ಡಾ. ಎಂ. ರಾಮಣ್ಣ ಶೆಟ್ಟಿ ಪ್ರೌಢ ಶಾಲಾ ವಾರ್ಷಿಕೋತ್ಸವ

 ಕಿನ್ನಿಗೋಳಿ : ಶಿಕ್ಷಕರು ಮಕ್ಕಳ ಭವಿಷ್ಯ ರೂಪಕರು. ಧನಾತ್ಮಕ ಚಿಂತನೆಯ ಶಿಕ್ಷಣ ಹಾಗೂ ವೃತ್ತಿನಿಷ್ಠೆಯ ಜೀವನ ಅಳವಡಿಸಿದಾಗ ಭವಿಷ್ಯದಲ್ಲಿ ಸಂತೃಪ್ತಿಯ ಜೀವನ ಕಂಡುಕೊಳ್ಳಬಹುದು ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ. ಎಮ್.ಎಸ್. ಮೂಡಿತ್ತಾಯ ಹೇಳಿದರು.
ನಿಟ್ಟೆ ವಿದ್ಯಾ ಸಂಸ್ಥೆಯ ಅಧೀನಕ್ಕೆ ಒಳ ಪಟ್ಟ ಸಂಸ್ಥೆಯಾದ ತಪೋವನ, ತೋಕೂರು ಡಾ. ಎಂ. ರಾಮಣ್ಣ ಶೆಟ್ಟಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಶನಿವಾರ ನಡೆದ ಶಾಲಾ ವಾರ್ಷಿಕೋತ್ಸವದ ಸಮಾರಂಭದಲ್ಲಿ ಮಾತನಾಡಿದರು.
ಶಾಲಾ ಮುಖ್ಯ ಶಿಕ್ಷಕಿ ಶ್ರೀಲತಾ ರಾವ್ ವಾರ್ಷಿಕ ವರದಿ ವಾಚಿಸಿದರು, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಅರುಣ್ ಶೆಟ್ಟಿ ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ವರದಿ ವಾಚಿಸಿದರು.
ಶಾಲಾ ನಾಯಕಿ ಎನ್. ಅದಿತಿ ಸ್ವಾಗತಿಸಿದರು. ಶಾಲಾ ನಾಯಕ ಅಬ್ದುಲ್ ಸಾದಿದ್ ಹೆಜಮಾಡಿ ವಂದಿಸಿದರು, ಪಲ್ಲವಿ ಕಾರ್ಯಕ್ರಮ ನಿರೂಪಿಸಿದರು.

Kinnigoli-19121707

Comments

comments

Comments are closed.

Read previous post:
Kinnigoli-19121706
ಕಟೀಲು ಶಿಕ್ಷಣ ಸಂಸ್ಥೆಗಳಲ್ಲಿ ಉತ್ತಮ ಸೌಲಭ್ಯ

ಕಿನ್ನಿಗೋಳಿ : ಗ್ರಾಮೀಣ ಪ್ರದೇಶದ ಮಕ್ಕಳಿಗಾಗಿ ಶ್ರೀ ದುರ್ಗಾಪರಮೇಶ್ವರೀ ದೇವಳದಿಂದ ನಡೆಸಲ್ಪಡುವ ಶಿಕ್ಷಣ ಸಂಸ್ಥೆಗಳಲ್ಲಿ ಇನ್ನಷ್ಟು ಸೌಲಭ್ಯಗಳೊಂದಿಗೆ ಉತ್ತಮ ವಿದ್ಯಾಭ್ಯಾಸ ನೀಡಲು ದೇವಳದ ಆಡಳಿತ ಮಂಡಳಿ ಮುಂದಾಗಿದೆ ಎಂದು...

Close