ಸಬ್‌ಕಾ ಸಾಥ್ ಸಬ್‌ಕಾ ವಿಕಾಸ್

ಕಿನ್ನಿಗೋಳಿ: ಕೇಂದ್ರದ ಎನ್‌ಡಿಎ ಸರ್ಕಾರದ 2 ವರ್ಷಗಳ ಸಾಧನೆ ಹಾಗೂ ಯೋಜನೆಗಳ ಮಾಹಿತಿ ಕಾರ್ಯಗಾರ ಸಬ್‌ಕಾ ಸಾಥ್ ಸಬ್‌ಕಾ ವಿಕಾಸ್ ಕಾರ್ಯಕ್ರಮವನ್ನು ಕಿನ್ನಿಗೊಳಿ ಬಿಜೆಪಿ ಶಕ್ತಿ ಕೇಂದ್ರದ ಸಹಕಾರದಲ್ಲಿ ಹಳೆಯಂಗಡಿ ಗ್ರಾಮ ಸಮಿತಿಯ ಸಂಯೋಜನೆಯಲ್ಲಿ ಜು. 9ರಂದು ಬೆ. 9.30ಕ್ಕೆ ಹಳೆಯಂಗಡಿಯ ಶ್ರೀ ಜಾರಂದಾಯ ದೈವಸ್ಥಾನದ ಶ್ರೀನಿವಾಸ ಕಲಾ ಮಂದಿರದಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಸ್ವಚ್ಚ ಭಾರತ, ಯುವ ಭಾರತ-ಶ್ರೇಷ್ಟ ಭಾರತ, ಡಿಜಿಟಲ್ ಇಂಡಿಯಾ, ಸ್ಮಾರ್ಟ್ ಆಫ್ ಇಂಡಿಯಾ, ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾ, ಬೇಟಿ ಬಚಾವೋ ಬೇಟಿ ಪಡಾವೋ, ನಮಾಮಿ ಗಂಗೆ, ಪ್ರಧಾನ ಮಂತ್ರಿ ಆವಾಜ್ ಯೋಜನೆ, ಜನಧನ್ ಯೋಜನೆ, ಫಸಲ್ ಬೀಮಾ ಯೋಜನೆ, ದೀನ ದಯಾಲ್ ಅಂತ್ಯೋದಯ ಯೋಜನೆ, ಉಜ್ವಲ್ ಯೋಜನೆ, ಮುದ್ರಾ ಯೋಜನೆ,ಸ್ಮಾರ್ಟ್ ಸಿಟಿ , ಗ್ರಾಮೀಣ ಕೌಶಲ್ಯ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗುವುದು.
ಸಂಸದ ನಳೀನ್ ಕುಮಾರ್ ಕಟೀಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮೂಲ್ಕಿ ಮೂಡಬಿದಿರೆ ಕ್ಷೇತ್ರದ ಅಧ್ಯಕ್ಷ ಈಶ್ವರ್ ಕಟೀಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಬಿಜೆಪಿ ವಕ್ತಾರ ವಿಕಾಸ ಪುತ್ತೂರು ಮತ್ತು ಕಿನ್ನಿಗೋಳಿ ಶಕ್ತಿ ಕೇಂದ್ರದ ಅಧ್ಯಕ್ಷ ಸಂತೋಷ್ ಶೆಟ್ಟಿ ಮಾಹಿತಿಯನ್ನು ನೀಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್ ಕುಮಾರ್ ಬೊಳ್ಳೂರು, ಮಂಗಳೂರು ತಾಲೂಕು ಪಂಚಾಯಿತಿ ಸದಸ್ಯ ಜೀವನ್‌ಪ್ರಕಾಶ್ ಕಾಮೆರೊಟ್ಟು ಮತ್ತಿತರ ಪ್ರಮುಖರು ಭಾಗವಹಿಸಲಿದ್ದಾರೆ. ಎಂದು ಹಳೆಯಂಗಡಿ ಗ್ರಾಮ ಸಮಿತಿಯ ಅಧ್ಯಕ್ಷ ನರೇಂದ್ರ ಪ್ರಭು ಮತ್ತು ಪ್ರಧಾನ ಕಾರ್ಯದರ್ಶಿ ಚಿತ್ರಾ ಸುಕೇಶ್ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments

comments

Comments are closed.

Read previous post:
Kinnigoli-07071706
ಕಿನ್ನಿಗೋಳಿ ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಗಾರ

ಕಿನ್ನಿಗೋಳಿ: ದೈಹಿಕ ಶಿಕ್ಷಕರು ಶಿಸ್ತು ಸಂಯಮಗಳ ಮೂಲಕವಾಗಿ ವಿದ್ಯಾರ್ಥಿಗಳಿಗೆ ಮಾಗದರ್ಶಕರಾಗಿದ್ದಾರೆ. ಇಂತಹ ಕಾರ್ಯಗಾರದ ಮೂಲಕ ಕೌಶಲ್ಯ ಹೆಚ್ಚಾಗಿ ವಿದ್ಯಾರ್ಥಿಗಳಿಗೆ ವರದಾನವಾಗಲಿ ಎಂದು ಮೇರಿವೆಲ್ ಶಾಲಾ ಸಂಚಾಲಕಿ ಭಗಿನಿ ಡಿವಿನಾ...

Close