ಮಾನಸಿಕ ಶಾಂತಿಗಾಗಿ ಧ್ಯಾನ ಶಿಬಿರ

ಕಿನ್ನಿಗೋಳಿ : ಇಂದಿನ ಯಾಂತ್ರಿಕ ಯುಗದಲ್ಲಿ ಪ್ರತಿಯೊಬ್ಬರು ಒತ್ತಡದ ಜೀವನ ಸಾಗಿಸುತ್ತಿದ್ದು ಮಾನಸಿಕ ನೆಮ್ಮದಿ ಕಡಿಮೆಯಾಗುತ್ತಿದೆ. ಹಾಗಾಗಿ ಮನಸ್ಸಿನ ಒತ್ತಡ ಕಡೆಮೆ ಮಾಡುವ ಮಾನಸಿಕ ನೆಮ್ಮದಿ ಹೆಚ್ಚಿಸುವ ತರಬೇತಿಗಳು ಅನಿವಾರ್ಯವಾಗಿವೆ ಇಂತಹ ತರಬೇತಿ ಶಿಬಿರಗಳಿಂದ ಮಾನಸಿಕ ಶಾಂತಿ ಸಮಾದಾನ ದೊರೆಯಲು ಸಾಧ್ಯವಿದೆ ಎಂದು ಮಂಗಳೂರು ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ವಿಶೇಶ್ವರೀ ಅವರು ಹೇಳಿದರು.
ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಒಂದು ವಾರಗಳ ಕಾಲ ನಡೆಯುವ ಮಾನಸಿಕ ಶಾಂತಿಗಾಗಿ ಧ್ಯಾನ ರಾಜ ಯೋಗ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಯುಗಪುರುಷ ಪ್ರಧಾನ ಸಂಪಾದಕ ಕೆ. ಭುವನಾಭಿರಾಮ ಉಡುಪ ಕಾರ್ಯಕ್ರಮ ಉದ್ಘಾಟಿಸಿದರು.
ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಿಲೋಮಿನ ಸಿಕ್ವೇರಾ, ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಿನಿ ಎಸ್. ಗುಜರನ್, ಕಿನ್ನಿಗೋಳಿ ಲಯನ್ಸ್ ಕ್ಲಬ್ ಅಧ್ಯಕ್ಷೆ ಶಾಂಭವಿ ಶೆಟ್ಟಿ, ಸಾವಿತ್ರಿ ಶೆಟ್ಟಿ ಕಿನ್ನಿಗೋಳಿ, ಕಿನ್ನಿಗೋಳಿ ಇನ್ನರ್‌ವೀಲ್ ಅಧ್ಯಕ್ಷೆ ರಾಧಾ ಶೆಣೈ ಉಪಸ್ಥಿತರಿದ್ದರು. ಬಜಪೆ ಘಟಕದ ಸಂಚಾಲಕಿ ಶರಣಮ್ಮ ಕಾರ್ಯಕ್ರಮ ನಿರೂಪಿಸಿದರು.

Kinnigoli-0811201701

Comments

comments

Comments are closed.

Read previous post:
Mulki-05121704
ಮೂಲ್ಕಿ ವಳಲಂಕೆ ಶ್ರೀ ವೆಂಕಟರಮಣ ದೇವಳ ಪ್ರತಿಷ್ಠಾ ಹುಣ್ಣಿಮೆ

ಮೂಲ್ಕಿ : ಮೂಲ್ಕಿ ವಳಲಂಕೆ ಶ್ರೀ ವೆಂಕಟರಮಣ ದೇವಳದಲ್ಲಿ ಭಾನುವಾರ ನಡೆದ ಪ್ರತಿಷ್ಠಾ ಹುಣ್ಣಿಮೆಯ ಪ್ರಯುಕ್ತ ಶ್ರೀ ಉಗ್ರನರಸಿಂಹ ದೇವರಿಗೆ ಶ್ರೀ ಕಾಶೀ ಮಠಾದೀಶ ಶ್ರೀಮದ್ ಸಯಮೀಂದ್ರ ತೀರ್ಥ...

Close