ಸಂಸ್ಮರಣೆ , ಸಮ್ಮಾನ , ತಾಳಮದ್ದಳೆ

ಕಿನ್ನಿಗೋಳಿ: ಶೇಣಿ ಗೋಪಾಲಕೃಷ್ಣ ಭಟ್ ಚಾರಿಟೇಬಲ್ ಟ್ರಸ್ಟ್ (ರಿ) ಸುರತ್ಕಲ್ ಶೇಣಿ ಶತಮಾನೋತ್ಸವ ಕಾರ್ಯಕ್ರಮ – 19 ಇದರ ಅಂಗವಾಗಿ ಶೇಣಿ ಸಂಸ್ಮರಣೆ , ಸನ್ಮಾನ, ತಾಳಮದ್ದಳೆ, ಜೂ. 18 ರಂದು ಸಂಜೆ 4ರಿಂದ ಯುಗಪುರುಷ ಸಭಾಭವನದಲ್ಲಿ ನಡೆಯಲಿದ್ದು ಯಕ್ಷಗಾನ ಪ್ರಸಂಗಕರ್ತ ಶಿಮಂತೂರು ನಾರಾಯಣ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಪತ್ರಕರ್ತ ಕಲಾ ವಿಮರ್ಶಕ ಕೆ. ಎಲ್ . ಕುಂಡಂತಾಯ ಸಂಸ್ಮರಣಾ ಭಾಷಣಗೈಯಲಿದ್ದಾರೆ. ಮೂಡಬಿದಿರೆಯ ಉದ್ಯಮಿ ಕೆ. ಶ್ರೀಪತಿ ಭಟ್ ಅವರಿಗೆ ಸನ್ಮಾನ ನಡೆಯಲಿದ್ದು ಕೃಷ್ಣ ಪ್ರಕಾಶ್ ಉಳಿತ್ತಾಯ ಅಭಿನಂದನಾ ಭಾಷಣಗೈಯಲಿದ್ದಾರೆ , ಕಟೀಲು ದೇವಳ ಅರ್ಚಕ ಕೆ. ಲಕ್ಷ್ಮೀನಾರಾಯಣ ಆಸ್ರಣ್ಣ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಕೆ. ಭುವನಾಭಿರಾಮ ಉಡುಪ, ಪಿ. ಸತೀಶ್ ರಾವ್ ಮತ್ತಿತರರು ಭಾಗವಹಿಸಲಿರುವರು ಬಳಿಕ ತಾಳಮದ್ದಳೆ ಕಾರ್ಯಕ್ರಮ ನಡೆಯಲಿದೆ ಎಂದು ಟ್ರಸ್ಟ್‌ನ ಪಿ. ವಿ. ರಾವ್ ಸುರತ್ಕಲ್ ತಿಳಿಸಿದ್ದಾರೆ.

Comments

comments

Comments are closed.

Read previous post:
Kinnigoli-16061704
ಬಾಲಕಿ ಬರೆದ ಪತ್ರಕ್ಕೆ ಸ್ಪಂದಿಸಿದ ಇಲಾಖೆ,

ಕಿನ್ನಿಗೋಳಿ: ರೈಲ್ವೆ ಗೇಟ್ ಬಳಿ ಮೇಲ್ಸೇತುವೆ ನಿರ್ಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಬೇಕು ಎಂದು ಪ್ರಧಾನ ಮಂತ್ರಿಯವರಿಗೆ ಪತ್ರ ಬರೆದು ಒತ್ತಾಯಿಸಿದ ಕಿನ್ನಿಗೋಳಿ ಸಮೀಪದ ಶಿಮಂತೂರು ಶಾರಾದ...

Close