ಮಹಿಳೆಯರು ಸುಶಿಕ್ಷಿತರಾದಾಗ ಸಮಾಜದ ಅಭಿವೃದ್ಧಿ

ಕಿನ್ನಿಗೋಳಿ: ಮಹಿಳೆಯರು ಜಾಗೃತರಾಗಿ ಸುಶಿಕ್ಷಿತರಾಗಿ ಸಿಕ್ಕ ಅವಕಾಶಗಳನ್ನು ಸದುಪಯೋಗ ಪಡಿಸಿದಾಗ ಸಮಾಜ ಅಭಿವೃದ್ಧಿ ಹೊಂದುತ್ತದೆ. ಎಂದು ಯೂನಿಯನ್ ಬ್ಯಾಂಕ್ ನಿವೃತ್ತ ಪ್ರಭಂದಕಿ ಜೆಸಿಂತಾ ಮಥಾಯಸ್ ಹೇಳಿದರು.
ದ.ಕ. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಹಾಗೂ ಭ್ರಾಮರೀ ಮಹಿಳಾ ಸಮಾಜ ಮೆನ್ನಬೆಟ್ಟು ಆಶ್ರಯದಲ್ಲಿ ಬುಧವಾರ ನಡೆದ ಸ್ವಚ್ಚ ಶಕ್ತಿ ಸಪ್ತಾಹ ಹಾಗೂ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಿನಿ ಎಸ್. ಗುಜರನ್ ಅಧ್ಯಕ್ಷತೆ ವಹಿಸಿದ್ದರು.
ಪ್ರಗತಿಪರ ಹಿರಿಯ ಕೃಷಿಕೆ ಪಾಸ್ಕಿನ್ ಪಿಂಟೊ ಮತ್ತು ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಪೌರಕಾರ್ಮಿಕ ಕೇಶವ ಕುಲಾಲ್ ಅವರನ್ನು ಸನ್ಮಾನಿಸಲಾಯಿತು.
ಸಂಪನ್ಮೂಲ ವ್ಯಕ್ತಿ ಸತೀಶ್ ದ.ಕ. ಸ್ವಚ್ಚ ಶಕ್ತಿ ಸಪಾಹದ ಬಗ್ಗೆ ಮಾಹಿತಿ ನೀಡಿದರು.
ಯುಗಪುರುಷ ಪ್ರಧಾನ ಸಂಪಾದಕ ಕೆ.ಭುವನಾಭಿರಾಮ ಉಡುಪ, ತಾಲೂಕು ಪಂಚಾಯಿತಿ ಸದಸ್ಯೆ ಶುಭಲತಾ ಶೆಟ್ಟಿ, ಕಟೀಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಪೂಜಾರ್ತಿ ಮತ್ತಿತರರು ಉಪಸ್ಥಿತರಿದ್ದರು.
ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಲೆಕ್ಕ ಸಹಾಯಕಿ ಮೋಹಿನಿ ಶೆಟ್ಟಿ ಸ್ವಾಗತಿಸಿದರು. ಶಶಿಕಲಾ ಪ್ರಾರ್ಥಿಸಿದರು. ರೇವತಿ ಪುರುಷೋತ್ತಮ್ ವಂದಿಸಿದರು. ಅನುಷಾ ಕರ್ಕೇರ ಕಾರ್ಯಕ್ರಮ ನಿರೂಪಿಸಿದರು.

Kinnigoli08031701

Comments

comments

Comments are closed.

Read previous post:
ಅರಸು ಕುಂಜರಾಯ ದೇವಸ್ಥಾನ ವಾರ್ಷಿಕ ನೇಮ

ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ಕೊಡೆತ್ತೂರು ಶ್ರೀ ಅರಸು ಕುಂಜರಾಯ ದೈವಸ್ಥಾನದಲ್ಲಿ ಮಾರ್ಚ್ 8ರಿಂದ ಮಾರ್ಚ್ 11ರ ತನಕ ವರ್ಷಾವಧಿ ನೇಮ ನಡೆಯಲಿದೆ ಎಂದು ದೈವಸ್ಥಾನ ಸಮಿತಿ ಅಧ್ಯಕ್ಷ ದೇವೀಪ್ರಸಾದ...

Close