ಮೆನ್ನಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ವಾರ್ಷಿಕ ಸಭೆ

ಕಿನ್ನಿಗೋಳಿ : ಮೆನ್ನಬೆಟ್ಟು ಹಾಲು ಉತ್ಪಾದಕರ ಸಂಘ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಹಕಾರ ನೀಡುತ್ತಿರುವುದು ಶ್ಲಾಘನೀಯ ಎಂದು ಯುಗಪುರುಷದ ಪ್ರಧಾನ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ ಹೇಳಿದರು.
ಯುಗಪುರುಷ ಸಭಾಭವನದಲ್ಲಿ ಜರಗಿದ ಮೆನ್ನಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ 2017-2018ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಮೆನ್ನಬೆಟ್ಟು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ವಾಣಿ ವೈ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಂಘದ ಉಪಾಧ್ಯಕ್ಷರಾದ ವಿಜಯ ಜೆ. ಶೆಟ್ಟಿ, ನಿರ್ದೇಶಕರುಗಳಾದ ಬೆನೆಡಿಕ್ಟ ರೇಗೋ, ವಿಜಯ ಎಚ್. ಶೆಟ್ಟಿ, ರತ್ನ ಶೆಟ್ಟಿ, ವನಜ ಶೆಟ್ಟಿ, ಶಾರದಾ ಶೆಟ್ಟಿ, ಅಂಬಾಕ್ಷಿ ಅಂಚನ್, ವಾರಿಜ ಜಿ. ಮೂಲ್ಯ, ಚಂದ್ರಾವತಿ, ಶಶಿಕಲಾ, ದ.ಕ.ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಅಬ್ದುಲ್ ಶಮೀರ್ ಉಪಸ್ಥಿತರಿದ್ದರು.
ಕಾರ್ಯದರ್ಶಿ ಸೌಮ್ಯ ವಿ. ಆಚಾರ್ಯ ಸ್ವಾಗತಿಸಿ, ಧನ್ಯವಾದವಿತ್ತರು.
Kinnigoli-30071708

Comments

comments

Comments are closed.

Read previous post:
Kinnigoli30071702
ಕಾವ್ಯ ಮನೆಗೆ ಕೋಟ ಶ್ರೀನಿವಾಸ ಪೂಜಾರಿ ಬೇಟಿ

ಕಿನ್ನಿಗೋಳಿ : ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ನೇಣು ಬಿಗಿದು ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ ಕಟೀಲು ದೇವರ ಗುಡ್ಡೆ ನಿವಾಸಿ ಕಾವ್ಯ ಪೂಜಾರಿ ಅವರ ಮನೆಗೆ ವಿಧಾನ ಪರಿಷತ್ ಸದಸ್ಯ...

Close