ಸುರಗಿರಿ ಮಹಿಳಾ ಮಂಡಲ ವಾರ್ಷಿಕೋತ್ಸವ

ಕಿನ್ನಿಗೋಳಿ: ಎಳವೆಯಲ್ಲಿ ಹೆಣ್ಣು ಮಕ್ಕಳಿಗೆ ಶಿಸ್ತು, ಸಂಸ್ಕಾರ ಸಂಸ್ಕೃತಿ ಹಾಗೂ ಆಚಾರ ವಿಚಾರಗಳ ಬಗ್ಗೆ ತಿಳಿ ಹೇಳಿ ಮೌಲ್ಯಯುತ ಶಿಕ್ಷಣ ನೀಡಿ ಸುಸಂಸ್ಕರನ್ನಾಗಿ ಮಾಡುವ ಹೊಣೆಗಾರಿಕೆ ಹೆತ್ತವರು ಮತ್ತು ಪೋಷಕರ ಮೇಲಿದೆ. ದೇಶಕ್ಕಾಗಿ ಸೇವೆ ಸಲ್ಲಿಸಿದ ಮಹಾನುಭಾವರ ಕಥೆಗಳನ್ನು ಹೇಳುವ ಮೂಲಕ ಮಕ್ಕಳಿಗೆ ದೇಶದ ಬಗ್ಗೆ ಅಭಿಮಾನ ಮೂಡಿಸಬೇಕು ಎಂದು ಕಾರ್ಕಳ ಕಾಲೇಜು ಉಪನ್ಯಾಸಕಿ ಅಕ್ಷಯ ಗೋಖಲೆ ಹೇಳಿದರು.
ಕಿನ್ನಿಗೋಳಿ ಸಮೀಪದ ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಗುರುವಾರ ನಡೆದ ಸುರಗಿರಿ ಮಹಿಳಾ ಹಾಗೂ ಯುವತಿ ಮಂಡಲದ 11ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ ಉಪನ್ಯಾಸ ನೀಡಿದರು.
ಈ ಸಂದರ್ಭ ಸಾಧಕಿ ಕೆಮ್ರಾಲ್ ಪಲ್ಲೆಕುದ್ರು ಸುಮತಿ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ವಿಜಯಲಕ್ಷ್ಮೀ ಪ್ರಸಾದ್ ರೈ ಅಧ್ಯಕ್ಷತೆ ವಹಿಸಿದ್ದರು.
ಸುರಗಿರಿ ಮಹಾಲಿಂಗೇಶ್ವರ ದೇವಳದ ಪ್ರಧಾನ ಆರ್ಚಕ ವಿಶ್ವೇಶ ಭಟ್, ಆಡಳಿತ ಮೊಕ್ತೇಸರ ಸೀತಾರಾಮ ಶೆಟ್ಟಿ, ಮಂಗಳೂರು ಕೆನರಾ ಕಾಲೇಜು ಉಪನ್ಯಾಸಕಿ ಪ್ರಮೀಳಾ ರಾವ್, ಮೂಲ್ಕಿ ಬಂಟರ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ಬಬಿತಾ ಶೆಟ್ಟಿ , ಸುರಗಿರಿ ಯುವಕ ಮಂಡಲದ ಅಧ್ಯಕ್ಷ ಸಚಿನ್ ಶೆಟ್ಟಿ, ಸುರಗಿರಿ ಮಹಿಳಾ ಮಂಡಲದ ಅದ್ಯಕ್ಷೆ ನಿರ್ಮಲಾ ನಾಯಕ್ ಉಪಸ್ಥಿತರಿದ್ದರು.
ಶೋಭಾ ಶೆಟ್ಟಿ ಸ್ವಾಗತಿಸಿದರು. ಗುಲಾಬಿ ಆಳ್ವ ವರದಿ ವಾಚಿಸಿದರು. ಶಶಿಕಲಾ ಆರ್ ಶೆಟ್ಟಿ ಸನ್ಮಾನ ಪತ್ರ ವಾಚಿಸಿದರು. ಪ್ರತಿಭಾ ನವೀನ್ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು.

Kinnigoli-05051705

Comments

comments

Comments are closed.

Read previous post:
Mulki-05051704
ಕೊಂಡೇಲ ತರುಣ ವೃಂದ-ವಿಜಯ ಪೂಜಾರಿ ಆಯ್ಕೆ

ಕಟೀಲು: ಕೊಂಡೇಲ ತರುಣ ವೃಂದ ಇದರ ಅಧ್ಯಕ್ಷರಾಗಿ ವಿಜಯ ಪೂಜಾರಿ, ಕಾರ್ಯದರ್ಶಿಯಾಗಿ ಪ್ರವೀಣ್ ಪೂಜಾರಿ, ಕ್ರೀಡಾ ಕಾರ್ಯದರ್ಶಿಯಾಗಿ ಸಂದೀಪ್ ಶೆಟ್ಟಿ, ಕೋಶಾಧಿಕಾರಿಯಾಗಿ ದಿವಾಕರ ಪೂಜಾರಿ ಆಯ್ಕೆಯಾಗಿದ್ದಾರೆ.

Close