ಸಿಂಡಿಕೇಟ್ ಬ್ಯಾಂಕ್ ಶಾಖೆಯಲ್ಲಿ ರೈತರ ದಿನಾಚರಣೆ

ಕಿನ್ನಿಗೋಳಿ:  ಕಲ್ಲಮುಂಡ್ಕೂರು ಸಿಂಡಿಕೇಟ್ ಬ್ಯಾಂಕ್ ಶಾಖೆಯಲ್ಲಿ ರೈತರ ದಿನಾಚರಣೆಯನ್ನು ಆಚರಿಸಲಾಯಿತು. ಶಾಖಾ ಪ್ರಬಂಧಕ ಅಶೋಕ್ ಕುಮಾರ್ ಶೆಟ್ಟಿ, ಬ್ಯಾಂಕಿನ ಕೃಷಿ ಸಾಲಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಉತ್ತಮ ಕೃಷಿಕರು ಹಾಗೂ ಸಕಾಲದಲ್ಲಿ ಸಾಲ ಮರುಪಾವತಿಸಿದಂತಹ ವಲೇರಿಯನ್ ಸಿಕ್ವೇರ ಮತ್ತು ರಾಮ ಸುವರ್ಣ ಅವರನ್ನು ಸನ್ಮಾನಿಸಲಾಯಿತು. ಕಲ್ಲಮುಂಡ್ಕೂರು ಗ್ರಾ.ಪಂ. ಮಾಜಿ ಅಧ್ಯಕ್ಷೆ ಗೀತಾ ಅಮೀನ್, ಲೀಲಾ ಪೂಜಾರಿ, ಶಾಖಾಧಿಕಾರಿ ರಮಣ್ ಕುಮಾರ್ ಚೌಧರಿ, ಹರಿಕುಮಾರ್, ಆಶಾ ಪಿಂಟೋ, ಗೋಪಾಲ, ಶಿವ ಮತ್ತಿತರರು ಉಪಸ್ಥಿತರಿದ್ದರು.

Kinnigoli-0401201701

Comments

comments

Comments are closed.

Read previous post:
Kinnigoli-0301201701
ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಗ್ರಾಮ ಸಭೆ

ಕಿನ್ನಿಗೋಳಿ: ಮೆನ್ನಬೆಟ್ಟು ಗ್ರಾಮ ಪಂಚಾಯಿತಿಯ 2016-17ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಿನಿ ಎಸ್. ಗುಜರನ್ ಅಧ್ಯಕ್ಷತೆಯಲ್ಲಿ ಮಂಗಳವಾರ ಮೆನ್ನಬೆಟ್ಟು ಗ್ರಾಮ ಪಂಚಾಯಿತಿ...

Close