ಉಲ್ಲಂಜೆ ಶಾಲಾ ವಾರ್ಷಿಕೋತ್ಸವ

ಕಿನ್ನಿಗೋಳಿ: ಕನ್ನಡ ಶಾಲೆ- ಸರಕಾರಿ ಶಾಲೆ ಎಂಬ ಬೇಧಭಾವ ಮಾಡದೆ ಗ್ರಾಮಸ್ಥರು ನಮ್ಮ ಶಾಲೆ ಎಂಬ ಕಾಳಜಿಯಿಂದ ಶಾಲೆಯ ಬಗ್ಗೆ ಅಭಿಮಾನ ಗೌರವ ಇಟ್ಟಿರುವುದು ಎಲ್ಲರಿಗೂ ಮಾದರಿಯಾಗಿದೆ ಎಂದು ಕಟೀಲು ದೇವಳ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಹೇಳಿದರು.
ಬುಧವಾರ ಉಲ್ಲಂಜೆ ಶಾಲಾ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭ ಸಾಧಕ ಹಳೆ ವಿದ್ಯಾರ್ಥಿಗಳಾದ ಮೇಘ ಶ್ರೀ, ಪ್ರತೀಕ್ಷಾ ಅವರನ್ನು ಸನ್ಮಾನಿಸಲಾಯಿತು.
ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಿನಿ ಎಸ್. ಗುಜರನ್ ಅಧ್ಯಕ್ಷತೆ ವಹಿಸಿದ್ದರು.
ಮಂಗಳೂರು ತಾ. ಪಂ. ಸದಸ್ಯೆ ಶುಭಲತಾ ಶೆಟ್ಟಿ, ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ, ಕೊಡೆತ್ತೂರು ದೇವಸ್ಯ ಮಠದ ಕೆ. ವೇದವ್ಯಾಸ ಉಡುಪ, ವೀರಮಾರುತಿ ವ್ಯಾಯಾಮ ಶಾಲೆಯ ಅಧ್ಯಕ್ಷ ಈಶ್ವರ್ ಕಟೀಲು, ಅರಸು ಕುಂಜಿರಾಯ ದೈವಸ್ಥಾನದ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವಿಲಿಯಂ ಮೊರ್ಗನ್ ಸಾಲಿನ್ಸ್, ಮೆನ್ನಬೆಟ್ಟು ಭ್ರಾಮರೀ ಮಹಿಳಾ ಸಮಾಜ ಅಧ್ಯಕ್ಷೆ ರೇವತಿ ಪುರುಷೋತ್ತಮ್, ಉಲ್ಲಂಜೆ ಯುವ ಶಕ್ತಿ ಫ್ರೆಂಡ್ಸ್ ಅಧ್ಯಕ್ಷ ರಾಜೇಶ್ ಕುಲಾಲ್, ಕೊಎಡೆತ್ತೂರು ಆದರ್ಶ ಬಳಗದ ಅಧ್ಯಕ್ಷ ಸೂರಜ್ ಶೆಟ್ಟಿ, ಹರಿಶ್ಚಂದ್ರ ಶೆಟ್ಟಿ, ಶಾಲಾ ನಾಯಕ ಪ್ರಭಾತ್ ಮತ್ತಿತರರು ಉಪಸ್ಥಿತರಿದ್ದರು.
ಮೆನ್ನಬೆಟ್ಟು ಹಾಲು ಉತ್ಪಾದಕರ ಸಂಘದ ವಿಜಯ ಶೆಟ್ಟಿ ಬೆಳಿಗ್ಗೆ ಧ್ವಜಾರೋಹಣಗೈದರು. ದುರ್ಗಾ ಕಂಪ್ಯೂಟರ್‌ನ ವೆಂಕಟೇಶ ಉಡುಪ ಬಹುಮಾನ ವಿತರರಿಸಿದರು . ಗ್ರಾಮಾಭಿವೃದ್ಧಿ ಯೋಜನೆಯ ಯಶೋಧರ, ಸೇವಾ ನಿರತೆ ಸುರೇಖಾ, ಸಂಜೀವ ಅಂಚನ್ ಮುಕ್ಕಾಲ್ದಿ ಬೆನ್ನಿ ಮತ್ತಿತತರಿದ್ದರು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಶೇಖರ ಶೆಟ್ಟಿ ಸ್ವಾಗತಿಸಿದರು. ಶಾಲಾ ಮುಖ್ಯ ಶಿಕ್ಷಕಿ ಮಂಗಳಾ ಎಸ್ ಭಟ್ ವರದಿ ವಾಚಿಸಿದರು. ಜೂಲಿಯಾನ್ ಕಾರ್ಯಕ್ರಮ ನಿರೂಪಿಸಿದರು.

Kinnigoli-23121702

Comments

comments

Comments are closed.

Read previous post:
Kinnigoli-23121701
ತೋಕೂರು ಶಾಲಾ ವಾರ್ಷಿಕೋತ್ಸವ

ಕಿನ್ನಿಗೋಳಿ: ಮಕ್ಕಳ ಪೋಷಕರು ಪ್ರೋತ್ಸಾಹಿಸಿದರೆ ಮಾತ್ರ ಕನ್ನಡ ಶಾಲೆಗಳ ಉಳಿವು ಸಾಧ್ಯ. ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಗುರು ಹಿರಿಯರಿಗೆ ನಿಷ್ಠರಾಗಿರುತ್ತಾರೆ ಎಂದು ಕಸಾಪ ರಾಜ್ಯಾಧ್ಯಕ್ಷ ಹಾಗೂ ಶಾಲಾ ಸಂಚಾಲಕ...

Close