ಮೂಲ್ಕಿ ಹೊಸ ಅಂಗಣ ಮಾಸ ಪತ್ರಿಕೆ ಸನ್ಮಾನ

ಮೂಲ್ಕಿ: ಸಮಾಜ ಸೇವೆಯಲ್ಲಿ ಹೊಗಳಿಕೆ ಮತ್ತು ತೆಗಳಿಕೆ ಸಾಮಾನ್ಯವಾಗಿದ್ದು ಅದನ್ನು ಕಡೆಗಣಿಸಿ ನಿಸ್ವಾರ್ಥವಾದ ಸೇವೆಯನ್ನು ಮಾಡಿದಲ್ಲಿ ಮನಸ್ಸಿಗೆ ತೃಪ್ತಿ ಸಿಗಲು ಸಾಧ್ಯ, ಸಮಾಜದಲ್ಲಿ ಶ್ರಮ ಜೀವನ ಮಾಡುವವರನ್ನು ಗುರುತಿಸುವಂತಹ ಕಾರ್ಯವನ್ನು ಮಾಡಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಹೇಳಿದರು.
ಮೂಲ್ಕಿ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ಶುಕ್ರವಾರ ಜರಗಿದ ಹೊಸ ಅಂಗಣದ ತಿಂಗಳ ಬೆಳಕು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮೂಲ್ಕಿ ಕೆ.ಎಸ್.ರಾವ್ ನಗರದ ಶ್ರೀ ಕೋರ್ದಬ್ಬು ದೈವಸ್ಥಾನದ ಗುರಿಕಾರ ಸುರೇಶ್ ಕೋಟ್ಯಾನ್ ಚಿತ್ರಾಪು ಅವರನ್ನು ಸನ್ಮಾನಿಸಲಾಯಿತು.
ಮುಂಬೈ ಕನ್ನಡ ಸಂಘದ ಸಾಹಿತಿ ಹಾಗೂ ಸಂಘಟಕ ಕೆ.ಎಮ್.ಕೋಟ್ಯಾನ್ ಚಿತ್ರಾಪು, ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಳದ ಆಡಳಿತ ಹಾಗೂ ಅನುವಂಶಿಕ ಮೊಕ್ತೇಸರ ಎನ್.ಎಸ್.ಮನೋಹರ ಶೆಟ್ಟಿ, ಕನ್ನಡ ಸಾಹಿತ್ಯ ಪರಿಷತ್ತಿನ ಮೂಲ್ಕಿ ಹೋಬಳಿ ಅಧ್ಯಕ್ಷ ಎನ್.ಪಿ.ಶೆಟ್ಟಿ, ಮೂಲ್ಕಿ ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ರಾಘು ಸುವರ್ಣ, ಉಪಾಧ್ಯಕ್ಷ ರಮೇಶ್ ಕೊಕ್ಕರಕಲ್, ಮೂಲ್ಕಿ ನಗರ ಪಂಚಾಯಿತಿ ಸದಸ್ಯ ಶೈಲೇಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಹೊಸ ಅಂಗಣ ಪತ್ರಿಕೆಯ ಸಂಪಾದಕ ಹರಿಶ್ಚಂದ್ರ ಪಿ.ಸಾಲ್ಯಾನ್ ಸ್ವಾಗತಿಸಿದರು.ಹೆಜಮಾಡಿ ಗ್ರಾಪಂ ಮಾಜಿ ಅಧ್ಯಕ್ಷ ವಾಮನ ಕೋಟ್ಯಾನ್ ನಡಿಕುದ್ರು ವಂದಿಸಿದರು, ರವಿಚಂದ್ರ ನಿರೂಪಿಸಿದರು.

Mulki-28101701

Comments

comments

Comments are closed.

Read previous post:
Sasihithlu28101701
ಸಸಿಹಿತ್ಲು ಹೊಸಕ್ಕಿ ನಡಾವಳಿ ಮಹೋತ್ಸವ

ಸಸಿಹಿತ್ಲು : ಸಸಿಹಿತ್ಲುವಿನ ಶ್ರೀ ಭಗವತಿ ಕ್ಷೇತ್ರದಲ್ಲಿ ಶುಕ್ರವಾರದಂದು ವರ್ಷಂಪ್ರತಿ ನಡೆಯುವ ಹೊಸಕ್ಕಿ ನಡಾವಳಿ ಮಹೋತ್ಸವವು ನಡೆಯಿತು.ಬೆಳಿಗ್ಗೆ ಭಂಡಾರ ಏರಿ ಬಳಿಕ ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು,ರಾತ್ರಿ ಮಹಾ...

Close