ಮೌಲ್ಯಧಾರಿತ ಶಿಕ್ಷಣ -ವಿದ್ಯಾರ್ಥಿಗಳ ಹರಿವು

ಕಿನ್ನಿಗೋಳಿ : ಮೌಲ್ಯಧಾರಿತ ನೈತಿಕ ಶಿಕ್ಷಣ ನೀಡುವ ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳ ಹರಿವು ತನ್ನಿಂತಾನೆ ಬರುತ್ತದೆ. ಗ್ರಾಮೀಣ ಮಟ್ಟದ ಕಟೀಲು ಶಿಕ್ಷಣ ಸಮೂಹ ಸಂಸ್ಥೆಗಳು ಗುಣಮಟ್ಟಗಳನ್ನು ಕಾಪಾಡಿ ಬಹಳ ಬೇಡಿಕೆಯ ಮಾದರಿ ಶಾಲಾ ಕಾಲೇಜನ್ನಾಗಿ ಮಾಡುತ್ತಿರುವುದು ಶ್ಲಾಘನೀಯ ಎಂದು ಮುಲ್ಕಿ ಮೂಡಬಿದ್ರೆ ಶಾಸಕ ಮತ್ತು ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಹೇಳಿದರು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪದವೀಪೂರ್ವ ಕಾಲೇಜಿನಲ್ಲಿ ಗುರುವಾರ ನಡೆದ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಟೀಲು ದೇವಳ ಅನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ ಆಶೀರ್ವಚನಗೈದರು. ಕಟೀಲು ದೇವಳ ಪ್ರೌಢ ಶಾಲಾ ನಿವೃತ್ತ ವೈಸ್ ಪ್ರಿನಿಪಾಲ್ ಕೆ.ವಿ. ಶೆಟ್ಟಿ ಹಾಗೂ ನಿವೃತ್ತ ಶಿಕ್ಷಕ ಅಲೆಕ್ಸ್ ತಾವ್ರೊ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ಕಾಲೇಜಿನ ವಿದ್ಯಾರ್ಥಿ ಮನು ಕಶ್ಯಪ್ ಬರೆದ ಸಾಧಕರ ಸನ್ನಿಧಿಯಿಂದ ಭಾಗ-2 ಕೃತಿಯನ್ನು ಮಂಗಳೂರು ಜ್ಞಾನ ರತ್ನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಭಾಸ್ಕರ ದೇವಸ್ಯ ಬಿಡುಗಡೆಗೊಳಿಸಿದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಗಳನ್ನು ನೀಡಲಾಯಿತು.
ಕಟೀಲು ದೇವಳ ಅನುವಂಶಿಕ ಮೊಕ್ತೇಸರ ಡಾ. ಕೆ. ರವೀಂದ್ರನಾಥ ಪೂಂಜ, ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ, ದ.ಕ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಕಟೀಲು ಗ್ರಾ.ಪಂ. ಉಪಾಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿ, ಬೊಂಡಾಲ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಚ್ಚಿದಾನಂದ ಶೆಟ್ಟಿ, ಉದ್ಯಮಿ ಪುರುಷೋತ್ತಮ ಶೆಟ್ಟಿ, ಕಟೀಲು ದೇವಳ ಪ್ರಥಮ ದರ್ಜೆ ಕಾಲೇಜು ಪ್ರಿನಿಪಾಲ್ ಎಂ. ಬಾಲಕೃಷ್ಣ ಶೆಟ್ಟಿ, ಶಿಕ್ಷಕ ರಕ್ಷಕ ಸಂಘ ಅಧ್ಯಕ್ಷ ಮೋನಪ್ಪ ಶೆಟ್ಟಿ ಎಕ್ಕಾರು, ವಿದ್ಯಾರ್ಥಿ ನಾಯಕ ಶ್ರೀವತ್ಸ ಉಪಾಧ್ಯಾಯ ಮತ್ತಿತರರು ಉಪಸ್ಥಿತರಿದ್ದರು.
ಪ್ರಿನ್ಸಿಪಾಲ್ ಪ್ರೊ. ಜಯರಾಮ ಪೂಂಜಾ ಪ್ರಸ್ತಾವನೆಗೈದು ಸ್ವಾಗತಿಸಿ ವಾರ್ಷಿಕ ವರದಿ ಮಂಡಿಸಿದರು. ಉಪನ್ಯಾಸಕರಾದ ಶಂಕರನಾರಾಯಣ ನಾಯಕ್ ಹಾಗೂ ಕೇಶವ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

Kinnigoli-3012201603

Comments

comments

Comments are closed.