ಕಿನ್ನಿಗೋಳಿ: ಮಕ್ಕಳು ದೇವರು ಶಾಲೆಗಳು ದೇವಳಗಳು ಹಾಗಾಗಿ ಶಾಲೆಗಳ ವಾರ್ಷಿಕೋತ್ಸವ ಅಂದರೆ ರಥೋತ್ಸವ ನಡೆದಂತೆ ಊರಿಗೆ ಹಬ್ಬವಿದ್ದಂತೆ ಎಂದು ಕಟೀಲು ದೇವಳ ಅರ್ಚಕ ಕಮಲಾದೇವಿಪ್ರಸಾದ ಆಸ್ರಣ್ಣ ಹೇಳಿದರು.
ಶನಿವಾರ ನಡೆದ ಕಟೀಲು ಅನುದಾನಿತ ಶ್ರೀ ದುರ್ಗಾಪರಮೇಶ್ವರೀ ದೇವಳ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಇಂಗ್ಲಿಷ್ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆಗಳ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ಈ ಸಂದರ್ಭ ಜಿಲ್ಲಾ, ರಾಜ್ಯಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಶಾಲಾ ಸಂಚಾಲಕ ಹಾಗೂ ದೇವಳದ ಮೊಕ್ತೇಸರ ಡಾ. ರವೀಂದ್ರನಾಥ ಪೂಂಜ, ಪಂಜ ವಾಸುದೇವ ಭಟ್, ಲಕ್ಷ್ಮೀಪ್ರಕಾಶ ಶೆಟ್ಟಿ, ಜಯಶೀಲ ಕೋಟ್ಯಾನ್ ಹಳೆಯಂಗಡಿ, ಧನಂಜಯ ಶೆಟ್ಟಿಗಾರ್, ತಾ.ಪಂ. ಸದಸ್ಯ ಸುಕುಮಾರ ಸನಿಲ್, ಕಟೀಲ್ ಸ್ಪೋರ್ಟ್ಸ್ ಮತ್ತು ಗೇಮ್ಸ್ ಕ್ಲಬ್ನ ಕೇಶವ, ಕಟೀಲು ಗ್ರಾ.ಪಂ. ಅಧ್ಯಕ್ಷೆ ಗೀತಾ ಸುವರ್ಣ, ಉಪಾಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿ, ಕಟೀಲು ಪದವಿ ಕಾಲೇಜು ಪ್ರಿನ್ಸಿಪಾಲ್ ಎಂ. ಬಾಲಕೃಷ್ಣ ಶೆಟ್ಟಿ, ಪ್ರೌಢಶಾಲೆಯ ಸೋಮಪ್ಪ ಅಲಂಗಾರು, ಶಿಕ್ಷಕ ರಕ್ಷಕ ಸಂಘದ ವೆಂಕಟರಮಣ ಹೆಗಡೆ, ಮಿಥುನ ಕೊಡೆತ್ತೂರು ಮತ್ತಿತರರಿದ್ದರು.
ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಗೋಪಾಲ ಸ್ವಾಗತಿಸಿದರು. ಇಂಗ್ಲಿಷ್ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಲತಾ ವಂದಿಸಿದರು. ನಿವೃತ್ತ ಮುಖ್ಯ ಶಿಕ್ಷಕ ವಾಸುದೇವ ಶೆಣೈ ಕಾರ್ಯಕ್ರಮ ನಿರೂಪಿಸಿದರು.