ಕಟೀಲು ಯಾತ್ರಿ ನಿವಾಸ ಉದ್ಘಾಟನೆ

ಕಿನ್ನಿಗೋಳಿ : ಕಟೀಲಿಗೆ ಬರುವ ಭಕ್ತಾದಿಗಳಿಗೆ ಅನುಕೂಲವಾಗುವಂತೆ ಸರಕಾರದ ಮಟ್ಟದಲ್ಲಿ ಇನ್ನೂ ಹಲವಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಶ್ರಮಿಸಲಾಗುವುದು. ಕ್ಷೇತ್ರದಲ್ಲಿ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಲಾಗುವುದು ಎಂದು ಮುಲ್ಕಿ ಮೂಡಬಿದಿರೆ ಶಾಸಕ ಕೆ. ಅಭಯಚಂದ್ರ ಜೈನ್ ಹೇಳಿದರು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ಪ್ರವಾಸೋದ್ಯಮ ಇಲಾಖೆಯ ಒಂದು ಕೋಟಿ ರೂಪಾಯಿ ಹಾಗೂ ದೇವಳದ 15ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ೬ಕೊಠಡಿಗಳ ನೂತನ ಯಾತ್ರಿ ನಿವಾಸವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು.
ದೇವಳದ ಆಡಳಿತ ಸಮಿತಿ ಅಧ್ಯಕ್ಷ, ಮೊಕ್ತೇಸರ, ಕೊಡೆತ್ತೂರುಗುತ್ತು ಸನತ್‌ಕುಮಾರ ಶೆಟ್ಟಿ ಮಾತನಾಡಿ ಯಾತ್ರಿನಿವಾಸದಲ್ಲಿ ದೇವಳದ ಅನುದಾನದಲ್ಲಿ ಇನ್ನಷ್ಟು ಕೊಠಡಿಗಳನ್ನು ಮಾಡುವ ಬಗ್ಗೆ ಪ್ರಸ್ತಾವನೆ ಇದೆ ಎಂದರು.
ಈ ಸಂದರ್ಭ ದೇವಳದ ಮೊಕ್ತೇಸರ ಹಾಗೂ ಅರ್ಚಕ ವಾಸುದೇವ ಆಸ್ರಣ್ಣ, ಅರ್ಚಕರಾದ ಅನಂತಪದ್ಮನಾಭ ಆಸ್ರಣ್ಣ, ದ.ಕ.ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಂಗಳೂರು ತಾಲೂಕು ಪಂಚಾಯಿತಿ ಸದಸ್ಯ ಸುಕುಮಾರ ಸನಿಲ್, ಕಟೀಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಪೂಜಾರ್ತಿ, ಉಪಾಧ್ಯಕ್ಷ ಕಿರಣ್‌ಕುಮಾರ ಶೆಟ್ಟಿ, ಕೊಡೆತ್ತೂರುಗುತ್ತು ಸುಧೀರ ಶೆಟ್ಟಿ, ಕಾಂಗ್ರೇಸ್ ಮುಖಂಡ ಮಿಥುನ್ ರೈ, ಬಜಪೆ ವ್ಯವಸಾಯ ಬ್ಯಾಂಕ್‌ನ ವೈ. ಮೋನಪ್ಪ ಶೆಟ್ಟಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ತಿಮ್ಮಪ್ಪ ಕೋಟ್ಯಾನ್, ಕಟೀಲು ದೇವಳದ ಪ್ರಬಂಧಕ ತಾರಾನಾಥ ಶೆಟ್ಟಿ, ನಿರ್ಮಿತಿ ಕೇಂದ್ರದ ರಾಜೇಂದ್ರ ಕಲ್ಬಾವಿ, ಗುತ್ತಿಗೆದಾರ ರಾಘು ಸುವರ್ಣ, ಕಟೀಲು ದೇವಳ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಪದ್ಮನಾಭ ಮರಾಠೆ, ಎಮ್. ಬಾಲಕೃಷ್ಣ ಶೆಟ್ಟಿ, ವನಿತಾ ಜೋಷಿ, ಸೋಮಪ್ಪ ಅಲಂಗಾರ್, ಸರೋಜಿನಿ ಮತ್ತಿತರರು ಉಪಸ್ಥಿತರಿದ್ದರು.
ಅರ್ಚಕ ಶ್ರೀಹರಿನಾರಾಯಣದಾಸ ಆಸ್ರಣ್ಣ ಕಾರ್ಯಕ್ರಮ ನಿರೂಪಿಸಿದರು.

Kinnigoli-21071706 Kinnigoli-21071707

Comments

comments

Comments are closed.

Read previous post:
Kinnigoli-21071705
ಕಟೀಲು: ಶ್ರೀಧರ ರಾವ್ ಶ್ರದ್ಧಾಂಜಲಿ ಸಭೆ

ಕಿನ್ನಿಗೋಳಿ: ಯಕ್ಷಗಾನ ಕ್ಷೇತ್ರದಲ್ಲಿ ಹೊಸತನವನ್ನು ಅವಿಷ್ಕರಿಸಿ ಕಲಾವಿದರಿಗೆ ಪೂರಕವಾಗಿ ಪರಂಪರೆಯನ್ನು ಉಳಿಸಿಕೊಂಡು ಬಂದಿದ್ದು ಇಂದು ನಮ್ಮನ್ನಗಲಿದ ಕುಬಣೂರು ಶ್ರೀಧರ ರಾಯರ ಕಾರ್ಯ ಶ್ಲಾಘನೀಯ ಎಂದು ಯಕ್ಷಗಾನ ವಿದ್ವಾಂಸ ಡಾ....

Close