ಮಹಿಳೆಯರು ಆರೋಗ್ಯದ ಕಾಳಜಿ ವಹಿಸಬೇಕು

ಕಿನ್ನಿಗೋಳಿ : ಮಹಿಳೆಯು ತನ್ನ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಕುಟುಂಬದ ಆರೋಗ್ಯದ ಬಗ್ಗೆ ಕೂಡಾ ಗಮನವಹಿಸಬೇಕು. ಬಿಜೆಪಿ ಕೇವಲ ರಾಜಕೀಯ ಪಕ್ಷವಾಗಿ ಬೆಳೆಯದೆ ಸಾಮಾಜಿಕ ಚಿಂತನೆಯನ್ನು ಮನಗಂಡು ಸಮಾಜ ಸೇವಾ ಕಾರ್ಯಕ್ರಮ ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯದರ್ಶಿ ಹಾಗೂ ಉಡುಪಿ ಜಿ.ಪಂ. ಸದಸ್ಯೆ ಗೀತಾಂಜಲಿ ಸುವರ್ಣ ಹೇಳಿದರು.
ಅವರು ಪಡುಪಣಂಬೂರು ಬಳಿಯ ಕಲ್ಲಾಪು ಶ್ರಿ ವೀರಭದ್ರ ಮಹಮ್ಮಾಯಿ ದೇವಳದಲ್ಲಿ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮ ಶತಾಬ್ದಿ ಪ್ರಯುಕ್ತ ವಿವಿಧ ಸಂಘ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಭಾನುವಾರ ನಡೆದ ಉಚಿತ ವೈದ್ಯಕೀಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಬಿಜೆಪಿ ಮಹಿಳಾ ಮೋರ್ಚಾದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷೆ ಪೂಜಾ ಪೈ ಅಧ್ಯಕ್ಷತೆಯನ್ನು ವಹಿಸಿದ್ದರು.
ಬಿಜೆಪಿ ಜಿಲ್ಲಾ ಮಹಿಳಾ ಮೋರ್ಛಾ, ಮಂಗಳೂರು ಕದ್ರಿ ಹಿಲ್ಸ್‌ನ ಲಯನ್ಸ್ ಮತ್ತು ಲಿಯೋ ಕ್ಲಬ್ ಹಾಗೂ ಕಲ್ಲಾಪು ಶ್ರೀ ವೀರಭದ್ರ ಮಹಮ್ಮಾಯಿ ದೇವಳದ ಜಂಟಿ ಆಶ್ರಯದಲ್ಲಿ ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯ ಸಹಕಾರದಲ್ಲಿ ಶಿಬಿರ ನಡೆಯಿತು.
ಮೂಲ್ಕಿ-ಮೂಡಬಿದಿರೆ ಕ್ಷೇತ್ರದ ಅಧ್ಯಕ್ಷ ಈಶ್ವರ ಕಟೀಲು, ಕ್ಷೇತ್ರದ ಕಾರ್ಯದರ್ಶಿ ಸುಖೇಶ್ ಶೆಟ್ಟಿ ಶಿರ್ತಾಡಿ, ದ.ಕ. ಬಿಜೆಪಿ ಹಿಂದುಳಿದ ಮೋರ್ಚಾ ವರ್ಗದ ಕಾರ್ಯದರ್ಶಿ ವಿನೋದ್ ಸಾಲ್ಯಾನ್ ಬೆಳ್ಳಾಯರು, ದ.ಕ.ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯ ವಿನೋದ್ ಕುಮಾರ್ ಬೊಳ್ಳೂರು, ಬಿಜೆಪಿ ಕ್ಷೇತ್ರದ ಮಹಿಳಾ ಮೋರ್ಚಾ ಅಧ್ಯಕ್ಷೆ ಲೀಲಾವತಿ ರಾವ್, ಜಿಲ್ಲಾ ಕಾರ್ಯದರ್ಶಿ ಕುಸುಮಾ ಚಂದ್ರಶೇಖರ್, ಜಿಲ್ಲಾ ಉಪಾಧ್ಯಕ್ಷ ಜಗದೀಶ ಅಧಿಕಾರಿ, ಮಂಗಳೂರು ಕದ್ರಿ ಹಿಲ್ಸ್ ನ ಲಯನ್ಸ್ ಅಧ್ಯಕ್ಷ ಪ್ರವೀಣ್ ಶೆಟ್ಟಿ, ನಿಯೋಜಿತ ಅಧ್ಯಕ್ಷ ವಿಜಯ ಶೆಟ್ಟಿ ಕೊಲ್ನಾಡು, ಲಿಯೋ ಕ್ಲಬ್ ಅದಿತಿ ಶೆಟ್ಟಿ, ಪಡುಪಣಂಬೂರು ಅರಸು ಕಂಬಳ ಸಮಿತಿ ಅಧ್ಯಕ್ಷ ಕೊಲ್ನಾಡುಗುತ್ತು ರಾಮಚಂದ್ರ ನಾಯಕ್, ಕಲ್ಲಾಪು ಶ್ರೀ ವೀರಭದ್ರ ಮಹಮ್ಮಾಯಿ ದೇವಳದ ಕಾಂತು ಯಾನೆ ರತ್ನಾಕರ ಶೆಟ್ಟಿಗಾರ್, ರಾಮಗುರಿಕಾರ, ಡಾ.ಹರ್ಬಟ್ ಮಾರಿಯಾ ಪಿರೇರಾ ಮತ್ತಿತರರು ಉಪಸ್ಥಿತರಿದ್ದರು.
ಪೂಜಾ ಪೈ ಸ್ವಾಗತಿಸಿ, ಪ್ರಸ್ತಾವನೆಗೈದರು, ಪೀತಾಂಬರ ಶೆಟ್ಟಿಗಾರ್ ವಂದಿಸಿದರು, ದಿನೇಶ್ ಕೊಲ್ನಾಡು ನಿರೂಪಿಸಿದರು.
Kinnigoli-01051711

Comments

comments

Comments are closed.

Read previous post:
Kinnigoli-01051708
ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಳ ಧಾರ್ಮಿಕ ಸಭೆ

ಕಿನ್ನಿಗೋಳಿ : ದೇವಳಗಳಿಗೆ ನೀಡುವ ಹಣ ಸದುಪಯೋಗಗೊಳ್ಳುತ್ತದೆ. ಶಿಸ್ತು ಸಂಸ್ಕಾರದ ಧಾರ್ಮಿಕ ನಂಬಿಕೆಯಿಂದ ಎಲ್ಲರಿಗೂ ನೆಮ್ಮದಿ ಸುಖ ಶಾಂತಿ ದೊರಕುತ್ತದೆ. ಎಂದು ಪಲಿಮಾರು ಮಠದ ಶ್ರೀ ಶ್ರೀ ವಿದ್ಯಾಧೀಶ...

Close