ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪಾಠವಿರಬೇಕು

ಕಿನ್ನಿಗೋಳಿ: ಮಕ್ಕಳಲ್ಲಿ ಉತ್ತಮ ಬಾಂಧವ್ಯತೆಯ ವಾತಾವರಣ ಮೂಡಲು ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಬಗ್ಗೆ ಪಾಠ ಇರಬೇಕು ಹಾಗಾದಾಗ ಮಾತ್ರ ಭವಿಷ್ಯದಲ್ಲಿ ಉತ್ತಮ ಧ್ಯೇಯ ದೋರಣೆಯ ಸಮಾಜ ಕಟ್ಟಲು ಸಾಧ್ಯ ಎಂದು ಬೈಕಂಪಾಡಿ ರೋಟರಿ ಕ್ಲಬ್ ಅಧ್ಯಕ್ಷ ಜಯಕುಮಾರ್ ಹೇಳಿದರು.
ಪಡುಪಣಂಬೂರು ಗ್ರಾಮ ಪಂಚಾಯತ್ ಮತ್ತು ಬೈಕಂಪಾಡಿ ರೋಟರಿ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ತೋಕೂರು ಶ್ರೀ ಸುಬ್ರಹ್ಮಣ್ಯ ಹಿ.ಪ್ರಾ.ಶಾಲೆಯಲ್ಲಿ ಸಮವಸ್ತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪಡುಪಣಂಬೂರು ಪಂಚಾಯಿತಿ ಅಧ್ಯಕ್ಷ ಮೋಹನ್ ದಾಸ್ ಅಧ್ಯಕ್ಷತೆ ವಹಿಸಿ ಮಾತನಾಡಿ ಸರಕಾರಿ ಶಾಲೆಗಳಿಗೆ ಸೇವಾ ಸಂಘ ಸಂಸ್ಥೆಗಳು ಮುಕ್ತವಾಗಿ ನೆರವು ನೀಡುವ ಕಾರ್ಯಕ್ರಮ ಹಮ್ಮಿಕೊಂಡಾಗ ಸಮಾಜಮುಖಿ ಚಿಂತನೆ ಫಲಪ್ರದವಾಗುವುದು ಎಂದು ಹೇಳಿದರು.
ಪಡುಪಣಂಬೂರು ಪಂಚಾಯಿತಿ ಸದಸ್ಯೆ ಸಂಪಾವತಿ, ಬೈಕಂಪಾಡಿ ರೋಟರಿ ಕ್ಲಬ್‌ನ ಸದಸ್ಯರಾದ ನವೀನ್ ಕುಮಾರ್, ಭರತ್ ಶೆಟ್ಟಿ, ಸುಬೋಧ್ ಕುಮಾರ್ ದಾಸ್, ದೇವೇಂದ್ರ ಕೆ. ಶೆಟ್ಟಿ, ಶ್ರೀಕಾಂತ್ ಶೆಟ್ಟಿ, ಮಹೇಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಗೌರಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Kinnigoli-171021703

Comments

comments

Comments are closed.

Read previous post:
Kinnigoli-171021702
ಜನರಲ್ ಸೆಕ್ರೆಟರಿ ಮೂಲ್ಕಿ ಕಛೇರಿಗೆ ಭೇಟಿ

ಕಿನ್ನಿಗೋಳಿ: ಎಐಸಿಸಿ ಜನರಲ್ ಸೆಕ್ರೆಟರಿ ಐವನ್ ನಿಗ್ಲಿ ಮೂಲ್ಕಿ ಬ್ಲಾಕ್ ಕಾಂಗ್ರೇಸ್ ಕಛೇರಿಗೆ ಭೇಟಿ ನೀಡಿದರು. ಸರಕಾರದ ಸವಲತ್ತು ಯೋಜನೆಗಳನ್ನು ಜನರಿಗೆ ಮನದಟ್ಟು ಮಾಡುವುದು ಹಾಗೂ ಮುಂದಿನ...

Close