟ ಸಮಿತಿ ಆಶ್ರಯದಲ್ಲಿ ಗುರುವಾರ ನಡೆದ ಸಾರ್ವಜನಿಕ ಈದ್ ಮಿಲಾದ್ ಕಾರ್ಯಕ್ರಮದಲ್ಲಿ ಮಾತನಾಡಿದರು.
ಈ ಸಂದರ್ಭ ಕೂಲಿಕಾರ್ಮಿಕ ವಿಠಲ ಶೆಟ್ಟಿಗಾರ್ ಹೊಸಕಾವೇರಿ ಅವರನ್ನು ಸನ್ಮಾನಿಸಲಾಯಿತು.
ಸಾರ್ವಜನಿಕ ಯಕ್ಷಗಾನ ಬಯಲಾಟ ಸಮಿತಿ ಅಧ್ಯಕ್ಷ ಜೋಸೆಫ್ ಕ್ವಾಡ್ರಸ್ ಅಧ್ಯಕ್ಷತೆ ವಹಿಸಿದ್ದರು.
ಕೇಂದ್ರ ಬ್ಯಾರಿ ಸಾಹಿತ್ಯ ಪರಿಷತ್ ಪ್ರಧಾನ ಕಾರ್ಯದರ್ಶಿ ಹುಸೇನ್ ಕಾಟಿಪಳ್ಳ, ಕಟೀಲು ದೇವಳ ಪ್ರೌಢ ಶಾಲಾ ಶಿಕ್ಷಕ ರಾಜಶೇಖರ ಎನ್, ಬಯಲಾಟ ಸಮಿತಿ ಕಾರ್ಯದರ್ಶಿ ಅಶೋಕ್ ಕುಮಾರ್ ಶೆಟ್ಟಿ, ವಸಂತ, ಶೇಖರ ಪೂಜಾರಿ, ಪ್ರಕಾಶ್ ಡಿಸೋಜ ಉಪಸ್ಥಿತರಿದ್ದರು.
ಬಯಲಾಟ ಸಮಿತಿ ಉಪಾಧ್ಯಕ್ಷ ಸತೀಶ್ ರಾವ್ ಸ್ವಾಗತಿಸಿದರು. ಕೆ. ಅಬ್ದುಲ್ಲಾ ಕಾರ್ಯಕ್ರಮ ನಿರೂಪಿಸಿದರು.

Kinnigoli-2312201606

Comments

comments

Comments are closed.

Read previous post:
ಕಿನ್ನಿಗೋಳಿ ಡಿ. 25 ಉಚಿತ ದಂತ ಚಿಕಿತ್ಸಾ ಶಿಬಿರ

ಕಿನ್ನಿಗೋಳಿ : ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಬಿಜೆಪಿ ಮಹಿಳಾ ಮೋರ್ಚಾ ಹಾಗೂ ಬಿಜೆಪಿ ಯುವ ಮೋರ್ಚಾ, ವೈದ್ಯಕೀಯ ಪ್ರಕೋಷ್ಟ್...

Close