ಮುಲ್ಕಿ: ಬಿ ಹೋಬಳಿ ಮಟ್ಟದ ಕ್ರೀಡಾ ಕೂಟ

ಮುಲ್ಕಿ:  ಬಿ ಹೋಬಳಿ ಮಟ್ಟದ ಕ್ರೀಡಾ ಕೂಟವು ಮುಲ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.
ಐಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮಂಗಳೂರು ಉತ್ತರ ವಲಯ ಇದರ ಜಂಟಿ ಆಶ್ರಯದಲ್ಲಿ ಜರಗಿದ ಕ್ರೀಡಾ ಕೂಟವನ್ನು ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್ ಬೊಳ್ಳೂರು ಉದ್ಘಾಟಿಸಿ ಸರಕಾರದಿಂದ ಕ್ರೀಡೆಗೆ ಸಾಕಷ್ಟು ಉತ್ತೇಜನ ಸಿಗುತ್ತಿದೆ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಹೆಚ್ಚಿನ ಮಟ್ಟದಲ್ಲಿ ಭಾಗವಹಿಸಿ ಕ್ರೀಡೆಯಲ್ಲಿ ಉತ್ತಮ ಸಾಧನೆ ತೋರಲು ಯತ್ನಿಸಬೇಕು ಎಂದು ಹೇಳಿದರು.
ಮಂಗಳೂರು ತಾಲೂಕು ಪಂಚಾಯಿತಿ ಸದಸ್ಯೆ ರಶ್ಮಿ ಆಚಾರ್ಯ, ಐಕಳ ಗ್ರಾಮ ಪಂಚಾಯಿತಿ ಸದಸ್ಯೆ ದಯಾವತಿ, ಎಸ್ ಡಿ ಎಮ್ ಸಿ ಅಧ್ಯಕ್ಷೆ ಕುಶಾಲ, ಶಿಕ್ಷಕರ ಸಂಘದ ಉಪಾಧ್ಯಕ್ಷ ಹರೀಶ್ಚಂದ್ರ, ಹಿಲರಿ ಮಸ್ಕರೇನಸ್, ದೈಹಿಕ ಪರಿವೀಕ್ಷಕಿ ಆಶಾ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.
ಐಕಳ ಸರಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಜೂಲಿಯೆಟ್ ಸ್ವಾಗತಿಸಿದರು ವೀಡಾ ಮರಿಯಾ ವಂದಿಸಿದರು ಫೆಲ್ಸಿ ಕಾರ್ಯಕ್ರಮ ನಿರೂಪಿಸಿದರು.

Mulki-29091701 Mulki-29091702 Mulki-29091703 Mulki-29091704 Mulki-29091705 Mulki-29091706

Comments

comments

Comments are closed.