ಕಿನ್ನಿಗೋಳಿ : ಕರ್ನಾಟಕ ಪವರ್ ಲಿಪ್ಟಿಂಗ್ ಅಸೋಸಿಯೇಶನ್ ಮಂಗಳೂರು ಹಾಗೂ ಶ್ರೀ ವೀರಮಾರುತಿ ವ್ಯಾಯಾಮ ಶಾಲೆ ರಾಜರತ್ನಪುರ ಕಿನ್ನಿಗೋಳಿ ಇದರ ಸಹಯೋಗದಲ್ಲಿ ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ನವೆಂಬರ್ 3ರಿಂದ 5 ರವರೆಗೆ ಕರ್ನಾಟಕ ರಾಜ್ಯ ಜ್ಯೂನಿಯರ್, ಸಬ್ ಜೂನಿಯರ್ ಮತ್ತು ಮಾಸ್ಟರ್ಸ್ 39ನೇ ಪುರುಷರ ಹಾಗೂ 29ನೇ ಮಹಿಳೆಯರ ಕರ್ನಾಟಕ ರಾಜ್ಯ ಜೂನಿಯರ್ ಮತ್ತು ಮಾಸ್ಟರ್ಸ್ ಹಾಗೂ ಸಬ್- ಜ್ಯೂನಿಯರ್ ಪವರ್ ಲಿಪ್ಟಂಗ್ ಸ್ಪರ್ಧೆಗಳು ನಡೆಯಲಿದೆ ಎಂದು ಕಿನ್ನಿಗೋಳಿ ವೀರ ಮಾರುತಿ ವ್ಯಾಯಾಮ ಶಾಲೆಯ ಅಧ್ಯಕ್ಷ ಈಶ್ವರ್ ಕಟೀಲು ಹೇಳಿದರು.
ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಟಿಯಲ್ಲಿ ಹೇಳಿದರು.
ಕರ್ನಾಟಕ ಪವರ್ ಲಿಪ್ಟಿಂಗ್ ಎಸೋಸಿಯೇಶನ್ ಕಾರ್ಯದರ್ಶಿ ಸತೀಶ್ ಕುಮಾರ್ ಕುದ್ರೋಳಿ ಮಾತನಾಡಿ ಕಿನ್ನಿಗೋಳಿಯಲ್ಲಿ 2013ನೇ ವರ್ಷದಲ್ಲಿ ಸ್ಪರ್ಧೆಗಳು ನಡೆದಿದ್ದು ಇದೀಗ ರಾಜ್ಯಾದಾದ್ಯಂತ ಸುಮಾರು 200 ಕ್ಕೂ ಮಿಕ್ಕಿ ಸ್ಪರ್ಧಾಳುಗಳು ಭಾಗವಹಿಸಲಿದ್ದು ಇಲ್ಲಿಂದಲೇ ರಾಷ್ಟ್ರಮಟ್ಟಕ್ಕೆ ಆಯ್ಕೆ ಮಾಡುವ ಸಂಭವವಿದೆ. ನ. 3 ರಂದು ಬೆಳಿಗ್ಗೆ ಸಂಸದ ನಳಿನ್ ಕುಮಾರ್ ಕಟೀಲು ಅವರು ಪವರ್ ಲಿಪ್ಟಿಂಗ್ ಸ್ಪರ್ಧೆಯನ್ನು ಉದ್ಘಾಟಿಸಲಿದ್ದಾರೆ. ಮುಲ್ಕಿ ಮೂಡಬಿದಿರೆ ಶಾಸಕ ಕೆ. ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭ ರಾಷ್ಟ್ರಮಟ್ಟದ ಮಾಸ್ಟರ್ಸ್ ಪವರ್ ಲಿಪ್ಟಿಂಗ್ ಕ್ರೀಡಾಳು ಮಂಜುನಾಥ್ ಮಲ್ಯ ಅವರನು ಸನ್ಮಾನಿಸಲಾಗುವುದು. ನ. 5 ರಂದು ಸಮಾರೋಪ ಸಮಾರಂಭದಲ್ಲಿ ಉದ್ಯಮಿ ಸಂದೇಶ್ ಕುಮಾರ್ ಶೆಟ್ಟಿ ಭಾಗವಹಿಸಲಿರುವರು. ವಿಜೇತರಿಗೆ ಪ್ರಶಸ್ತಿ ಪ್ರಧಾನ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ ಎಂದು ತಿಳಿಸಿದರು. ಯುಗಪುರುಷದ ಪ್ರಧಾನ ಸಂಪಾದಕ ಕೆ. ಭುವನಾಭಿರಾಮ ಉಡುಪ, ದ. ಕ ಜಿಲ್ಲಾ ಪವರ್ ಲಿಪ್ಟಿಂಗ್ ಎಸೋಸಿಯೇಶನ್ ಕಾರ್ಯದರ್ಶಿ ಮಧುಚಂದ್ರ, ಖಜಾಂಜಿ ಎಂ. ಜಯರಾಮ್, ಮಂಗಳೂರು ಬಾಲಾಂಜನೇಯ ಜಿಮ್ನಾಶಿಯಂ ಅಧ್ಯಕ್ಷ ಬಿ. ವಸಂತ್ ಸಾಲಿಯಾನ್, ಅಂತರಾಷ್ಟ್ರಿಯ ಪವರ್ ಲಿಪ್ಟರ್ ವಿಜಯ ಕಾಂಚನ್, ವೀರ ಮಾರುತಿ ವ್ಯಾಯಾಮ ಶಾಲೆಯ ಕಾರ್ಯದರ್ಶಿ ಕೇಶವ ಕರ್ಕೇರಾ, ಕರಾಟೆ ಪಟು ಸಮೀಕ್ಷಾ ಕಟೀಲು ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದರು.