ಜೂನ್ 3ರಂದು ಸಾಹಿತ್ಯ ಸಮ್ಮೇಳನ – 2017

ಕಿನ್ನಿಗೋಳಿ: ಮುಲ್ಕಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಿನ್ನಿಗೋಳಿ ಯುಗಪುರುಷ ಸಹಯೋಗದೊಂದಿಗೆ ಮುಲ್ಕಿ ಹೋಬಳಿ ಕನ್ನಡ ಸಾಹಿತ್ಯ ಸಮ್ಮೇಳನ – 2017 ಜೂನ್ ತಿಂಗಳ 3ರಂದು ಬೆಳಿಗ್ಗೆ ಗಂಟೆ 9.30ರಿಂದ 4.30ರತನಕ ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಸಾಹಿತಿ ಶಕುಂತಳಾ ಭಟ್ ಹಳೆಯಂಗಡಿ ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದು.
ಸಮ್ಮೇಳನವನ್ನು ಮಾಜಿ ಕಸಾಪ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಅವರು ಉದ್ಘಾಟಿಸಲಿದ್ದಾರೆ. ಶ್ರೀ ಕ್ಷೇತ್ರ ಕಟೀಲಿನ ಕೆ.ಲಕ್ಷ್ಮೀನಾರಾಯಣ ಆಸ್ರಣ್ಣರು ಆಶೀರ್ವಚನ ಹಾಗೂ ಕಿನ್ನಿಗೋಳಿ ಚರ್ಚಿನ ರೇ.ಫಾ. ವಿನ್ಸೆಂಟ್ ಮೊಂತೆರೋ ಶುಭಾಶಂಸನೆಗೈಯಲಿದ್ದಾರೆ.
ದ.ಕ.ಕಸಾಪ ಅಧ್ಯಕ್ಷ ಪ್ರದೀಪಕುಮಾರ ಕಲ್ಕೂರ, ಸಾಹಿತಿ ಗಣೇಶ ಮಲ್ಯ, ಮಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ವಿಜಯಲಕ್ಷ್ಮೀ ಶೆಟ್ಟಿ, ಮಾಜಿ ಅಧ್ಯಕ್ಷರಾದ ಮೋಹನದಾಸ ಸುರತ್ಕಲ್, ಸರ್ವೋತ್ತಮ ಅಂಚನ್, ಮುಲ್ಕಿ ವಿಜಯ ಕಾಲೇಜಿನ ಪ್ರಾಂಶುಪಾಲ ಡಾ. ನಾರಾಯಣ ಪೂಜಾರಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮುಲ್ಕಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎನ್.ಪಿ. ಶೆಟ್ಟಿ ಹಾಗೂ ಯುಗಪುರುಷದ ಪ್ರಧಾನ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ ತಿಳಿಸಿದ್ದಾರೆ.

Comments

comments

Comments are closed.

Read previous post:
Kinnigoli-23051702
ಕಿನ್ನಿಗೋಳಿ ಉಚಿತ ವೈದ್ಯಕೀಯ ಶಿಬಿರ

ಕಿನ್ನಿಗೋಳಿ: ಒತ್ತಡಗಳ ಜೀವನದಿಂದಾಗಿ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷದಿಂದಿರುವುದು ಖೇದಕರ ಸಂಗತಿ. ಆರೋಗ್ಯದ ಬಗ್ಗೆ ತಿಳುವಳಿಕೆ ಅಗತ್ಯ ಎಂದು ಕಿನ್ನಿಗೋಳಿ ಕನ್ಸೆಟ್ಟಾ ಆಸ್ಪತ್ರೆ ಮ್ಯಾನೇಜಿಂಗ್ ಟ್ರಸ್ಟಿ ರೆ.ಫಾ....

Close