ಡಿ. ೨೦ ಕಿನ್ನಿಗೋಳಿ ವಾಣಿಜ್ಯ ಸಂಕೀರ್ಣ ಮತ್ತು ಬಸ್ ನಿಲ್ದಾಣ ಉದ್ಘಾಟನೆ

ಕಿನ್ನಿಗೋಳಿ : ಕಿನ್ನಿಗೋಳಿ ಗ್ರಾಮ ಪಂಚಾಯಿತಿಯಿಂದ ನೂತನವಾಗಿ ನಿರ್ಮಾಣಗೊಂಡ ೪೯ ಲಕ್ಷ ರೂ ವೆಚ್ಚದಲ್ಲಿ ಸುಸಜ್ಜಿತ ಎರಡನೇ ಹಂತದ ಪಂಚಾಯಿತಿ ವಾಣಿಜ್ಯ ಸಂಕೀರ್ಣ ಕಟ್ಟಡ, 15 ಲಕ್ಷರೂ ವೆಚ್ಚದ ಕೇಂದ್ರ ಬಸ್ಸು ನಿಲ್ದಾಣ, ಪೊಲೀಸ್ ಸಹಾಯ ಕೇಂದ್ರ, ರಿಕ್ಷಾ ನಿಲ್ದಾಣ, ೩೬ ಲಕ್ಷರೂ ವೆಚ್ಚದ ಬಿತ್ತುಲ್ ದ್ರವ ತ್ಯಾಜ್ಯ ಘಟಕ ಹಾಗೂ ಇತರ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನಾ ಸಮಾರಂಭ ಡಿ. ೨೦ ಬುಧವಾರ ಬೆಳಿಗ್ಗೆ ಕಿನ್ನಿಗೋಳಿ ಪಂಚಾಯಿತಿ ವಾಣಿಜ್ಯ ಸಂಕೀರ್ಣ ಕಟ್ಟಡದ ಆವರಣದಲ್ಲಿ ನಡೆಯಲಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಿಲೋಮಿನಾ ಸಿಕ್ವೇರಾ ಹೇಳಿದರು.
ಸೋಮವಾರ ಕಿನ್ನಿಗೋಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿ ಮಾತನಾಡಿದರು.
ತಾಳಿಪಾಡಿ ಗ್ರಾಮವನ್ನು 50 ಲಕ್ಷರೂ ಅನುದಾನದಲ್ಲಿ ಗ್ರಾಮ ವಿಕಾಸ ಯೋಜನೆಯಡಿಯಲ್ಲಿ ಅಭಿವೃದ್ದಿ ಪಡಿಸಲಾಗುವುದು ಎಂದರು.
ಮುಲ್ಕಿ ಮೂಡಬಿದಿರೆ ಶಾಸಕ ಕೆ ಅಭಯಚಂದ್ರ ಜ್ಯೆನ್ ಉದ್ಘಾಟಿಸಲಿದ್ದು ಸಮಾರಂಭದ ಅಧ್ಯಕ್ಷತೆಯನ್ನು ಕಿನ್ನಿಗೋಳಿ ಪಂಚಾಯಿತಿ ಅಧ್ಯಕ್ಷೆ ಫಿಲೋಮಿನಾ ಸಿಕ್ವೇರಾ ವಹಿಸಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲು, ದ.ಕ. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ ಎಂ ಆರ್ ರವಿ, ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರಾದ ಸುಜನ್ ಚಂದ್ರ, ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್ ಬೊಳ್ಳೂರು, ಮಂಗಳೂರು ತಾಲೂಕು ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಮೋನು, ಕಾರ್ಯ ನಿವಾಹಕ ಅಧಿಕಾರಿ ಜಿ ಸದಾನಂದ, ತಾ.ಪ, ಸದಸ್ಯರಾದ ದಿವಾಕರ ಕರ್ಕೇರ, ಶರತ್ ಕುಬೆವೂರು ಮತ್ತು ಎಪಿಎಂಸಿ ಅಧ್ಯಕ್ಷ ಪ್ರಮೋದ್ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸುಜಾತಾ ಪೂಜಾರಿ, ಸದಸ್ಯರಾದ ಟಿ. ಎಚ್ ಮಯ್ಯದ್ದಿ , ಚಂದ್ರಶೇಖರ್, ಸಂತೋಷ್ ಕುಮಾರ್ ಉಪಸ್ಥಿತರಿದ್ದರು.

Comments

comments

Comments are closed.

Read previous post:
Kinnigoli-19121711
ಕಿನ್ನಿಗೋಳಿ ಬಿಜೆಪಿ ವಿಜಯೋತ್ಸವ

ಕಿನ್ನಿಗೋಳಿ : ಕಿನ್ನಿಗೋಳಿ ಬಿಜೆಪಿ ವತಿಯಿಂದ ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಜಯ ಗಳಿಸಿದ ಹಿನ್ನಲೆಯಲ್ಲಿ ಕಿನ್ನಿಗೋಳಿ ಸುಖಾನಂದ ಶೆಟ್ಟಿ ಸರ್ಕಲ್ ಬಳಿ ವಿಜಯೋತ್ಸವ ಆಚರಿಸಲಾಯಿತು. ಈ...

Close