ಸಂಸ್ಕಾರ, ಮಾನವೀಯತೆಯ ಶಿಕ್ಷಣ ಅಗತ್ಯ

ಕಿನ್ನಿಗೋಳಿ :  ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಹೆಚ್ಚು ಅಂಕಗಳ ಗಳಿಸುವ ಶಿಕ್ಷಣದೊಂದಿಗೆ ಸಂಸ್ಕಾರ ನೀಡುವ ಮಾನವೀಯತೆ, ವ್ಯಕ್ತಿತ್ವ ನಿರ್ಮಾಣದ ಗುಣಗಳನ್ನು ಕಲಿಸುವ ಅಗತ್ಯವಿದೆ ಎಂದು ಕೆನರಾ ಪ್ರೌಢಶಾಲೆಯ ಶಿಕ್ಷಕಿ ಶುಭಾ ಭಟ್ ಎನ್ ಹೇಳಿದರು.
ಸೋಮವಾರ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರೌಢಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.
ದ.ಕ. ಸಂಸದ ನಳಿನ್ ಕುಮಾರ್ ಕಟೀಲ್‌ಲ್ಮುಲ್ಕಿ ಮೂಡಬಿದಿರೆ ಶಾಸಕ ಕೆ. ಅಭಯಚಂದ್ರ ಜೈನ್, ದ.ಕ.ಜಿ. ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಅನುವಂಶಿಕ ಮೊಕ್ತೇಸರರಾದ ವಾಸುದೇವ ಆಸ್ರಣ್ಣ, ಕೊಡೆತ್ತೂರುಗುತ್ತು ಸನತ್ ಕುಮಾರ ಶೆಟ್ಟಿ, ತಾ.ಪಂ. ಸದಸ್ಯ ಸುಕುಮಾರ ಸನಿಲ್, ಕಟೀಲು ಗ್ರಾ.ಪಂ. ಅಧ್ಯಕ್ಷೆ ಗೀತಾ ಪೂಜಾರ್ತಿ, ಉಪಾಧ್ಯಕ್ಷ ಕಿರಣ್‌ಕುಮಾರ್ ಶೆಟ್ಟಿ, ಕಟೀಲು ದೇವಳ ಅರ್ಚಕ ವೆಂಕಟರಮಣ ಆಸ್ರಣ್ಣ, ವಿಜಯಾ ಬ್ಯಾಂಕಿನ ಶ್ಯಾಂ ಸ್ವರೂಪ್, ಶ್ರೀಧರ ಭಂಡಾರಿ, ಉದ್ಯಮಿ ಸುಬ್ರಹ್ಮಣ್ಯ ಪ್ರಸಾದ್ ಶಿಬರೂರು, ಕಟೀಲು ಕಾಲೇಜು ಪ್ರಿನ್ಸಿಪಾಲ್ ಎಂ. ಬಾಲಕೃಷ್ಣ ಶೆಟ್ಟಿ, ಶಿಕ್ಷಕರಕ್ಷಕ ಸಂಘದ ವೆಂಕಟರಮಣ ಹೆಗಡೆ, ಹಳೆ ವಿದ್ಯಾರ್ಥಿ ಸಂಘದ ಲೋಕಯ್ಯ ಸಾಲ್ಯಾನ್, ಸುರ್ ಕುಮಾರ್ ಶೆಟ್ಟಿ, ವಿದ್ಯಾರ್ಥಿ ನಾಯಕಿ ಜೀವಿತಾ, ಉಪಪ್ರಾಚಾರ್ಯ ಸೋಮಪ್ಪ ಅಲಂಗಾರು, ಸಾಯಿನಾಥ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
Kinnigoli-16121701

Comments

comments

Comments are closed.

Read previous post:
Kinnigoli-15121711
ಕಟೀಲು ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

ಕಿನ್ನಿಗೋಳಿ : ವಿದ್ಯಾರ್ಥಿಗಳು ಬುದ್ದಿವಂತಿಕೆಯೊಂದಿಗೆ ಹೃದಯವಂತಿಕೆ ಕೂಡಾ ಬೆಳೆಸಿಕೊಳ್ಳಬೇಕು ವಾಟ್ಸಪ್ ಬಳಕೆಯಿಂದ ಒಳಿತಾಗಲಿ ಹಾಳಾಗುವುದು ಬೇಡ, ರಾಷ್ಟ್ರ ಪ್ರೇಮ ನೀರಿನ ಮಿತ ಬಳಕೆ ಬಗ್ಗೆ ಜಾಗೃತಿಯನ್ನು ಮಕ್ಕಳಲ್ಲಿ ಬೆಳೆಸೋಣ...

Close