ಪುನರೂರು ಪ್ರತಿಭಾ ಕಾರಂಜಿ

ಕಿನ್ನಿಗೋಳಿ: ಪಾಠ, ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಸಹಕಾರಿ. ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಪೂರಕವಾಗಲಿ ಎಂದು ದ.ಕ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ ಹೇಳಿದರು.
ಪುನರೂರು ಭಾರತಮಾತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪದ್ಮನೂರು ಕ್ಲಸ್ಟರ್ ಮಟ್ಟದ ಕಿರಿಯ ವಿಭಾಗದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಿನ್ನಿಗೋಳಿ ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್ ಕುಮಾರ್ ಬೊಳ್ಳೂರು ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರಾಥಮಿಕ ಶಿಕ್ಷಣ ಭವಿಷ್ಯದ ಮೆಟ್ಟಲು ಎಂದು ಹೇಳಿದರು.
ಮಂಗಳೂರು ತಾ. ಪಂ. ಸದಸ್ಯ ದಿವಾಕರ ಕರ್ಕೇರಾ, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು, ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಸದಸ್ಯ ರವೀಂದ್ರ ದೇವಾಡಿಗ, ಉದ್ಯಮಿ ಸುರೇಶ್ ರಾವ್ ಪುನರೂರು, ಶ್ರೀಕಾಂತ್ ಶೆಟ್ಟಿ ಕೆಂಚನಕೆರೆ ಮತ್ತಿತರರು ಉಪಸ್ಥಿತರಿದ್ದರು.
ಸಿಆರ್‌ಪಿ ರಾಮದಾಸ್ ಭಟ್ ಪ್ರಸ್ತಾವನೆಗೈದರು. ಮುಖ್ಯ ಶಿಕ್ಷಕ ಕೃಷ್ಣಮೂರ್ತಿರಾವ್ ಸ್ವಾಗತಿಸಿದರು. ಉಷಾ ಕೆ. ವಂದಿಸಿದರು. ಸಹ ಶಿಕ್ಷಕ ಕೃಷ್ಣ ಬಿ ಕಾರ್ಯಕ್ರಮ ನಿರೂಪಿಸಿದರು.

Kinnigoli-31081708

Comments

comments

Comments are closed.

Read previous post:
Kinnigoli-31081707
ಮೆನ್ನಬೆಟ್ಟು ಗ್ರಾಮ ಪಂಚಾಯತ್ ಜಮಾಬಂದಿ

ಕಿನ್ನಿಗೋಳಿ: ಗ್ರಾಮಸ್ಥರ ಸಹಕಾರ ಗ್ರಾಮದ ಅಭಿವೃದ್ಧಿಯಲ್ಲಿ ಅತೀ ಅಗತ್ಯ ಹಾಗೂ ಪಂಚಾಯಿತಿ ಆಡಳಿತ ಅದಕ್ಕೆ ಪೂರಕವಾಗಿರಬೇಕು ಎಂದು ನೋಡೆಲ್ ಅಧಿಕಾರಿ ಸುಂದರ್ ನಾಯ್ಕ್ ಹೇಳಿದರು. ಮೆನ್ನಬೆಟ್ಟು ಗ್ರಾಮ ಪಂಚಾಯಿತಿ...

Close