ನಾರಾಯಣ ಸನಿಲ್ ಶೈಕ್ಷಣಿಕ ನೇತಾರ

ಕಿನ್ನಿಗೋಳಿ: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಾಕ್ಷರತಾ ಆಂದೋಲನಕ್ಕೆ ಪೂರಕವಾಗಿ ಹಳೆಯಂಗಡಿಯಂತಹ ಗ್ರಾಮೀಣ ಪ್ರದೇಶದಲ್ಲಿ ದಿ.ನಾರಾಯಣ ಸನಿಲ್ ಶಿಕ್ಷಣ ಕ್ರಾಂತಿಯನ್ನು ಮಾಡಿದ್ದಾರೆ. ಅವರ ದೂರ ದೃಷ್ಟಿಯ ಯೋಚನಲಹರಿ, ವ್ಯಕ್ತಿತ್ವ ಆದರ್ಶವನ್ನು ವಿದ್ಯಾರ್ಥಿಗಳು ತಮ್ಮ ಜೀವನದಲಿ ಅಳವಡಿಸಿಕೊಳ್ಳಬೇಕು ಎಂದು ಸಂತ ಅಲೋಶಿಯಸ್ ಕಾಲೇಜು ಉಪನ್ಯಾಸಕ ಡಾ. ಗಣೇಶ್ ಅಮೀನ್ ಸಂಕಮಾರ್ ಹೇಳಿದರು.
ಹಳೆಯಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ದಿ.ನಾರಾಯಣ ಸನಿಲ್ ಅವರ 93ನೇ ಹುಟ್ಟುಹಬ್ಬದ ನೆಂಪು ಕಾರ್ಯಕ್ರಮದಲ್ಲಿ ಸನಿಲ್ ಅವರ ವ್ಯಕ್ತಿತ್ವ ಮತ್ತು ಬದುಕಿನ ಬಗ್ಗೆ ಉಪನ್ಯಾಸ ನೀಡಿ ಮಾತನಾಡಿದರು.
ಹಳೆಯಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಿನ್ಸಿಪಾಲ್ ಪ್ರೊ. ವಿಶ್ವನಾಥ ಭಟ್ ಅಧ್ಯಕ್ಷತೆ ವಹಿಸಿದ್ದರು.
ಹಳೆಯಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಲಜಾ, ಸದಸ್ಯ ಅಬ್ದುಲ್ ಖಾದರ್ ಉಪಸ್ಥಿತರಿದ್ದರು.
ಕಾಲೇಜಿನ ಅಭಿವೃದ್ಧಿ ಮಂಡಳಿಯ ಕಾರ್ಯಾಧ್ಯಕ್ಷ ಎಚ್. ವಸಂತ್ ಬೆರ್ನಾಡ್ ಸ್ವಾಗತಿಸಿ, ಪ್ರಸ್ತಾವನೆಗೈದರು. ಹಳೆಯಂಗಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಪದ್ಮಾವತಿ ಶೆಟ್ಟಿ ವಂದಿಸಿದರು.

Kinnigoli-24031701

Comments

comments

Comments are closed.

Read previous post:
Kinnigoli-22031701
ದಕ್ಷಿಣ ಆಫ್ರಿಕಾದಲ್ಲಿ ಪೈಲೆಟ್ ಊರಿನಲ್ಲಿ ದೈವಪಾತ್ರಿ

ಕಿನ್ನಿಗೋಳಿ: ಪೂರ್ವ ದಕ್ಷಿಣ ಆಫ್ರಿಕಾದಲ್ಲಿ ಆರಿಕ್ ಎರ್ (auric air) ವಿಮಾನ ಸಂಸ್ಥೆಯಲ್ಲಿ ಪೈಲೆಟ್ ಆಗಿದ್ದು ಆಧುನಿಕ, ಐಷಾರಾಮಿ ಶ್ರೀಮಂತ ಬದುಕು ಕಾಣುವ ಎಲ್ಲ ಅವಕಾಶಗಳಿರುವ ಇಪ್ಪತ್ತೊಂಭತ್ತರ ಹರೆಯದ...

Close