ಸ್ಕೌಟ್ಸ್ ಗೈಡ್ಸ್ ಸಂಸ್ಥೆಯ ವಿಶೇಷ ಶಿಬಿರ

ಕಿನ್ನಿಗೋಳಿ: ವಿದ್ಯಾರ್ಥಿಗಳಲ್ಲಿ ದೇಶದ ಬಗ್ಗೆ ಗೌರವ ಅಭಿಮಾನ ಬೆಳೆಸುವಲ್ಲಿ, ಸಮಾಜ ಸೇವೆಯ ಬಗ್ಗೆ ತಿಳಿಹೇಳುವ ಹಾಗೂ ಮಾನವೀಯ ಮೌಲ್ಯವುಳ್ಳ ಶಿಸ್ತುಬದ್ಧ ಜೀವನಕ್ಕೆ ಸ್ಕೌಟ್ಸ್ ಗೈಡ್ಸ್ ನಂತಹ ಸಂಸ್ಥೆಗಳು ಸಹಕಾರಿಯಾಗಿವೆ ಎಂದು ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು ಹೇಳಿದರು.
ಶುಕ್ರವಾರ ಶಿಮಂತೂರು ಶಾರದಾ ವಿದ್ಯಾ ಸಂಸ್ಥೆಯಲ್ಲಿ ಮಂಗಳೂರಿನ ಶಾರದಾ ವಿದ್ಯಾಲಯದ ಸ್ಕೌಟ್ಸ್ ಗೈಡ್ಸ್ ಸಂಸ್ಥೆಯ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಶಾರದಾ ವಿದ್ಯಾ ಸಂಸ್ಥೆಯ ಕೆ. ಭುವನಾಭಿರಾಮ ಉಡುಪ ಅಧ್ಯಕ್ಷತೆ ವಹಿಸಿದ್ದರು.
ಶಾರದಾ ವಿದ್ಯಾಲಯದ ಭಾರತ್ ಸ್ಕೌಟ್ಸ್ ಗೈಡ್ಸ್‌ನ ರೇಖಾ, ಶಿಕ್ಷಕ ದಿನೇಶ್ ಕೆ ಉಪಸ್ಥಿತರಿದ್ದರು.
ಸುವಿಧಾ ಕಿಣಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Kinnigoli-15041708

Comments

comments

Comments are closed.

Read previous post:
Kinnigoli-15041707
ನೂತನ ಕಿಂಡಿ ಅಣೆಕಟ್ಟು ನಿರ್ಮಾಣ

ಕಿನ್ನಿಗೋಳಿ : ಕಿನ್ನಿಗೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೇರಗುರಿ ಬಳಿ ಮಹಾತ್ಮಗಾಂಧಿ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನೂತನ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಿಲೋಮಿನ...

Close