ಬಿಜೆಪಿಯ ಶಕ್ತಿ ವೃದ್ಧಿಸುತ್ತಿದೆ ಅಭಿಲಾಷ್ ಶೆಟ್ಟಿ

ಕಿನ್ನಿಗೋಳಿ: ಪಾವಂಜೆಯ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಪಂಚರಾಜ್ಯದ ಚುನಾವಣೆಯಲ್ಲಿ ಬಿಜೆಪಿ ಆಽಕಾರಕ್ಕೆ ಬರಬೇಕು ಎಂದು ಮೂಲ್ಕಿ ಮೂಡಬಿದಿರೆ ಕ್ಷೇತ್ರದ ಬಿಜೆಪಿ ಯುವ ಮೋರ್ಛಾದಿಂದ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಮೂಲ್ಕಿ ಮೂಡಬಿದಿರೆ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷವು ವರ್ಷದಿಂದ ವರ್ಷಕ್ಕೆ ತನ್ನ ವರ್ಚಸ್ಸು ಹೆಚ್ಚಿಸಿಕೊಂಡಿದ್ದು , ಮುಂದಿನ ವರ್ಷ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಯುವ ಕಾರ್ಯಕರ್ತರ ಶ್ರಮದಲ್ಲಿ ಬಿಜೆಪಿ ಜಯ ಗಳಿಸಲಿದೆ. ಶನಿವಾರ ಪಂಚರಾಜ್ಯಗಳಾದ ಉತ್ತರ ಪ್ರದೇಶ, ಗೋವಾ, ಪಂಜಾಬ್, ಮಣಿಪುರ, ಉತ್ತರಾಖಂಡದ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಬಹುಮತ ಪಡೆದು ಅಧಿಕಾರಕ್ಕೇರುವುದು ನಿಶ್ಚಿತವಗಿದೆ ಎಂದು ಮೂಲ್ಕಿ ಮೂಡಬಿದಿರೆ ಕ್ಷೇತ್ರದ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಅಭಿಲಾಷ್ ಶೆಟ್ಟಿ ಹೇಳಿದರು.
ಗುರುವಾರ ಪಾವಂಜೆಯ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ದೇವಳದಲ್ಲಿ ಪಂಚರಾಜ್ಯದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂದು ಮೂಲ್ಕಿ ಮೂಡಬಿದಿರೆ ಕ್ಷೇತ್ರದ ಬಿಜೆಪಿ ಯುವ ಮೋರ್ಚಾದಿಂದ ವಿಶೇಷ ಪ್ರಾರ್ಥನೆ ಸಲ್ಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮೂಲ್ಕಿ ಮೂಡಬಿದಿರೆ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಈಶ್ವರ ಕಟೀಲು ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯದಕ್ಷತೆ ನೋಡಿ ದೇಶದ ಜನತೆ ಬೆಂಬಲಿಸಿದ್ದಾರೆ. ಕೇಂದ್ರ ಸರಕಾರದ ಜನೋಪಯೋಗಿ ಯೋಜನೆಗಳನ್ನು ಗ್ರಾಮೀಣ ಭಾಗದ ಮನೆ ಮನೆಗಳಿಗೂ ತಲುಪಿಸಲು ವಿವಿಧ ಕಾರ್ಯಾಗಾರಗಳನ್ನು ಮುಂದಿನ ದಿನದಲ್ಲಿ ನಡೆಸಲಾಗುವುದು ಎಂದರು.
ಕ್ಷೇತ್ರದ ಧರ್ಮದರ್ಶಿ ಡಾ. ಯಾಜಿ ನಿರಂಜನ್ ಭಟ್, ದ.ಕ.ಜಿ.ಪಂ.ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯ ವಿನೋದ್‌ಕುಮಾರ್ ಬೊಳ್ಳೂರು, ತಾ.ಪಂ.ಸದಸ್ಯರಾದ ಜೀವನ್ ಪ್ರಕಾಶ್ ಕಾಮೆರೊಟ್ಟು, ವಜ್ರಾಕ್ಷಿ ಶೆಟ್ಟಿ, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ ಪುನರೂರು, ಪಡುಪಣಂಬೂರು ಗ್ರಾ.ಪಂ. ಅಧ್ಯಕ್ಷ ಮೋಹನ್‌ದಾಸ್, ಕೆಮ್ರಾಲ್ ಗ್ರಾ.ಪಂ. ಅಧ್ಯಕ್ಷ ನಾಗೇಶ್, ಚೇಳ್ಯಾರು ಗ್ರಾ.ಪಂ. ಸದಸ್ಯ ಪುಷ್ಪರಾಜ್ ಶೆಟ್ಟಿ, ಮೆನ್ನಬೆಟ್ಟು ಗ್ರಾ.ಪಂ. ಸದಸ್ಯ ದಾಮೋದರ ಶೆಟ್ಟಿ, ಹಳೆಯಂಗಡಿ ಗ್ರಾ.ಪಂ. ಸದಸ್ಯೆ ಚಿತ್ರಾ ಸುಖೇಶ್, ಪಿಸಿಎ ಬ್ಯಾಂಕ್ ನಿರ್ದೇಶಕರಾದ ಹಿಮಕರ್ ಕದಿಕೆ, ಜಯರಾಂ ಆಚಾರ್ಯ, ಕ್ಷೇತ್ರದ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ದೇವಿಕಿರಣ್, ಕಾರ್ಯದರ್ಶಿಗಳಾದ ರಾಜೇಶ್ ದಾಸ್, ಅರುಣ್ ಶೆಟ್ಟಿ, ಕಿನ್ನಿಗೋಳಿ ಶಕ್ತಿ ಕೇಂದ್ರದ ಅಧ್ಯಕ್ಷ ಸಂತೋಷ್ ಶೆಟ್ಟಿ, ವಚನ್ ಮಾಣೈ ಮುಕ್ಕ, ಬಾಲಕೃಷ್ಣ, ಮನೋಜ್‌ಕುಮಾರ್, ಕಿರಣ್ ಸಾಲ್ಯಾನ್ ಪಕ್ಷಿಕೆರೆ, ನೀಲೇಶ್ ಶೆಟ್ಟಿ, ಎಚ್.ರಾಮಚಂದ್ರ ಶೆಣೈ ಮತ್ತಿತರರು ಉಪಸ್ಥಿತರಿದ್ದರು.

Kinnigoli109031701

Comments

comments

Comments are closed.

Read previous post:
Kinnigoli-09031707
ಕೊಡೆತ್ತೂರು ಅರಸು ಕುಂಜರಾಯ ನೇಮೋತ್ಸವ

ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ಕೊಡೆತ್ತೂರು ಶ್ರೀ ಅರಸು ಕುಂಜರಾಯ ಹಾಗೂ ಪರಿವಾರ ದೈವಗಳ ನೇಮೋತ್ಸವ ಬುಧವಾರ ನಡೆಯಿತು.

Close