ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಬೇಕು

ಕಿನ್ನಿಗೋಳಿ : ಮಕ್ಕಳಿಗೆ ಎಳವೆಯಲ್ಲಿಯೇ ಮೌಲ್ಯಾಧಾರಿತ ಶಿಕ್ಷಣ, ದೇಶಪ್ರೇಮ, ಆದರ್ಶ, ಪ್ರೀತಿ ಸೌಹಾರ್ದತೆ, ಸೇವಾ ಕಾರ್ಯಗಳ ಬಗ್ಗೆ ಅರಿವು ಮೂಡಿಸಿದಾಗ ಭವಿಷ್ಯದಲ್ಲಿ ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕು ಎಂದು ಕಿನ್ನಿಗೋಳಿ ರೋಟರಿ ಕ್ಲಬ್ ಅಧ್ಯಕ್ಷೆ ಸೆವರಿನ್ ಲೋಬೋ ಹೇಳಿದರು.
ಕಿನ್ನಿಗೋಳಿ ರೋಟರಿ, ಇನ್ನರ್ ವೀಲ್ ಕ್ಲಬ್‌ಗಳ ಸಹಯೋಗದೊಂದಿಗೆ ಬಲ್ಲಾಣ ಪ್ರೀತಿ ಸದನದ ಮಕ್ಕಳೊಂದಿಗೆ ಮಂಗಳವಾರ ವಾರ ನಡೆದ ಸ್ವಾತಂತ್ರ್ಯೋತ್ಸವ ಆಚರಣೆ ಸಂದರ್ಭ ಮಾತನಾಡಿದರು.
ಈ ಸಂದರ್ಭ ಸಮಾಜ ಸೇವಕ ಕೃಷ್ಣ ಅವರನ್ನು ಸನ್ಮಾನಿಸಲಾಯಿತು.
ಪ್ರೀತಿ ಸದನದ ಮಕ್ಕಳಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಲಾಯಿತು.
ರೋಟರಿ ಸಹಾಯಕ ಗವರ್ನರ್ ಜೊಸ್ಸಿ ಪಿಂಟೊ, ಬಲ್ಲಾಣ ಪ್ರೀತಿ ಸದನದ ಮುಖ್ಯಸ್ಥೆ ಭಗಿನಿ ಮಾರ್ಗರೆಟ್, ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಿಲೋಮಿನಾ ಸಿಕ್ವೇರಾ, ಕಿನ್ನಿಗೋಳಿ ರೋಟರಿ ಕಾರ್ಯದರ್ಶಿ ಸಂತೋಷ್ ಕುಮಾರ್, ರೋಟರಿ ಮಾಜಿ ಅಧ್ಯಕ್ಷ ರಮಾನಂದ ಪೂಜಾರಿ, ಇನ್ನರ್ ವೀಲ್ ಅಧ್ಯಕ್ಷೆ ರಾದಾ ಶೆಣೈ, ಕಾರ್ಯದರ್ಶಿ ಶಾರದ ಮತ್ತಿತರರು ಉಪಸ್ಥಿತರಿದ್ದರು.
ಹೆರಿಕ್ ಪಾಯಸ್ ಕಾರ್ಯಕ್ರಮ ನಿರೂಪಿಸಿದರು.

Kinnigoli-18081704

Comments

comments

Comments are closed.

Read previous post:
Kinnigoli-18081703
ಅತ್ತೂರು ಕಾಪಿಕಾಡು ಧಾರ್ಮಿಕ ಸಭೆ

ಕಿನ್ನಿಗೋಳಿ: ಮಕ್ಕಳಿಗೆ ಸಂಸ್ಕೃತಿ ಸಂಸ್ಕಾರ ಹಾಗೂ ಮೌಲ್ಯಯುತ ಶಿಕ್ಷಣವನ್ನು ನೀಡಿ ಭವಿಷ್ಯದಲ್ಲಿ ಉತ್ತಮ ಜೀವನ ಕಂಡು ಕೊಳ್ಳಲು ಸಹಕರಿಸಬೇಕು. ಎಂದು ದ. ಕ. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ...

Close