ಸ್ಪರ್ಧಾತ್ಮಕ ಜಗತ್ತಿನಲ್ಲಿ ಶೈಕ್ಷಣಿಕ ಸಾಧನೆ ಅಗತ್ಯ

ಕಿನ್ನಿಗೋಳಿ : ಈಗಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶೈಕ್ಷಣಿಕ ಸಾಧನೆ ಅಗತ್ಯವಾಗಿದೆ ಎಂದು ಮಂಗಳೂರು ಶ್ರೀ ರಾಮಕೃಷ್ಣ ಪ್ರಥಮ ದರ್ಜೆ ಕಾಲೇಜು ಪ್ರಿನ್ಸಿಪಾಲ್ ಡಾ. ನವೀನ್ ಶೆಟ್ಟಿ ಹೇಳಿದರು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪದವೀಪೂರ್ವ ಕಾಲೇಜಿನಲ್ಲಿ ಬುಧವಾರ ನಡೆದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈ ಸಂದರ್ಭ ಕಟೀಲು ಪದವಿ ಪೂರ್ವ ಕಾಲೇಜಿನ ವಸ್ತು ಸಂಗ್ರಹಾಲಯದ ಅಮೂಲ್ಯ ತಾಳೆಗ್ರಂಥಗಳನ್ನು ದಾಖಲೀಕರಿಸಿದ ಉಡುಪಿ ಶ್ರೀ ವಾದಿರಾಜಮಠ ಸಂಶೋಧನಾ ಕೇಂದ್ರದ ನಿರ್ದೇಶಕ ಗೋಪಾಲ ಆಚಾರ್ ಅವರನ್ನು ಸನ್ಮಾನಿಸಲಾಯಿತು. ಕರ್ನಾಟಕ ರಾಜ್ಯದ ಶ್ರೇಷ್ಟ ಪ್ರಾಚಾರ್ಯ ಪ್ರಶಸ್ತಿ ಪುರಸ್ಕೃತ ಪ್ರೊ. ಜಯರಾಮ ಪೂಂಜ ಅವರನ್ನು ವಿದ್ಯಾರ್ಥಿಗಳ ವತಿಯಿಂದ ಗೌರವಿಸಲಾಯಿತು.
ಕಟೀಲು ದೇವಳ ಅನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ, ಅರ್ಚಕ ವೆಂಕಟರಮಣ ಆಸ್ರಣ್ಣ, ತಾ.ಪಂ. ಸದಸ್ಯ ಸುಕುಮಾರ್ ಸನಿಲ್, ಕಟೀಲು ಗ್ರಾ.ಪಂ. ಅಧ್ಯಕ್ಷೆ ಗೀತಾ ಸುವರ್ಣ, ಶಿಕ್ಷಕ ರಕ್ಷಕ ಸಂಘ ಅಧ್ಯಕ್ಷ ಮೋನಪ್ಪ ಶೆಟ್ಟಿ ಎಕ್ಕಾರು, ಯುಗಪುರುಷದ ಕೆ. ಭುವನಾಭಿರಾಮ ಉಡುಪ, ಕೊಡೆತ್ತೂರು ದೇವಿಪ್ರಸಾದ ಶೆಟ್ಟಿ, ವಿದ್ಯಾರ್ಥಿ ನಾಯಕ ಶ್ರೀವತ್ಸ ಉಪಾಧ್ಯಾಯ ಮತ್ತಿತರರು ಉಪಸ್ಥಿತರಿದ್ದರು.

Kinnigoli-2912201602

Comments

comments

Comments are closed.

Read previous post:
Kinnigoli-2812201601
ಶಾಂಭವಿ ನದಿಗೆ ಸೇತುವೆ ಲೋಕಾರ್ಪಣೆ

ಮೂಲ್ಕಿ: ಗ್ರಾಮೀಣ ಪ್ರದೇಶದ ಮೂಲಕ ಸೌಕರ್ಯಗಳನ್ನು ಒದಗಿಸುವಲ್ಲಿ ಸರ್ಕಾರ ಬದ್ದವಾಗಿದ್ದು ಫಲಿಮಾರು ಪ್ರದೇಶದ ಜನರ ಉಪಯೋಗಕ್ಕಾಗಿ 58 ಕೋಟಿ ರೂ ವೆಚ್ಚದ ಬಹುಗ್ರಾಮ ನೀರಿನ ಯೋಜನೆ ಶೀಘ್ರ ಕಾರ್ಯಾರಂಭಗೊಳ್ಳಲಿರುವ...

Close