ರಾಷ್ಟ್ರೀಯ ಸೇವಾ ಯೋಜನೆ ಸಮಾರೋಪ

ಕಿನ್ನಿಗೋಳಿ: ವಿದ್ಯಾರ್ಥಿಗಳಿಗೆ ಗ್ರಾಮೀಣ ಭಾಗದ ಜನರ ಬಗ್ಗೆಯ ಅರಿವು ಇರಬೇಕು ಎನ್. ಎಸ್. ಎಸ್ ನಂತಹ ಶಿಬಿರಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ, ನಾಯಕತ್ವ ಹಾಗೂ ಸರ್ವತೋಮುಖ ಪ್ರಗತಿಗೆ ಪೂರಕವಾಗಿದೆ. ಎಂದು ಕಟೀಲು ಶ್ರೀ ದುರ್ಗಾಪರಮೇಶ್ವರೀ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಶಂಕರನಾರಾಯಣ ನಾಯಕ್ ಹೇಳಿದರು.
ಕೆಮ್ರಾಲ್ ಸರಕಾರಿ ಪ್ರೌಢ ಶಾಲೆಯಲ್ಲಿ ಮೂಲ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದ ಸಮಾರೋಪ ಭಾಷಣದಲ್ಲಿ ಮಾತನಾಡಿದರು.
ಮೂಲ್ಕಿ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಿನ್ಸಿಪಾಲ್ ವಿಷ್ಣುಮೂರ್ತಿ ಅಧ್ಯಕ್ಷತೆ ವಹಿಸಿದ್ದರು.
ದ.ಕ. ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್‌ಕುಮಾರ್ ಬೊಳ್ಳೂರು, ಮುಲ್ಕಿ ನಗರ ಪಂಚಾಯತ್ ಸದಸ್ಯ ಪುತ್ತುಬಾವ , ನ್ಯಾಯವಾದಿ ಡೇನಿಯಲ್ ದೇವರಾಜ್, ಹಳೆಯಂಗಡಿ ಪಿ. ಸಿ. ಎ ಬ್ಯಾಂಕ್ ನಿರ್ದೇಶಕ ಜಯರಾಮ ಆಚಾರ್ಯ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮುರಳೀಧರ ಭಂಡಾರಿ, ಪಂಜಿನಡ್ಕ ಶಾಲೆಯ ಸಹ ಶಿಕ್ಷಕ ನೋನಯ್ಯ ರೆಂಜಾಳ, ಮೂಲ್ಕಿ ಫೆಂಡ್ಸ್ ಕ್ಲಬ್‌ನ ಜಯ ಸಿ. ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಶಿಬಿರಾಧಿಕಾರಿ ಚಂದ್ರಶೇಖರ್ ಸ್ವಾಗತಿಸಿದರು. ಡಾ. ಸುಜತಾ ವಂದಿಸಿದರು.

Kinnigoli-19101705

Comments

comments

Comments are closed.

Read previous post:
Kinnigoli-19101704
ಯೋಗಾಸನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಕಿನ್ನಿಗೋಳಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಹಿರಿಯ ಪ್ರಾಥಮಿಕ ಶಾಲೆಯ ಶ್ರೇಯಾ ಹಾಗೂ ಪ್ರೌಢಶಾಲೆಯ ನಂದಿನೀ ಉಪ್ಪಿನಂಗಡಿಯಲ್ಲಿ ನಡೆದ ವಿಭಾಗ ಮಟ್ಟದಲ್ಲಿ ಆಯ್ಕೆಯಾಗಿ ಗದಗದಲ್ಲಿ ನಡೆಯಲಿರುವ ರಾಜ್ಯಮಟ್ಟದ ಯೋಗಾಸನ...

Close