ಮುಲ್ಕಿ ಬಿ ಹೋಬಳಿ ಮಟ್ಟದ ಕ್ರೀಡಾ ಕೂಟ

ಕಿನ್ನಿಗೋಳಿ: ಕ್ರೀಡೆಗಳಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗಲಿದ್ದು, ವಿದ್ಯಾರ್ಥಿಗಳು ಪಾಠ ಪ್ರವಚನಗಳಂತೆ ಕ್ರೀಡೆಗಳಿಗೂ ಪ್ರಾಧಾನ್ಯತೆ ನೀಡಬೇಕು ವಿದ್ಯಾರ್ಥಿಗಳು ಮಾನಸಿಕ ಹಾಗೂ ದೈಹಿಕವಾಗಿ ಸದೃಢವಾದಾಗ ಶೈಕ್ಷಣಿಕವಾಗಿ ಸಾಧನೆ ಮಾಡಲು ಸಾಧ್ಯ ಎಂದು ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಿನಿ ಎಸ್. ಗುಜರನ್ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಮಂಗಳೂರು ಉತ್ತರ ವಲಯ ಮತ್ತು ಐಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಜಂಟೀ ಆಶ್ರಯದಲ್ಲಿ ಶುಕ್ರವಾರ ಐಕಳ ಕಮ್ಮಾಜೆ ಮೋರಾರ್ಜಿ ದೇಸಾಯಿ ವಸತಿ ಶಾಲೆಯ ಕ್ರೀಡಾಂಗಣದಲ್ಲಿ ನಡೆದ ಮುಲ್ಕಿ ಬಿ ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟ ೨೦೧೭-೧೮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭ ದೈಹಿಕ ಶಿಕ್ಷಣ ಉಪಾಧ್ಯಕ್ಷ ಹರೀಶ್ಚಂದ್ರ, ಹಿಲರಿ ಮಸ್ಕರೇನ್ಹಸ್, ಸುಧಾಮ ಶೆಟ್ಟಿ, ಕೃಷ್ಣ ಮಾರ್ಲ, ಯೋಗೀಶ್ ಕೋಟ್ಯಾನ್, ದಯಾವತಿ, ಐಕಳ ಹಿ.ಪ್ರಾ.ಶಾಲೆ ಮುಖ್ಯ ಶಿಕ್ಷಕಿ ಜೂಲಿಯೆಟ್, ಶಾಲಾಭಿವೃದ್ಧಿ ಸಂಘದ ಅಧ್ಯಕ್ಷೆ ಕುಶಲ, ಮತ್ತಿತರರು ಉಪಸ್ಥಿತರಿದ್ದರು.
ಐಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಮಾದೇಶ್ ಸ್ವಾಗತಿಸಿದರು. ವೀಡಾ ಮರಿಯ ಕಾರ್ಯಕ್ರಮ ನಿರೂಪಿಸಿದರು.
ವಾಲಿಬಾಲ್, ತ್ರೋಬಾಲ್ ಕಬಡ್ಡಿ ಖೋ ಖೋ ಕ್ರೀಡಾಕೂಟ ನಡೆಯಿತು.

Kinnigoli-11081702

Comments

comments

Comments are closed.

Read previous post:
Kinnigoli-11081701
ಪೊಂಪೈ ಪ.ಪೂ. ಕಾಲೇಜು ಸ್ವರಕ್ಷಾ ಕಾರ್ಯಕ್ರಮ

ಕಿನ್ನಿಗೋಳಿ: ನಮ್ಮ ಜೀವಮಾನದಲ್ಲಿ ಸಮಾಜಕ್ಕೆ ಉಪಯೋಗವಾಗುವಂತ ಏನಾದರೊಂದು ಕೊಡುಗೆ ನೀಡಬೇಕು ಆಗ ಮಾತ್ರ ಜೀವನ ಸಾರ್ಥಕವೆನಿಸುತ್ತದೆ ಎಂದು ಐಕಳ ಪೊಂಪೈ ಶಾಲಾ ಕಾಲೇಜು ಸಮೂಹ ಸಂಸ್ಥೆಗಳ ಸಂಚಾಲಕ ರೆ.ಫಾ....

Close