ಜ. 19 ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ

ಕಿನ್ನಿಗೋಳಿ : ಪುನರೂರು ಪ್ರತಿಷ್ಠಾನದ ಆಶ್ರಯದಲ್ಲಿ ಜ. 19 ಗುರುವಾರ ಸಂಜೆ 4.30ಕ್ಕೆ ಪುನರೂರು ಶ್ರೀ ವಿಶ್ವನಾಥ ಕ್ಷೇತ್ರದ ವಠಾರದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮ ನಡೆಯಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೊಸ ದಿಗಂತ ಪತ್ರಿಕೆಯ ಕಾರ್ಯ ನಿರ್ವಾಹಕ ಪಿ ಎಸ್ ಪ್ರಕಾಶ್ ವಹಿಸಲಿದ್ದು ವೇದಮೂರ್ತಿ ವಾದಿರಾಜ ಉಪಾಧ್ಯಾಯ ಕೊಲಕಾಡಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಖ್ಯಾತ ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ದಿಕ್ಸೂಚಿ ಭಾಷಣಗ್ಯೆಯಲಿದ್ದು, ಉದ್ಯಮಿ ಎನ್ ಸಂತೋಷ್ ಕುಮಾರ್ ಶೆಟ್ಟಿ, ಕಿನ್ನಿಗೋಳಿ ಯುಗಪುರುಷದ ಕೆ ಭುವನಾಭಿರಾಮ ಉಡುಪ, ಅವಿಭಜಿತ ದ.ಕ. ಪದ್ಮಶಾಲಿ ಮಹಾಸಭಾದ ಜಿಲ್ಲಾಧ್ಯಕ್ಷ ಪುರಂದರ ಶೆಟ್ಟಿಗಾರ್, ಅವಿಭಜಿತ ದ.ಕ. ಜಿಲ್ಲಾ ವಿಶ್ವ ಕರ್ಮ ಒಕ್ಕೂಟದ ಉಪಾಧ್ಯಕ್ಷ ಮಧು ಆಚಾರ್ಯ, ಪುನರೂರು ಪ್ರತಿಷ್ಠಾನದ ಗೌರವಾಧ್ಯಕ್ಷರುಗಳಾದ ಹರಿಕೃಷ್ಣ ಪುನರೂರು, ಎಚ್ ಕೆ ಉಷಾ ರಾಣಿ ಪುನರೂರು ಮತ್ತು ಉದ್ಯಮಿ ಪಟೇಲ್ ವಾಸುದೇವ ರಾವ್ ಪುನರೂರು ಭಾಗವಹಿಸಲಿದ್ದಾರೆ ಎಂದು . ಪುನರೂರು ಪ್ರತಿಷ್ಠಾನ ಅಧ್ಯಕ್ಷ ದೇವಪ್ರಸಾದ್ ಪುನರೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments

comments

Comments are closed.