ಹೊನಲು ಬೆಳಕಿನ ಹಗ್ಗ ಜಗ್ಗಾಟ ಪಂದ್ಯಾಟ

 ಕಿನ್ನಿಗೋಳಿ : ಸುಖಾನಂದ ಶೆಟ್ಟಿ ಅವರು ಸಮಾಜದ ಕಷ್ಟ ಸುಖಗಳಿಗೆ ಸದಾ ಸ್ಪಂದಿಸುವ ವ್ಯಕ್ತಿತ್ವ ಉಳ್ಳವರಾಗಿದ್ದು ಹಿಂದುತ್ವಕ್ಕೆ ಕಟಿಬದ್ದರಾಗಿ ತನ್ನ ಬದುಕನ್ನೆ ಮುಡಿಪಾಗಿಸಿದ ದಿವ್ಯ ಚೇತನ ಎಂದು ದ. ಕ. ಬಿಜೆಪಿಯ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಉಮಾನಾಥ ಕೋಟ್ಯಾನ್ ಹೇಳಿದರು.
ಅಂಗರಗುಡ್ಡೆ ಶ್ರೀ ರಾಮ ಫ್ರೆಂಡ್ಸ್ ಆಶ್ರಯದಲ್ಲಿ ಅಂಗರಗುಡ್ಡೆ ಶ್ರೀ ರಾಮ ಭಜನಾ ಮಂದಿರದ ವಠಾರದಲ್ಲಿ ದಿ. ಸುಖಾನಂದ ಶೆಟ್ಟಿ ಸ್ಮರಣಾರ್ಥ ಬಡ ಅನಾರೋಗ್ಯ ಪೀಡಿತ ಹಾಗೂ ವಯೋವೃದ್ಧರಿಗೆ ಸಹಾಯಾರ್ಥ ಶನಿವಾರ ನಡೆದ ರಾಜ್ಯ ಮಟ್ಟದ ಹೊನಲು ಬೆಳಕಿನ ಹಗ್ಗ ಜಗ್ಗಾಟ ಪಂದ್ಯಾಟ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಮಾತಾ ಡವಲಪರ್ಸ್‌ನ ಸಂತೋಷ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸಮಾಜ ಮುಖಿ ಕೆಲಸಗಳಾದ ಬಡ ವರ್ಗ ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಸ್ತ ನೀಡುತ್ತಿರುವುದು ನಿರಂತರ ನಡೆಯಲಿ ಎಂದು ಹೇಳಿದರು.
ಈ ಸಂದರ್ಭ ಬಡ ಅನಾರೋಗ್ಯ ಪೀಡಿತರಿಗೆ ಹಾಗೂ ವಯೋವೃದ್ಧರಿಗೆ ಟ್ರಸ್ಟ್ ವತಿಯಿಂದ ಆರ್ಥಿಕ ನೆರವು ನೀಡಲಾಯಿತು.
ಕ್ರೀಡಾ ಸಾಧಕರಾದ ಧನುಷ್ ದೇವಾಡಿಗ, ಮಯೂರ ದೇವಾಡಿಗ, ಖುಷಿ ಶೆಟ್ಟಿ , ಧನ್ಯ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ವಿದಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯದರ್ಶಿ ಗೀತಾಂಜಲಿ ಸುವರ್ಣ, ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ವಕ್ತಾರ ಹರಿಕೃಷ್ಣ ಬಂಟ್ವಾಳ, ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯ ಸಮಿತಿಯ ಕಾರ್ಯದರ್ಶಿ ಸತ್ಯಜಿತ್ ಸುರತ್ಕಲ್, ಉಡುಪಿ ಬಿಜೆಪಿ ಮುಖಂಡ ಯಶ್‌ಪಾಲ್ ಸುವರ್ಣ, ಬಿಜೆಪಿ ಮುಲ್ಕಿ ಮೂಡಬಿದಿರೆ ಕ್ಷೇತ್ರ ಅಧ್ಯಕ್ಷ ಈಶ್ವರ್ ಕಟೀಲು, ಪ್ರಧಾನ ಕಾರ್ಯದರ್ಶಿಗಳಾದ ಸುಕೇಶ್ ಶಿರ್ತಾಡಿ, ಜಯಾನಂದ ಮೂಲ್ಕಿ , ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಅಲೆಮಾರಿ ವಿಮುಕ್ತ ಬುಡಕಟ್ಟು ಒಕ್ಕೂಟದ ಅಧ್ಯಕ್ಷ ಭಾಸ್ಕರದಾಸ್ ಎಕ್ಕಾರು, ಮೂಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷೆ ಶಿಲ್ಪಾ ಪಿ. ಕುಡ್ವ, ಮಂಗಳೂರು ತಾ. ಪಂ. ಸದಸ್ಯರಾದ ದಿವಾಕರ ಕರ್ಕೇರಾ, ರಶ್ಮಿ ಆಚಾರ್ಯ, ಉದ್ಯಮಿ ಪ್ರತೀಕ್ ಶೆಟ್ಟಿ, ಕಿಲ್ಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀಕಾಂತ್ ರಾವ್, ಕೊಡೆತ್ತೂರು ಶ್ರೀ ಅರಸು ಕುಂಜಿರಾಯ ದೈವಸ್ಥಾನದ ಅಧ್ಯಕ್ಷ ದೇವಿ ಪ್ರಸಾದ್ ಶೆಟ್ಟಿ, ಶ್ರೀ ರಾಮ ಭಜನಾ ಮಂದಿರದ ಅಧ್ಯಕ್ಷ ಜೀವನ್ ಶೆಟ್ಟಿ, ಅವಿನಾಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಸತೀಶ್ ಪೂಜಾರಿ ಸ್ವಾಗತಿಸಿದರು. ವಿನೋದ್ ಸಾಲ್ಯಾನ್ ಪ್ರಸ್ತಾವನೆಗೈದರು. ಶರತ್ ಕಾರ್ಯಕ್ರಮ ನಿರೂಪಿಸಿದರು.

4KinniHaggajaggata

Comments

comments

Comments are closed.

Read previous post:
Kinnigoli-05121705
ಕಿನ್ನಿಗೊಳಿ : ಗೀತಾ ಜಯಂತಿ

ಕಿನ್ನಿಗೋಳಿ : ಮಕ್ಕಳಿಗೆ ಶಾಲಾ ಶಿಕ್ಷಣದೊಂದಿಗೆ ಸಂಸ್ಕೃತಿ ಸಂಸ್ಕಾರ ಆಚಾರ ವಿಚಾರಗಳ ಪರಿಚಯ ಹಾಗೂ ಧರ್ಮದ ಬಗ್ಗೆ ಅರಿವು ನೀಡಿ ಸುಸಂಸ್ಕೃತರನ್ನಾಗಿ ಮಾಡುವುದು ನಮ್ಮ ಆದ್ಯ ಕರ್ತವ್ಯ. ಶಿಕ್ಷಣದಲ್ಲಿ...

Close