ಕೌಶಲ್ಯಾಧಾರಿತ ಶಿಕ್ಷಣ ಅಗತ್ಯವಿದೆ

ಕಿನ್ನಿಗೋಳಿ: ಕೇವಲ ಪದವಿ ಮಾಡಿ ಉದ್ಯೋಗ ಅರಸುವ ಬದಲಿಗೆ ಕೌಶಲ್ಯಾಧಾರಿತ ಶಿಕ್ಷಣದ ಮೂಲಕ ಉತ್ತಮ ತರಬೇತಿ ಪಡೆದು ಸ್ವ ಉದ್ಯೋಗದ ಕನಸು ಕಂಡು ಯುವಜನರು ಸ್ವಾವಲಂಬಿಯಾಗಬೇಕು. ಸರಕಾರದ ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆಯಲ್ಲಿ ಹೆಸರನ್ನು ನೋದಾಯಿಸಲು ಗ್ರಾಮ ಪಂಚಾಯಿತಿ ಮೂಲಕ ಅಭಿಯಾನ ಆರಂಭಿಸಿದ್ದು ಮಾಹಿತಿಯನ್ನು ಪಡೆದುಕೊಂಡು ಉದ್ಯೋಗದಾತರಾಗಿರಿ ಎಂದು ಹಳೆಯಂಗಡಿ ಗ್ರಾಮ ಪಂಚಾಯಿತಿಯ ಪಿಡಿಒ ಅಬೂಬಕ್ಕರ್ ಹೇಳಿದರು.
ಹಳೆಯಂಗಡಿ ಗ್ರಾಮ ಪಂಚಾಯಿತಿಯ ರಾಜೀವಗಾಂಧಿ ಸಭಾಭವನದಲ್ಲಿ ಕೌಶಲ್ಯ ಕರ್ನಾಟಕ ಯೋಜನೆಯಡಿಯಲ್ಲಿ ನಿರುದ್ಯೋಗಿ ಯುವಜನರ ನೋಂದಣಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿ ಮಾತನಾಡಿದರು.
ಹಳೆಯಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಲಜಾ ಅಧ್ಯಕ್ಷತೆ ವಹಿಸಿ ಮಾತನಾಡಿ ಗ್ರಾಮದ ಯುವಜನರಿಗೆ ಆರ್ಥಿಕ ಸಂಸ್ಥೆಗಳು ನೆರವು ನೀಡಿದಾಗ ಅವರು ಇನ್ನಿತರರಿಗೆ ಉದ್ಯೋಗವನ್ನು ಕಲ್ಪಿಸುವ ಜವಬ್ದಾರಿಯನ್ನು ವಹಿಸಿಕೊಳ್ಳಲು ಸಾಧ್ಯ ಎಂದರು.
ಈ ಸಂದರ್ಭ ಸುಮಾರು 30 ಮಂದಿ ಹೆಸರನ್ನು ಆನ್‌ಲೈನ್‌ನಲ್ಲಿ ನೋಂದಾಯಿಸಿದರು.
ಹಳೆಯಂಗಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಪದ್ಮಾವತಿ ಶೆಟ್ಟಿ, ಸಾಮಾಜಿಕ ಹೋರಾಟಗಾರ್ತಿ ನಂದಾ ಪಾಯಸ್, ತಾಲೂಕು ಪಂಚಾಯಿತಿ ಸದಸ್ಯ ಜೀವನ್ ಪ್ರಕಾಶ್, ಸಿಬ್ಬಂದಿ ನವಾಜ್ ಮತ್ತಿತರರು ಉಪಸ್ಥಿತರಿದ್ದರು.
ಸಾಗ್ ಅಂಗನವಾಡಿ ಕಾರ್ಯಕರ್ತೆ ರತ್ನಾ ಸ್ವಾಗತಿಸಿದರು, ಯುಬಿಎಂಸಿ ಅಂಗನವಾಡಿ ಕಾರ್ಯಕರ್ತೆ ನಳಿನಾಕ್ಷಿ ವಂದಿಸಿದರು, ಹಳೆಯಂಗಡಿ ಅಂಗನವಾಡಿ ಕಾರ್ಯಕರ್ತೆ ಗೀತಾ ನಿರೂಪಿಸಿದರು.

kINNIGOLI-15071708

Comments

comments

Comments are closed.

Read previous post:
kINNIGOLI-15071701
ಹಳೆಯಂಗಡಿ ಲಯನ್ಸ್ ಕ್ಲಬ್‌ಗೆ ಜಿಲ್ಲಾ ಪ್ರಶಸ್ತಿ

ಕಿನ್ನಿಗೋಳಿ: ಹಳೆಯಂಗಡಿ ಲಯನ್ಸ್ ಕ್ಲಬ್‌ಗೆ ಚಿಕ್ಕಮಗಳೂರು, ಮಡಿಕೇರಿ, ದಕ್ಷಿಣ ಕನ್ನಡ ಹಾಗೂ ಹಾಸನದ ವ್ಯಾಪ್ತಿಯ ಅಂತರ್ ಜಿಲ್ಲಾ ಮಟ್ಟದಲ್ಲಿ ಹತ್ತು ವರ್ಷದ ಅವಽಯ ಕ್ಲಬ್‌ನ ವಿಭಾಗದಲ್ಲಿ ಅತ್ಯುತ್ತಮ ಕ್ಲಬ್...

Close