ಸೇವಾ ಧ್ಯೇಯ-ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸಬೇಕು

ಕಿನ್ನಿಗೋಳಿ : ಸೇವಾ ಧ್ಯೇಯದಿಂದ ಸಮಾಜದ ಬಡ ವರ್ಗಗಳಿಗೆ ಶೈಕ್ಷಣಿಕ, ಆರೋಗ್ಯ ಹಾಗೂ ಇತರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸಿ ಸಹಾಯ ಹಸ್ತ ನೀಡಿ ತೃಪ್ತಿಮಯ ಜೀವನ ನಮ್ಮದಾಗಿಸಬೇಕು. ಎಂದು ರೋಟರಿ ಮಾಜಿ ಜಿಲ್ಲಾ ಗವರ್ನರ್ ಸೂರ್ಯಪ್ರಕಾಶ್ ಭಟ್ ಹೇಳಿದರು.
ಕಿನ್ನಿಗೋಳಿ ರೋಟರಿ ರಜತ ಭವನದಲ್ಲಿ ಸೋಮವಾರ ಕಿನ್ನಿಗೋಳಿ ರೋಟರಿ ಕ್ಲಬ್‌ನ 2017-18 ನೇ ಸಾಲಿನ ನೂತನ ಅಧ್ಯಕ್ಷೆ ಸೆವ್ರಿನ್ ಲೋಬೋ ಹಾಗೂ ಪದಾಧಿಕಾರಿಗಳ ಪದಗ್ರಹಣ ನಡೆಸಿ ಮಾತನಾಡಿದರು.
ರೋಟರಿ ಜಿಲ್ಲೆ 3181 ರ ವಲಯ 1 ರ ಸಹಾಯಕ ಗವರ್ನರ್ ಜೊಸ್ಸಿ ಪಿಂಟೋ ಕಿನ್ನಿಗೋಳಿ ರೋಟರಿ ಮುಖವಾಣಿ ಸಿಂಚನವನ್ನು ಬಿಡುಗಡೆಗೊಳಿಸಿ ಮಾತನಾಡಿ ರೋಟರಿ ಈ ವರ್ಷ ವಿದ್ಯುತ್ ಇಲ್ಲದ ಮನೆಗಳಿಗೆ ಸೋಲಾರ್ ವಿದ್ಯುತ್ ನೀಡುವ ಯೋಜನೆ ಸಹಿತ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದರು.
ಮುಲ್ಕಿ ಮೂಡಬಿದ್ರೆ ಶಾಸಕ ಕೆ. ಅಭಯಚಂದ್ರ ಜೈನ್, ವಲಯ ಸೇನಾನಿ ಬಾಲಚಂದ್ರ ಸನಿಲ್ ಶುಭ ಹಾರೈಸಿದರು.
ಈ ಸಂದರ್ಭ ಶಾಲಿನಿ ಡಿಸೋಜ, ಪ್ರವೀಣ್ ಸಾಲ್ಯಾನ್, ತೆರೆಜ್ ಸೆಲಿಸ್ತನ್ ಕಾರ್ಡೋಜ, ರಾಜೇಶ್ ಕೆಂಚನಕೆರೆ ಅವರನ್ನು ಕಿನ್ನಿಗೋಳಿ ರೋಟರಿಗೆ ಸೇರ್ಪಡೆಗೊಂಡರು.
ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಕಿನ್ನಿಗೋಳಿ ರೋಟರಿ ನಿರ್ಗಮನ ಅಧ್ಯಕ್ಷ ರಮಾನಂದ ಪೂಜಾರಿ ಸ್ವಾಗತಿಸಿದರು. ನಿರ್ಗಮನ ಕಾರ್ಯದರ್ಶಿ ದೇವಿದಾಸ್ ಶೆಟ್ಟಿ ವರದಿ ವಾಚಿಸಿದರು. ನೂತನ ಕಾರ್ಯದರ್ಶಿ ಸಂತೋಷ್ ಕುಮಾರ್ ವಂದಿಸಿದರು. ಶರತ್ ಶೆಟ್ಟಿ ಹಾಗೂ ಸಾಯಿನಾಥ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Kinnigoli-13061706

Comments

comments

Comments are closed.