ಕಿನ್ನಿಗೋಳಿ : ಸಹಿ ಸಂಗ್ರಹ ಅಭಿಯಾನ

ಕಿನ್ನಿಗೋಳಿ : ವಿಶ್ವ ತುಳುವೆರೆ ಆಯನೊ ಕೂಟ ಹಾಗೂ ಡಾ| ಶಿವರಾಮ ಕಾರಂತ ಪಿಲಿಕುಳ ನಿಸರ್ಗ ಧಾಮದಲ್ಲಿ ಡಿಸೆಂಬರ್ 23,24 ರಂದು ನಡೆಯುವ ತುಳುನಾಡೋಚ್ಚಯ-2017ರ ಪೂರ್ವಭಾವಿಯಾಗಿ ತುಳು ಭಾಷೆಯನ್ನು ೮ನೇ ಪರಿಚೇದಕ್ಕೆ ಸೇರ್ಪಡೆಗೆ ಆಗ್ರಹಿಸಿ ಲಕ್ಷ ಸಹಿ ಸಂಗ್ರಹ ಅಭಿಯಾನವು ಮುದ್ರಾಡಿ ನಾಟ್ಕದೂರಿನ ನಮ ತುಳುವೆರ್ ಕಲಾ ಸಂಘಟನೆ (ರಿ.), ತುಳುನಾಡ ರಕ್ಷಣಾ ವೇದಿಕೆ ಮತ್ತು ಸುಮನಸಾ ಕೊಡವೂರು ಉಡುಪಿ (ರಿ.) ಇವರ ನೇತೃತ್ವದಲ್ಲಿ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಗುರುವಾರ ನಡೆಯಿತು.
ಕಸಾಪ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು 50000ನೇ ಸಹಿಯನ್ನು ಹಾಕುವ ಮೂಲಕ ಕಿನ್ನಿಗೋಳಿಯಲ್ಲಿ ಚಾಲನೆ ನೀಡಿದರು. ಈ ಸಂದರ್ಭ ಯುಗಪುರುಷದ ಕೊಡೆತ್ತೂರು ಭುವನಾಭಿರಾಮ ಉಡುಪ, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ ಪುನರೂರು, ವಿಜಯಾ ಕಲಾವಿದರ ಅಧ್ಯಕ್ಷ ಶರತ್ ಶೆಟ್ಟಿ, ಕರುಣಾಕರ ಶೆಟ್ಟಿ, ಅನುಗ್ರಹ ಜ್ಯುವೆಲ್ಲರ‍್ಸ್‌ನ ಪೃಥ್ವಿರಾಜ್ ಆಚಾರ್ಯ, ನಾರಾಯಣಗುರು ವಿದ್ಯಾಸಂಸ್ಥೆಯ ಪ್ರಾಂಶುಪಾಲೆ ಉಷಾ, ನಮ ತುಳುವೆರ್ ಕಲಾ ಸಂಘಟನೆಯ ಅಧ್ಯಕ್ಷ ಸುಕುಮಾರ ಮೋಹನ್, ಸುಗಂಧಿ ಉಮೇಶ್ ಕಲ್ಮಾಡಿ, ವಾಣಿ ಸುಕುಮಾರ್, ಚಂದನ ಮತ್ತಿತರರು ಉಪಸ್ಥಿತರಿದ್ದರು.
Kinnigoli-19121703

Comments

comments

Comments are closed.

Read previous post:
Kinnigoli-19121702
ಹಳೆಯಂಗಡಿ : ನರೇಗಾ ಗ್ರಾಮ ಸಭೆ

ಕಿನ್ನಿಗೋಳಿ: ಅಧಿಕಾರಿಗಳು ಹಾಗೂ ಇಂಜಿನಿಯರ್‌ಗಳ ಕೊರತೆಯಿಂದ ಬಿಲ್ಲುಗಳು ಸಮಯಕ್ಕೆ ಸರಿಯಾಗಿ ಆಗುವುದಿಲ್ಲ. ಪಂಚಾಯಿತಿಗೆ ಖಾಯಂ ಆಗಿ ಅಧಿಕಾರಿಗಳನ್ನು ನೇಮಿಸಬೇಕು ಆಗ ಮಾತ್ರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ...

Close