ಸರ್ಕಾರದ ಯೋಜನೆ : ಜನರಲ್ಲಿ ಅರಿವು ಮೂಡಲಿ

ಕಿನ್ನಿಗೋಳಿ: ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವವವರಿಗೆ ಉಜ್ವಲ ಯೋಜನೆಯ ಉಚಿತ ಗ್ಯಾಸ್ ಸಂಪರ್ಕದ ಬಗ್ಗೆ ಗ್ರಾಮೀಣ ಜನರಲ್ಲಿ ಸ್ಪಷ್ಟವಾದ ಅರಿವು ಇಲ್ಲ. ಸಂಸದರ ಸೂಚನೆಯಂತೆ ಮೂಲ್ಕಿ ಹೋಬಳಿಯಲ್ಲಿ ವಿಶೇಷ ಅಭಿಯಾನವನ್ನು ಗ್ರಾಮ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ವಿನೋದ್ ಎಸ್. ಸಾಲ್ಯಾನ್ ಹೇಳಿದರು.
ಪಡುಪಣಂಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳ್ಳಾಯರು ಕೆರೆಕಾಡು ಸರ್ಕಾರಿ ಶಾಲೆಯಲ್ಲಿ ಬುಧವಾರ ಹಮ್ಮಿಕೊಳ್ಳಲಾದ ಕೇಂದ್ರ ಸರ್ಕಾರದ ಯೋಜನೆಯಾದ ಬಿಪಿಎಲ್ ಕಾರ್ಡ್‌ದಾರರಿಗೆ ನೀಡಲ್ಪಡುವ ಉಜ್ವಲ ಯೋಜನೆಯ ಉಚಿತ ಗ್ಯಾಸ್ ಸಂಪರ್ಕದ ವಿಶೇಷ ಮಾಹಿತಿ ಮತ್ತು ಅರ್ಜಿಯನ್ನು ಸಲ್ಲಿಸುವ ವಿಧಾನದ ಬಗ್ಗೆ ಮಾಹಿತಿ ನೀಡಿ ಮಾತನಾಡಿದರು.
ಪ್ರಸ್ತುತ ಯೋಜನೆಯಲ್ಲಿ ಗ್ಯಾಸ್ ಸ್ಟೌ ಹಾಗೂ ಒಂದು ಸಿಲಿಂಡರ್ ಸಂಪೂರ್ಣವಾಗಿ ಉಚಿತವಾಗಿದ್ದು ಫಲಾನುಭವಿಗಳಿಂದ ಯಾವುದೇ ಅಧಿಕೃತವಾದ ಶುಲ್ಕವನ್ನು ಪಡೆಯಲಾಗುವುದಿಲ್ಲ. ಈವರೆಗೆ ಗ್ಯಾಸ್ ಸಂಪರ್ಕ ಇಲ್ಲದ ಬಿಪಿಎಲ್ ಪಡಿತರ ಕುಟುಂಬಗಳು ನೇರವಾಗಿ ಅರ್ಜಿ ಸಲ್ಲಿಸಬಹುದು ಎಂದು ವಿವರಿಸಿದರು.
ಈ ಸಂದರ್ಭ ಪಡುಪಣಂಬೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮೋಹನ್ ದಾಸ್, ಉಪಾಧ್ಯಕ್ಷೆ ಸುರೇಖಾ ಕರುಣಾಕರ್, ದಿವೇಶ್ ದೇವಾಡಿಗ, ರಾಘವೇಂದ್ರ ಬಂಜನ್, ಮಾಧವ ಶೆಟ್ಟಿಗಾರ್ ಮತ್ತಿತರರು ಉಪಸ್ಥಿತರಿದ್ದರು.

Kinnigoli-07071702

Comments

comments

Comments are closed.

Read previous post:
Kinnigoli-07071701
ಕಟೀಲು ಸೀಯಾಳಾಭಿಷೇಕ

ಕಿನ್ನಿಗೋಳಿ: ಪುರಾಣ ಪ್ರಸಿದ್ದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳಕ್ಕೆ ಸಂಬಂಧಪಟ್ಟ ಅತ್ತೂರು ಕೊಡೆತ್ತೂರು ಮಾಗಣೆಯ ಭಕ್ತಾಧಿಗಳಿಂದ ಮಾಗಣೆಯ ಸುಭಿಕ್ಷೆಗಾಗಿ ಮತ್ತು ಅರಿಷ್ಠ ನಿವಾರಣೆಗಾಗಿ ಸಂಪ್ರದಾಯಬದ್ಧ ಧಾರ್ಮಿಕ ವಿಧಿ ವಿಧಾನವಾದ...

Close