ಆರೋಗ್ಯದ ಕಾಳಜಿ ನೆಮ್ಮದಿಯ ಜೀವನ

ಕಿನ್ನಿಗೋಳಿ: ಒತ್ತಡದ ಜೀವನದಲ್ಲಿ ಆರೋಗ್ಯದ ಕಾಳಜಿ ಇರಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದಾಗ ನೆಮ್ಮದಿಯ ಜೀವನ ಸಾಗಿಸಬಹುದು. ನಿಸ್ವಾರ್ಥ ಜನಪರ ಚಿಂತನೆಯ ಕೆಲಸಗಳನ್ನು ಸೇವಾ ಸಂಸ್ಥೆಗಳು ಮಾಡಿದಲ್ಲಿ ಮಾತ್ರ ಜನರ ವಿಶ್ವಾಸ ಗಳಿಸಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್‌ಕುಮಾರ್ ಬೊಳ್ಳೂರು ಹೇಳಿದರು.
ಕಿನ್ನಿಗೋಳಿ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ಹಾಗೂ ಹಳೆಯಂಗಡಿ ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲ, ಶ್ರೀ ವಿದ್ಯಾ ವಿನಾಯಕ ರಜತ ಸೇವಾ ಟ್ರಸ್ಟ್, ಯುವತಿಮತ್ತು ಮಹಿಳಾ ಮಂಡಲ ಹಳೆಯಂಗಡಿ ಎ.ಬಿ ಶೆಟ್ಟಿ ಸ್ಮಾರಕ ದಂತ ಮಹವಿದ್ಯಾಲಯ, ನಿಟ್ಟೆ ವಿಶ್ವವಿದ್ಯಾಲಯ ಮಂಗಳೂರು ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಹಳೆಯಂಗಡಿಯ ಯುಬಿಎಂಸಿ ಶಾಲಾ ವಠಾರದಲ್ಲಿ ಭಾನುವಾರ ನಡೆದ ಉಚಿತ ದಂತ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಕಿನ್ನಿಗೋಳಿ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಅಧ್ಯಕ್ಷ ನಿಡ್ಡೋಡಿ ಚಾವಡಿ ಮನೆ ಜಗನ್ನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ಯುವಕ ಮಂಡಲದ ಆರೋಗ್ಯ ನಿಧಿಯಿಂದ ರೂ. ಹತ್ತು ಸಾವಿರವನ್ನು ಲವಿನಾ ಕರ್ಕಡ ಅವರಿಗೆ ಹಸ್ತಾಂತರಿಸಲಾಯಿತು.
ಮಂಗಳೂರು ತಾ.ಪಂ. ಸದಸ್ಯರಾದ ಜೀವನ್ ಪ್ರಕಾಶ್ ಕಾಮೆರೊಟ್ಟು, ವಜ್ರಾಕ್ಷಿ ಶೆಟ್ಟಿ, ಶರತ್ ಕುಬೆವೂರು, ಎ.ಬಿ.ಶೆಟ್ಟಿ ಶಿಕ್ಷಣ ಸಂಸ್ಥೆಯ ಡಾ.ಕುಮುದಾ ರಾವ್, ಡಾ.ಸನಾ, ಶಾಲಾ ಮುಖ್ಯೋಪಾಧ್ಯಾಯಿನಿ ಐರಿನ್ ಕ್ರಿಸ್ತಬೆಲ್, ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲದ ಸುಧಾಕರ ಅರ್. ಅಮಿನ್, ಸಲಹಾ ಸಮಿತಿಯ ಅಧ್ಯಕ್ಷ ಸದಾಶಿವ ಅಂಚನ್ ಚಿಲಿಂಬಿ, ರಜತಾ ಸೇವಾ ಟ್ರಸ್ಟ್‌ನ ಕಾರ್ಯದರ್ಶಿ ಸ್ಟ್ಯಾನಿ ಡಿಕೋಸ್ತ, ಮಹಿಳಾ ಮಂಡಳಿಯ ಅಧ್ಯಕ್ಷೆ ಜ್ಯೋತಿ ರಾಮಚಂದ್ರ, ಯುವತಿ ಮಂಡಳಿಯ ಅಧ್ಯಕ್ಷೆ ದಿವ್ಯಶ್ರಿ ರಮೇಶ್ ಕೋಟ್ಯಾನ್ ಉಪಸ್ಥಿತರಿದ್ದರು.
ರಾಮದಾಸ್ ಪಾವಂಜೆ ಕಾರ್ಯಕ್ರಮ ನಿರೂಪಿಸಿದರು. ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಸೀತಾರಾಮ ಶೆಟ್ಟಿ ಎಳತ್ತೂರು ವಂದಿಸಿದರು.

Kinnigoli-10041705

Comments

comments

Comments are closed.

Read previous post:
Kinnigoli-10041703
ಕಿನ್ನಿಗೋಳಿ- ಗರಿಗಳ ಹಬ್ಬ ( ಪಾಮ್ ಸಂಡೆ )

ಕಿನ್ನಿಗೋಳಿ : ಕಿನ್ನಿಗೋಳಿ ಕೊಸೆಸಾಂವ್ ಅಮ್ಮನವರ ಚರ್ಚ್‌ನಲ್ಲಿ ಗರಿಗಳ ಹಬ್ಬ ಭಾನುವಾರ ( ಪಾಮ್ ಸಂಡೆ ) ನಡೆಯಿತು. ಕಿನ್ನಿಗೋಳಿ ಚರ್ಚ್ ಪ್ರಧಾನ ಧರ್ಮಗುರು ರೆ.ಫಾ. ವಿನ್ಸೆಂಟ್ ಮೊಂತೆರೋ,...

Close