ತೋಕೂರು ಶಾಲಾ ವಾರ್ಷಿಕೋತ್ಸವ

ಕಿನ್ನಿಗೋಳಿ: ಮಕ್ಕಳ ಪೋಷಕರು ಪ್ರೋತ್ಸಾಹಿಸಿದರೆ ಮಾತ್ರ ಕನ್ನಡ ಶಾಲೆಗಳ ಉಳಿವು ಸಾಧ್ಯ.
ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಗುರು ಹಿರಿಯರಿಗೆ ನಿಷ್ಠರಾಗಿರುತ್ತಾರೆ ಎಂದು ಕಸಾಪ ರಾಜ್ಯಾಧ್ಯಕ್ಷ ಹಾಗೂ ಶಾಲಾ ಸಂಚಾಲಕ ಹರಿಕೃಷ್ಣ ಪುನರೂರು ಹೇಳಿದರು.
ಹಳೆಯಂಗಡಿಯ ತೋಕೂರು ಅನುದಾನಿತ ಶ್ರೀ ಸುಬ್ರಹ್ಮಣ್ಯ ಹಿರಿಯ ಪ್ರಾಥಮಿಕ ಶಾಲೆ, ಹಳೆ ವಿದ್ಯಾರ್ಥಿ ಸಂಘ ಹಾಗೂ ಶ್ರೀ ಸುಬ್ರಹ್ಮಣ್ಯ ಅಂಗನವಾಡಿ ಕೇಂದ್ರದ ಶಾಲಾ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದ.ಕ. ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿಲ್ಲಾ ಪಂಚಾಯತಿ ಸದಸ್ಯ ವಿನೋದ್ ಬೊಳ್ಳೂರು, ಪಡುಪಣಂಬೂರು ಗ್ರಾ.ಪಂ. ಅಧ್ಯಕ್ಷ ಮೋಹನ್‌ದಾಸ್, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗುರುರಾಜ ಪೂಜಾರಿ, ಶಿಕ್ಷಕಿ ಪ್ರೇಮಲತಾ ಉಪಸ್ಥಿತರಿದ್ದರು.
ಈ ಸಂದರ್ಭ ಸಾಧಕರ ನೆಲೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಗೌತಮ್ ಶೆಟ್ಟಿ ಮತ್ತು ಉತ್ತಮ ಶಿಕ್ಷಕ ಪುರ ಶಂಕರ್ ಅವರನ್ನು ಸನ್ಮಾನಿಸಲಾಯಿತು.
ಶಾಲಾ ಶಿಕ್ಷಕಿ ಮೋಹಿನಿ ಸ್ವಾಗತಿಸಿದರು, ಹಳೆ ವಿದ್ಯಾರ್ಥಿ ಸಂಘದ ಹರಿದಾಸ ಭಟ್ ಧನ್ಯವಾದ ಅರ್ಪಿಸಿದರು. ಶಾಲಾ ಮುಖ್ಯ ಶಿಕ್ಷಕಿ ಗೌರಿ ಕಾರ್ಯಕ್ರಮ ನಿರೂಪಿಸಿದರು.

Kinnigoli-23121701

Comments

comments

Comments are closed.

Read previous post:
Mulki-18121701
ಜನರ ಧ್ವನಿಯಾಗಿ ಹಿತರಕ್ಷಣಾ ವೇದಿಕೆ ನಿರ್ವಹಿಸಲಿ

ಮೂಲ್ಕಿ: ಜನ ಸಾಮಾನ್ಯರ ಧ್ವನಿಯಾಗಿ, ಮೂಲ್ಕಿಯಲ್ಲಿನ ಸಮಸ್ಯೆಗಳ ನಿವಾರಣೆಗೆ ಶ್ರಮಿಸಲು ಮೂಲ್ಕಿ ನಾಗರಿಕ ಹಿತರಕ್ಷಣಾ ವೇದಿಕೆ ಸನ್ನಧ್ಧರಾಗಬೇಕು, ಸಾಮರಸ್ಯದ ಬದುಕನ್ನು ಕಾಣಲು ಯುವ ಸಮುದಾಯವನ್ನು ಕಟ್ಟಿಕೊಂಡು ಮನಸ್ಸುಗಳನ್ನು ಬೆಸೆಯುವ...

Close