ಪರಿವರ್ತನಾ ಯಾತ್ರೆಯ ಪೂರ್ವಭಾವಿ ಸಭೆ

ಹಳೆಯಂಗಡಿ : ಬಿಜೆಪಿಯ ಪರಿವರ್ತನಾ ಯಾತ್ರೆಯಿಂದ ರಾಜ್ಯದಲ್ಲಿನ ಆಡಳಿತ ಪಕ್ಷವಾದ ಕಾಂಗ್ರೆಸ್‌ಗೆ ನಡುಕ ಉಂಟಾಗಿದೆ. ಕರಾವಳಿ ಭಾಗದಲ್ಲಿ ನಡೆಸುವ ರ‍್ಯಾಲಿಗೆ ಪ್ರತಿಯೋರ್ವ ಕಾರ್ಯಕರ್ತನ ಉಪಸ್ಥಿತಿ ಅತೀ ಪ್ರಾಮುಖ್ಯವಾಗಿದೆ, ಪಕ್ಷದ ಕಾರ್ಯಕರ್ತರ ಬಲಾಬಲವನ್ನು ಅಂದು ನಿರೀಕ್ಷಿಸಲಾಗಿದೆ ಎಂದು ಮೂಲ್ಕಿ ಮೂಡಬಿದಿರೆ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಈಶ್ವರ್ ಕಟೀಲು ಹೇಳಿದರು.
ಹಳೆಯಂಗಡಿ ಗ್ರಾಮ ಸಮಿತಿಯಿಂದ ಸಂಯೋಜಿಸಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಬಿಜೆಪಿ ಪರಿವರ್ತನಾ ಯಾತ್ರೆಯ ಪೂರ್ವ ಭಾವಿ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.
ಬಿಜೆಪಿ ಪಕ್ಷದ ವರ್ಚಸ್ಸು ಈ ಭಾರಿ ಕ್ಷೇತ್ರದಲ್ಲಿ ವೃದ್ಧಿಸಿರುವುದರಿಂದ ವಿರೋಧ ಪಕ್ಷಗಳು ಕಾರ್ಯಕರ್ತರನ್ನು ಗೊಂದಲಕ್ಕೀಡು ಮಾಡಬೇಕು ಎಂದು ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳ ಬಗ್ಗೆ ಬೇಕೆಂದೇ ಅಪಪ್ರಚಾರ ಮಾಡುತ್ತಿದೆ. ಇದಕ್ಕೆ ಕಾರ್ಯಕರ್ತರು ಕಿವಿ ಗೊಡಬಾರದು ಪಕ್ಷದ ವರಿಷ್ಠರು ಸೂಚಿಸುವ ಅಭ್ಯರ್ಥಿಯನ್ನು ಗೆಲ್ಲಿಸುವ ಜವಬ್ದಾರಿ ನಮ್ಮ ಮೇಲಿದೆ, ಪರಿವರ್ತನಾ ಯಾತ್ರೆಯಿಂದ ಇನ್ನಷ್ಟು ಕಾರ್ಯಕರ್ತರು ನಮ್ಮನ್ನು ಸೇರಲಿದ್ದಾರೆ ಎಂದರು.
ದ.ಕ.ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯ ವಿನೋದ್‌ಕುಮಾರ್ ಬೊಳ್ಳೂರು, ಹಿರಿಯ ಬಿಜೆಪಿ ನಾಯಕ ಸತೀಶ್ ಭಟ್ ಕೊಳುವೈಲು, ಕಿನ್ನಿಗೋಳಿ ಶಕ್ತಿ ಕೇಂದ್ರದ ಅಧ್ಯಕ್ಷ ಸಂತೋಷ್ ಶೆಟ್ಟಿ ಮಾತನಾಡಿದರು.
ಹಳೆಯಂಗಡಿ ಗ್ರಾಮ ಸಮಿತಿಯ ಅಧ್ಯಕ್ಷ ನರೇಂದ್ರ ಪ್ರಭು ಸ್ವಾಗತಿಸಿದರು, ಪ್ರಧಾನ ಕಾರ್ಯದರ್ಶಿ ಚಿತ್ರಾ ಸುಕೇಶ್ ಸಸಿಹಿತ್ಲು ವಂದಿಸಿದರು.

Mulki-11111702

Comments

comments

Comments are closed.

Read previous post:
Mulki-11111701
ಹಳೆಯಂಗಡಿ ಬಿಜೆಪಿ ಪರಿವರ್ತನಾ ಯಾತ್ರೆ

ಹಳೆಯಂಗಡಿ : ರಾಜ್ಯದಲ್ಲಿ ಸಂಚಲನ ಮೂಡಿಸಿರುವ ಬಿಜೆಪಿಯ ಪರಿವರ್ತನಾ ಯಾತ್ರೆಯಿಂದ ಗ್ರಾಮೀಣ ಭಾಗದ ಕಾರ್ಯಕರ್ತರನ್ನು ಸಂಘಟಿಸಲು ಸಹಕಾರಿಯಾಗಿದೆ. ರಾಜ್ಯದಲ್ಲಿನ ಕಾಂಗ್ರೆಸ್ ಆಡಳಿತದ ವೈಫಲ್ಯವನ್ನು ಜನರಿಗೆ ತಿಳಿಸುವ ಮೂಲಕ...

Close