ಕಿನ್ನಿಗೋಳಿ : ಉಚಿತ ದಂತ ಚಿಕಿತ್ಸಾ ಶಿಬಿರ

ಕಿನ್ನಿಗೋಳಿ: ಸೇವಾ ಸಂಸ್ಥೆಗಳು ಸಮಾಜ ಮುಖಿ ಚಿಂತನೆಯ ಸೇವಾ ಕಾರ್ಯಗಳನ್ನು ಅರ್ಹ ಜನರಿಗೆ ತಲುಪಿಸಬೇಕು. ಇಂತಹ ಕೆಲಸಗಳು ನಿರಂತರ ನಡೆಯಬೇಕು ಎಂದು ದ.ಕ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ ಹೇಳಿದರು.
ಸ್ವಾಮಿ ವಿವೇಕಾನಂದ ಟ್ರಸ್ಟ್ ( ರಿ ) ಕಿನ್ನಿಗೋಳಿ ಹಾಗೂ ಎ.ಬಿ. ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯ ನಿಟ್ಟೆ ವಿಶ್ವವಿದ್ಯಾಲಯ ಮಂಗಳೂರು ಆಶ್ರಯದಲ್ಲಿ ಕಿನ್ನಿಗೋಳಿ ಸೈಂಟ್ ಮೇರಿಸ್ ಸ್ಪೆಷಲ್ ಸ್ಕೂಲ್‌ನ ಸಭಾಂಗಣದಲ್ಲಿ ಭಾನುವಾರ ನಡೆದ ಉಚಿತ ದಂತ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಎ.ಬಿ. ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯದ ವೆಂಕಟರಮಣ ಗಟ್ಟಿ ದಂತ ಶಿಬಿರದ ಬಗ್ಗೆ ಮಾಹಿತಿ ನೀಡಿದರು.
ಕಿನ್ನಿಗೋಳಿ ಚರ್ಚ್ ಧರ್ಮಗುರು ರೆ.ಫಾ. ವಿನ್ಸ್ಂಟ್ ಮೊಂತೆರೋ, ತಾಲೂಕು ಪಂಚಾಯಿತಿ ಸದಸ್ಯರಾದ ದಿವಾಕರ ಕಕೇರಾ, ರಶ್ಮಿ ಆಚಾರ್ಯ, ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಿಲೋಮಿನಾ ಸಿಕ್ವೇರಾ, ವೈದ್ಯಾಧಿಕಾರಿ ಡಾ. ಶೀತಲ್, ಕಟೀಲು ಫ್ರೌಡಶಾಲಾ ಶಿಕ್ಷಕ ಸಾಯಿನಾಥ ಶೆಟ್ಟಿ ಮುಂಡ್ಕೂರು ಉಪಸ್ಥಿತರಿದ್ದರು.
ಸ್ವಾಮಿ ವಿವೇಕಾನಂದ ಟ್ರಸ್ಟ್ ಅಧ್ಯಕ್ಷ ನಿಡ್ಡೋಡಿ ಚಾವಡಿ ಮನೆ ಜಗನ್ನಾಥ ಶೆಟ್ಟಿ ಸ್ವಾಗತಿಸಿದರು. ಟ್ರಸ್ಟ್ ಪಿಆರ್‌ಓ ಸೀತಾರಾಮ ಶೆಟ್ಟಿ ಎಳತ್ತೂರು ವಂದಿಸಿದರು. ಶರತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Kinnigoli-120303

Comments

comments

Comments are closed.

Read previous post:
Kinnigoli-120302
ತೋಕೂರು :ಪೊಂಜೊವುಲೆನ ತುಡರ ಪರ್ಬ

ಕಿನ್ನಿಗೋಳಿ: ಪ್ರಾಚೀನ ಕಾಲದಿಂದಲೂ ಸಮಾಜದಲ್ಲಿ ಹೆಣ್ಣಿಗೆ ಉನ್ನತ ಸ್ಥಾನ ಮಾನ ಇತ್ತು. ಮಹಿಳೆಯರು ಸುಸಂಸ್ಕೃತ ಹಾಗೂ ಸಂಘಟಿತರಾದಾಗ ಮಾತ್ರ ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಸದೃಡರಾಗುತ್ತಾರೆ. ಎಂದು ದಾಯಿಜಿ ವರ್ಲ್ಡ್...

Close