ಆಟಿ ಆಚರಣೆಗಳು ನಮ್ಮ ಸಂಸ್ಕೃತಿಯ ಪ್ರತೀಕ

ಕಿನ್ನಿಗೋಳಿ: ತುಳುನಾಡಿನ ಆಟಿ ಆಚರಣೆಗಳು ನಮ್ಮ ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜಾನಾಧಿಕಾರಿ ಉಮ್ಮರಬ್ಬ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಕಿನ್ನಿಗೋಳಿ ವಲಯದ ನಡುಗೋಡು ಒಕ್ದ್ಕೂಟದ ಆಶ್ರಯದಲ್ಲಿ ಕಿನ್ನಿಗೋಳಿ ಯುಗಪುರುಷ ಸಭಾ ಭವನದಲ್ಲಿ ಭಾನುವಾರ ಆಟಿದ ಪೊರ್ಲು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಯುಗಪುರುಷ ಪ್ರಧಾನ ಸಂಪಾದಕ ಕೆ. ಭುವನಾಭಿರಾಮ ಉಡುಪ ಅಧ್ಯಕ್ಷತೆ ವಹಿಸಿದ್ದರು.
ಕಟೀಲು ಪದವಿ ಪೂರ್ವ ಕಾಲೇಜು ಉಪನ್ಯಾಸಕಿ ಭಾರತಿ ಶೆಟ್ಟಿ ತುಳುನಾಡಿನ ಆಟಿ ಆಚರಣೆ ಹಾಗೂ ವೈಜ್ಞಾನಿಕ ಮಹತ್ವದ ಬಗ್ಗೆ ಮಾತನಾಡಿದರು.
ಧ,ಗ್ರಾ.ಯೋ ಮೇಲ್ವಿಚಾರಕ ಯಶೋಧರ್, ನಡುಗೋಡು ಒಕ್ಕೂಟದ ಅಧ್ಯಕ್ಷೆ ಮೀರಾ ಶೆಟ್ಟಿ, ಮಾಜಿ ಉಪಾಧ್ಯಕ್ಷೆ ಸುನಂದ ಕರ್ಕೇರಾ ಅಡ್ದಣಗುತ್ತು ಮತ್ತಿತರರು ಉಪಸ್ಥಿತರಿದ್ದರು.
ವಿಜಯಾ ಸ್ವಾಗತಿಸಿದರು. ಸುರೇಖಾ ಶೆಟ್ಟಿ ವಂದಿಸಿದರು. ಸೇವಾ ಪ್ರತಿನಿಧಿ ಸುರೇಖಾ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಆಟಿ ತಿಂಡಿ ತಿನಸುಗಳ ಊಟ ನಡೆಯಿತು.

Kinnigoli-17081703

Comments

comments

Comments are closed.

Read previous post:
Kinnigoli-17081702
ಸುರಗಿರಿ ಪರಿಸರ ಸ್ವಚ್ಚತಾ ಕಾರ್ಯಕ್ರಮ

ಕಿನ್ನಿಗೋಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಿನ್ನಿಗೋಳಿ ವಲಯದ ಅತ್ತೂರು ಒಕ್ಕೂಟದ ಆಶ್ರಯದಲ್ಲಿ ಭಾನುವಾರ ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಸ್ವಚ್ಚತಾ ಅಭಿಯಾನದ ಕಾರ್ಯಕ್ರಮ ಭಾನುವಾರ ನಡೆಯಿತು....

Close