ಕಟೀಲು ಶಿಕ್ಷಣ ಸಂಸ್ಥೆಗಳಲ್ಲಿ ಉತ್ತಮ ಸೌಲಭ್ಯ

ಕಿನ್ನಿಗೋಳಿ : ಗ್ರಾಮೀಣ ಪ್ರದೇಶದ ಮಕ್ಕಳಿಗಾಗಿ ಶ್ರೀ ದುರ್ಗಾಪರಮೇಶ್ವರೀ ದೇವಳದಿಂದ ನಡೆಸಲ್ಪಡುವ ಶಿಕ್ಷಣ ಸಂಸ್ಥೆಗಳಲ್ಲಿ ಇನ್ನಷ್ಟು ಸೌಲಭ್ಯಗಳೊಂದಿಗೆ ಉತ್ತಮ ವಿದ್ಯಾಭ್ಯಾಸ ನೀಡಲು ದೇವಳದ ಆಡಳಿತ ಮಂಡಳಿ ಮುಂದಾಗಿದೆ ಎಂದು ದೇವಳದ ಆಡಳಿತ ಸಮಿತಿ ಅಧ್ಯಕ್ಷ ಕೊಡೆತ್ತೂರುಗುತ್ತು ಸನತ್ ಕುಮಾರ್ ಶೆಟ್ಟಿ ಹೇಳಿದರು.
ಮಂಗಳವಾರ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಿವೃತ್ತ ಪ್ರಿನ್ಸಿಪಾಲ್ ಜಯರಾಮ ಪೂಂಜ ಅವರನ್ನು ಅಭಿನಂದಿಸಲಾಯಿತು.
ದೇವಳದ ಮೊಕ್ತೇಸರ ವಾಸುದೇವ ಆಸ್ರಣ್ಣ, ಅರ್ಚಕರಾದ ಶ್ರೀಹರಿನಾರಾಯಣದಾಸ ಆಸ್ರಣ್ಣ, ಕೆಪಿಟಿಯ ನಿವೃತ್ತ ರಿಜಿಸ್ಟ್ರಾರ್ ರಾಜೇಂದ್ರಪ್ರಸಾದ್ ಎಕ್ಕಾರು, ದ.ಕ. ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ತಾ.ಪಂ. ಸದಸ್ಯ ಸುಕುಮಾರ ಸನಿಲ್, ಕಟೀಲು ಗ್ರಾಪಂ. ಅಧ್ಯಕ್ಷೆ ಗೀತಾ ಪೂಜಾರ್ತಿ, ಪ್ರಿನ್ಸಿಪಾಲ್ ವನಿತಾ ಜೋಷಿ, ವಿದ್ಯಾರ್ಥಿ ನಾಯಕ ಸಂದೇಶ್ ಮತ್ತಿತರರಿದ್ದರು.
ಉಪನ್ಯಾಸಕ ಕೇಶವ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
Kinnigoli-19121706

Comments

comments

Comments are closed.

Read previous post:
Kinnigoli-19121705
ಕಿನ್ನಿಗೋಳಿ : ಕಾಂಕ್ರೀಟ್ ರಸ್ತೆ ಗುದ್ದಲಿ ಪೂಜೆ

ಕಿನ್ನಿಗೋಳಿ ; ಕಿನ್ನಿಗೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 3 ನೇವಾರ್ಡ್ ಅತಿಥಿ ಹೋಟೇಲ್ ಪಕ್ಕದ ರಸ್ತೆಗೆ 3 ಲಕ್ಷರೂ ಅನುದಾನದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣದ ಗುದ್ದಲಿ ಪೂಜೆಯನ್ನು ಗುರುವಾರ ಕಿನ್ನಿಗೊಳಿ...

Close