ಕಟೀಲು ಪರಿಸರ ಸ್ವಚ್ಚತಾ ಕಾರ್ಯಕ್ರಮ

ಕಿನ್ನಿಗೋಳಿ : ಮಂಗಳೂರು ಓಎನ್‌ಜಿಸಿ ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಒಎಂಪಿಲ್) ಸಂಸ್ಥೆಯ ಆಶ್ರಯದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ವಠಾರ ಹಾಗೂ ಆಸುಪಾಸಿನಲ್ಲಿ ಶನಿವಾರ ಪರಿಸರದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಸ್ವಚ್ಚತೆ ಮತ್ತು ಪರಿಸರ ಜಾಗೃತಿ ಬಗ್ಗೆ ಬೀದಿ ನಾಟಕ ಪ್ರದರ್ಶಿಸಲಾಯಿತು.
ಸಂಸ್ಥೆಯ ಕಾರ್ಯ ನಿರ್ವಾಹಕ ಅಧಿಕಾರಿ ಸುಶೀಲ್ ಶೆಣೈ ಮಾತನಾಡಿ ಪರಿಸರ ಸ್ವಚ್ಚತೆಯ ಸೇವಾ ಕಾರ್ಯಗಳು ಸಂಸ್ಥೆಯ ಪುಟ್ಟ ಹೆಜ್ಜೆಯಾಗಿದ್ದು ಮುಂದಿನ ದಿನಗಳಲ್ಲಿ ಸಮಾಜದ ಏಳಿಗೆಗಾಗಿ ಅಭಿವೃದ್ಧಿ ಕಾರ್ಯಗಳಲ್ಲಿ ಸಂಸ್ಥೆ ತೊಡಗಿಸಿಕೊಳ್ಳಲಿದೆ ಎಂದು ಹೇಳಿದರು.
ಸಂಸ್ಥೆಯ ಕಾರ್ಯಕಾರಿ ಅಧಿಕಾರಿ ಸುಜೀರ್ ಸುರೇಶ್ ನಾಯಕ್ ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭಕೋರಿದರು.
ಈ ಸಂಧರ್ಭ ಕಟೀಲು ದೇವಳ ಆಡಳಿತ ಮೊಕ್ತೇಸರ ವಾಸುದೇವ ಆಸ್ರಣ್ಣ , ಅರ್ಚಕರಾದ ಕೆ. ಲಕ್ಷ್ಮೀನಾರಾಯಣ ಆಸ್ರಣ್ಣ, ಹರಿನಾರಾಯಣದಾಸ ಆಸ್ರಣ್ಣ, ಸುಧೀರ್ ಶೆಟ್ಟಿ, ಕಟೀಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಸಂಸ್ಥೆಯ ವತಿಯಿಂದ ದೇವಳಕ್ಕೆ 5 ತ್ಯಾಜ್ಯ ಸಂಗ್ರಹ ತೊಟ್ಟಿಗಳನ್ನು ಹಸ್ತಾಂತರಿಸಲಾಯಿತು. ಸಂಸ್ಥೆಯ 100 ಕ್ಕೂ ಮಿಕ್ಕಿ ಉದ್ಯೋಗಿಗಳು ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸಿದ್ದರು.

Kinnigoli-12081702

 

Comments

comments

Comments are closed.

Read previous post:
Kinnigoli-11081702
ಮುಲ್ಕಿ ಬಿ ಹೋಬಳಿ ಮಟ್ಟದ ಕ್ರೀಡಾ ಕೂಟ

ಕಿನ್ನಿಗೋಳಿ: ಕ್ರೀಡೆಗಳಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗಲಿದ್ದು, ವಿದ್ಯಾರ್ಥಿಗಳು ಪಾಠ ಪ್ರವಚನಗಳಂತೆ ಕ್ರೀಡೆಗಳಿಗೂ ಪ್ರಾಧಾನ್ಯತೆ ನೀಡಬೇಕು ವಿದ್ಯಾರ್ಥಿಗಳು ಮಾನಸಿಕ ಹಾಗೂ ದೈಹಿಕವಾಗಿ ಸದೃಢವಾದಾಗ ಶೈಕ್ಷಣಿಕವಾಗಿ ಸಾಧನೆ ಮಾಡಲು...

Close