ತೋಕೂರು : ಉಚಿತ ದಂತ ಚಿಕಿತ್ಸಾ ಶಿಬಿರ

ಕಿನ್ನಿಗೋಳಿ : ಬಡವರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಸಂಘ ಸಂಸ್ಥೆಗಳು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಗ್ರಾಮೀಣ ಭಾಗದ ಬಡ ಜನರಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಶ್ರಮಿಸಬೇಕು ಎಂದು ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಅಧ್ಯಕ್ಷ ನಿಡ್ಡೋಡಿ ಚಾವಡಿ ಮನೆ ಜಗನ್ನಾಥ ಶೆಟ್ಟಿ ಹೇಳಿದರು.
ಮಂಗಳೂರಿನ ಎ.ಬಿ.ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯ, ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಹಾಗೂ ಪಡುಪಣಂಬೂರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದಲ್ಲಿ ತೋಕೂರು ಸರಕಾರಿ ಹಿರಿಯ ಪ್ರಾಥಮಿಕ ಹಿಂದುಸ್ಥಾನಿ ಶಾಲೆಯಲ್ಲಿ ಭಾನುವಾರ ನಡೆದ ಉಚಿತ ದಂತ ಚಿಕಿತ್ಸಾ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪಡುಪಣಂಬೂರು ಗ್ರಾ. ಪಂ. ಅಧ್ಯಕ್ಷ ಮೋಹನ್ ದಾಸ್ ಶಿಬಿರವನ್ನು ಉದ್ಘಾಟಿಸಿದರು. ಎ.ಬಿ.ಶೆಟ್ಟಿ ದಂತ ಮಹಾವಿದ್ಯಾಲಯದ ಮುಖ್ಯಸ್ಥೆ ಡಾ. ಶಿಲ್ಪಾ ದಂತ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿದರು.
ಮೂಲ್ಕಿ ವಲಯದ ಶ್ರೀ ಕ್ಷೇತ್ರ ಗ್ರಾಮೀಣಾಭಿವೃದ್ಧಿ ಯೋಜನೆ ಪಡುಪಣಂಬೂರು ಒಕ್ಕೂಟದ ಅಧ್ಯಕ್ಷ ಕರುಣಾಕರ ಶೆಟ್ಟಿಗಾರ್, ಶ್ರೀ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ರತನ್ ಶೆಟ್ಟಿ, ಪಡುಪಣಂಬೂರು ಗ್ರಾ. ಪಂ. ಸದಸ್ಯ ಸಂತೋಷ್ ಕುಮಾರ್ ಉಪಸ್ಥಿತರಿದ್ದರು.
ಪಡುಪಣಂಬೂರು ಧ.ಗ್ರಾ.ಯೋಜನೆಯ ಸೇವಾ ಪ್ರತಿನಿಧಿ ಸವಿತಾ ಶರತ್ ವಂದಿಸಿದರು. ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು,
ಒಟ್ಟು 96 ಮಂದಿ ಶಿಬಿರದ ಪ್ರಯೋಜನ ಪಡೆದರು.

Thokur-15101701

Comments

comments

Comments are closed.

Read previous post:
Kinnigoli-15101725
ದೇವರ ಪವಿತ್ರ ತಾಣ ದೇವಾಲಯ

ಕಿನ್ನಿಗೋಳಿ : ದೇವರು ನೆಲೆಸಿರುವ ದೇವಾಲಯಗಳು ದೇವರು ಮತ್ತು ಮನುಷ್ಯರ ನಡುವೆ ನಿಕಟ ಸಂಬಂಧ, ಸಂಪರ್ಕ ಕಲ್ಪಿಸುವ ಪವಿತ್ರ ತಾಣ. ಜಾತಿ, ಮತ, ಧರ್ಮಗಳ ಬೇಧವಿಲ್ಲದೆ ಬೆರೆಯುವ ಮೂಲಕ...

Close