ಉತ್ತಮ ಶಿಕ್ಷಣದಿಂದ ಜೀವನದಲ್ಲಿ ಯಶಸ್ಸು

ಕಿನ್ನಿಗೋಳಿ: ಗುರು ಹಿರಿಯರನ್ನು ಗೌರವಿಸಿ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಿ ಸಾಧನೆ ಮಾಡಿ ಜೀವನದಲ್ಲಿ ಯಶಸ್ಸು ಪಡೆದು ಸ್ವಾಸ್ಥ್ಯ ಸಮಾಜದ ನಿರ್ಮಾಣ ಮಾಡಬೇಕು ಎಂದು ದ.ಕ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ ಹೇಳಿದರು. ನಡುಗೋಡು ದ. ಕ. ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಹಳೆ ವಿದ್ಯಾರ್ಥಿ ಸಂಘದ ಜಂಟೀ ಆಶ್ರಯದಲ್ಲಿ ಭಾನುವಾರ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.
ಈ ಸಂದರ್ಭ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಸೌಭದ್ರೆ ಅವರನ್ನು ಸನ್ಮಾನಿಸಲಾಯಿತು. ಮಂಗಳೂರು ತಾ. ಪಂ. ಸದಸ್ಯೆ ಶುಭಲತಾ ಶೆಟ್ಟಿ ಶಾಲಾ ಹಸ್ತಪ್ರತಿ ದೀವಿಗೆ ಬಿಡುಗಡೆಗೊಳಿಸಿದರು. ಪ್ರತಿಭಾನ್ವಿತ ವಿದ್ಯರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಯುಗಪುರುಷದ ಪ್ರಧಾನ ಸಂಪಾದಕ ಕೆ. ಭುವನಾಭಿರಾಮ ಉಡುಪ, ಕಿನ್ನಿಗೋಳಿ ರೋಟರಿ ಕ್ಲಬ್ ಅಧ್ಯಕ್ಷ ರಮಾನಂದ ಪೂಜಾರಿ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಹರಿಶ್ಚಂದ್ರ ಆಚಾರ್ಯ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ತುಕಾರಾಮ್ ಸುವರ್ಣ, ಜಗದೀಶ ಆಚಾರ್ಯ, ವಿದ್ಯಾರ್ಥಿ ನಾಯಕರಾದ ಹೃತಿಕ್ ಕುಲಾಲ್, ವಿಕಾಸ್ , ಅಶೋಕ್ ರಾವ್ ಮತ್ತಿತರರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಲಕ್ಷ್ಮೀ ಶೆಟ್ಟಿ ಸ್ವಾಗತಿಸಿದರು. ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಶೋಭಾ ಎನ್ ವರದಿ ವಾಚಿಸಿದರು. ಐರಿನ್ ಡಿಸೋಜ, ಹೇಮಂತ್ ಶೆಟ್ಟಿ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಶಕುಂತಳಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Kinnigoli-0201201701

Comments

comments

Comments are closed.

Read previous post:
Mulki 10011701
ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ

ಮೂಲ್ಕಿ: ಅವಕಾಶಗಳನ್ನು ಸ್ವತಃ ಸೃಷ್ಟಿಸಿ,ಸ್ವಾವಲಂಭಿಗಳಾಗುವ ಮೂಲಕ ಜೀವನದ ಉನ್ನತಿ ಗಳಿಕೆಯೊಂದಿಗೆ ಇತರರನ್ನು ಸಂತೋಷದಲ್ಲಿಡುವ ಪ್ರವೃತ್ತಿ ಬೆಳೆಸಿಕೊಳ್ಳಿ ಎಂದು ಕನ್ನಡ ಚಿತ್ರರಂಗದ ಉದಯೋನ್ಮುಖ ನಟಿ ನೇಹಾ ಶೆಟ್ಟಿ ಹೇಳಿದರು ಅವರು...

Close