ಕಟೀಲು : ಕಲಾ ಸಂಘ

ಕಟೀಲು : ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜಿನ ಕಲಾ ಸಂಘದ ಅಧೀನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರು ಬೆಸೆಂಟ್ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಲಕ್ಷ್ಮೀನಾರಾಯಣ ಭಟ್ ರವರು ಜಿಎಸ್‌ಟಿ ಬಗ್ಗೆ ಗೊಂದಲ ಬೇಡ. ಅದು ದೇಶದ ಆರ್ಥಿಕ ಸುಧಾರಣೆಗೆ ಪೂರಕವಾಗಿದೆ ಎಂದು ವಿದ್ಯಾರ್ಥಿಗಳಲ್ಲಿ ಈ ಬಗ್ಗೆ ಇದ್ದ ಹಲವು ಪ್ರಶ್ನೆಗಳಿಗೆ ಉತ್ತರಿಸುತ್ತಾ ಹೊಸ ಹೊಸ ಆರ್ಥಿಕ ಚಿಂತನೆಗೆ ವಿದ್ಯಾರ್ಥಿಗಳು ತೆರೆದುಕೊಂಡು ತಮ್ಮ ಪರಿಸರದ ಜನರಿಗೆ ಈ ಬಗ್ಗೆ ಮಾಹಿತಿ ನೀಡಬೇಕು ಎಂದರು.
ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ. ಎಂ. ಬಾಲಕೃಷ್ಣ ಶೆಟ್ಟಿ, ಕಲಾಸಂಘದ ಸಂಯೋಜಕಿ ಪ್ರೊ. ವನಿತ ಉಪಸ್ಥಿತರಿದ್ದರು. ಉಪನ್ಯಾಸಕಿ ಕುಮಾರಿ ಸೌಮ್ಯ ಸ್ವಾಗತಿಸಿದರು. ವಿದ್ಯಾರ್ಥಿನಿ ರಕ್ಷಾಂದ ಧನ್ಯವಾದ ಸಮರ್ಪಿಸಿದರು. ಕುಮಾರಿ ರಂಜನಿ ಕಾರ್ಯಕ್ರಮ ನಿರ್ವಹಿಸಿದರು.

Kinnigoli-26091706

Comments

comments

Comments are closed.

Read previous post:
Kinnigoli-26091705
ಕಟೀಲು – ಎನ್.ಎಸ್.ಎಸ್. ದಿನಾಚರಣೆ

ಕಟೀಲು : ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಎನ್.ಎಸ್.ಎಸ್. ದಿನಾಚರಣೆ ಆಚರಿಸಲಾಯಿತು. ಕರ್ನಾಟಕ ಗ್ರಾಮೀಣ ವಿಕಾಸ ಬ್ಯಾಂಕಿನ ಪ್ರಬಂಧಕರಾದ...

Close