ಶಿಸ್ತು ಜೀವನದ ಮೌಲ್ಯವನ್ನು ಹೆಚ್ಚಿಸುತ್ತದೆ

ಕಿನ್ನಿಗೋಳಿ : ಜೀವನದ ಉದ್ದಕ್ಕೂ ಶಿಸ್ತನ್ನು ಪಾಲಿಸಿಕೊಂಡು ಬಂದಾಗ ಪ್ರತಿಯೊಬ್ಬ ಮಾನವನ ಮೌಲ್ಯಗಳು ವೃದ್ಧಿಯಾಗುತ್ತದೆ. ಉತ್ತಮ ಭವಿಷ್ಯದ ಭಾರತವನ್ನು ನಿರ್ಮಿಸಲು ಯುವ ಸಮುದಾಯವನ್ನು ಸಂಘಟನಾತ್ಮಕವಾಗಿ ಕಟ್ಟಿ ಬೆಳೆಸಬೇಕಾಗಿದೆ ಎಂದು ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಹೇಳಿದರು.
ಹಳೆಯಂಗಡಿ ಶ್ರೀ ನಾರಾಯಣ ಸನಿಲ್ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್ ಕುಮಾರ್ ಬೊಳ್ಳೂರು ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿಯೇ ಉತ್ತಮ ಶಿಕ್ಷಣ ಹಾಗೂ ನಿರ್ದಿಷ್ಟ ಗುರಿಯೊಂದಿಗೆ ಸಮಾಜದ ಅಭಿವೃದ್ಧಿಗೆ ಸಹಕರಿಸಬೇಕು ಎಂದರು.
ಲಯನ್ಸ್ ವಲಯ ಅಧ್ಯಕ್ಷ ರಮೇಶ್ ಬಂಗೇರ, ಹಳೆಯಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಲಜಾ, ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಎಚ್. ವಸಂತ್ ಬೆರ್ನಾಡ್, ಪ್ರಿನ್ಸಿಪಾಲ್ ಜಯಶ್ರೀ ಕೆ., ಪ್ರೌಢಶಾಲೆ ವಿಭಾಗದ ಮುಖ್ಯ ಶಿಕ್ಷಕ ಮೈಕಲ್ ಡಿಸೋಜ ಉಪಸ್ಥಿತರಿದ್ದರು.
ಶಿಕ್ಷಕಿ ಗ್ರೇಟ್ಟಾ ಮೊರಸ್ ಸ್ವಾಗತಿಸಿ, ಜಯಾನಂದ್ ವಂದಿಸಿದರು. ದಿನಕರ್ ಕೆ. ಕಾರ್ಯಕ್ರಮ ನಿರೂಪಿಸಿದರು.

Kinnigoli-02121701

Comments

comments

Comments are closed.

Read previous post:
Kinnigoli-01121704
ಆಯುರ್ವೇದ ಚಿಕಿತ್ಸಾ ಪದ್ಧತಿ ಪರಿಣಾಮಕಾರಿ

ಕಿನ್ನಿಗೋಳಿ : ಆಯುರ್ವೇದ, ಯುನಾನಿ, ಹೋಮಿಯೋಪತಿ ಚಿಕಿತ್ಸಾ ಪದ್ಧತಿಗಳು ಪರಿಣಾಮಕಾರಿ ಔಷಧಿ ಪದ್ಧತಿಯಾಗಿದ್ದು ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ ಎಂದು ಆಯುಷ್ ಇಲಾಖೆಯ ವೈದ್ಯಾಧಿಕಾರಿ ಡಾ. ಅಶಾಕ್ ಹೇಳಿದರು. ಹಳೆಯಂಗಡಿ...

Close