ಹಳೆಯಂಗಡಿ ಸರಕಾರಿ ಕಾಲೇಜು ವಾರ್ಷಿಕೋತ್ಸವ

ಕಿನ್ನಿಗೋಳಿ : ಗ್ರಾಮೀಣ ಪ್ರದೇಶದ ಕಾಲೇಜು ಮುಖ್ಯವಾಗಿ ಹೆಣ್ಣುಮಕ್ಕಳ ಉನ್ನತ ಶಿಕ್ಷಣಕ್ಕೆ ಅವಕಾಶ ಕಲ್ಪಿಸುತ್ತಿರುವುದು ಶ್ಲಾಘನೀಯ ಎಂದು ಮುಲ್ಕಿ ಮೂಡಬಿದಿರೆ ಶಾಸಕ ಕೆ. ಅಭಯಚಂದ್ರ ಜೈನ್ ಹೇಳಿದರು.
ಹಳೆಯಂಗಡಿ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ ಕಾಲೇಜು ವಾರ್ಷಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಂಗಳೂರಿನ ರಥಬೀದಿಯ ಸರಕಾರಿ ಪ್ರಥಮ ದರ್ಜೆಕಾಲೇಜು ಪ್ರಿನ್ಸಿಪಾಲ್ ಪ್ರೊ. ರಾಜಶೇಖರ ಹೆಬ್ಬಾರ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಪಂಚ ವ್ಯಕ್ತಿತ್ವಗಳಾದ ದೈಹಿಕ, ಬೌದ್ಧಿಕ, ಭಾವನಾತ್ಮಕ, ನೈತಿಕ ಮತ್ತು ಆಧ್ಯಾತ್ಮಿಕ ವ್ಯಕ್ತಿತ್ವಗಳನ್ನು ವಿದ್ಯಾರ್ಥಿದೆಸೆಯಲ್ಲಿ ಶ್ರಮವಹಿಸಿ ಬೆಳೆಸಿಕೊಳ್ಳಬೇಕು ಹಾಗೂ ಓದಿನ ಜೊತೆಗೆ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದರು.
ಹಳೆಯಂಗಡಿ ಸರಕಾರಿ ಪ್ರಥಮದರ್ಜೆ ಕಾಲೇಜು ಪ್ರೊ. ವಿಶ್ವನಾಥ್ ಭಟ್, ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ವಸಂತ ಬೆರ್ನಾಡ್, ಹಳೆಯಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಲಜಾ, ಉಪಾಧ್ಯಕ್ಷೆ ಪದ್ಮಾವತಿ ಶೆಟ್ಟಿ, ಪಂಚಾಯಿತಿ ಸದಸ್ಯ ಅಬ್ದುಲ್‌ಖಾದರ್, ಅಬ್ದುಲ್‌ಅಜೀಜ಼್, ವಿದ್ಯಾರ್ಥಿ ಪ್ರತಿನಿಧಿಗಳಾದ ಭಾಗ್ಯಶ್ರೀ, ಸುಷ್ಮಾ, ಗುರುಪ್ರಸಾದ್ ಉಪಸ್ಥಿತರಿದ್ದರು.
ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಜಗದೀಶ ಬಾಳ ಸ್ವಾಗತಿಸಿದರು. ರೋಶ್ನಿ ಯಶವಂತ್ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಕು. ಭಾಗ್ಯಶ್ರೀ ವಂದಿಸಿದರು. ಪೂಜಾ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳು ಮತ್ತು ಹಳೆವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

Kinnigoli-15041705

Comments

comments

Comments are closed.

Read previous post:
Kinnigoli-15041704
ಅಲ್ಪೋನ್ಸ್ ಡಿಸೋಜ 

ಕಿನ್ನಿಗೋಳಿ : ಕಿನ್ನಿಗೋಳಿ ಸಮೀಪದ ಎಳತ್ತೂರು ಗ್ರಾಮದ ಪಡು ಪೊಯ್ಮನ್ ಮನೆ ಅಲ್ಪೋನ್ಸ್ ಡಿಸೋಜ (90 ವರ್ಷ) ಗುರುವಾರ ನಿಧನ ಹೊಂದಿದ್ದಾರೆ. ಮೃತರಿಗೆ ನಾಲ್ಕು ಪುತ್ರರು ಹಾಗೂ ಇಬ್ಬರು ಪುತ್ರಿಯರು...

Close