ಆಯುಷ್ ಚಿಕಿತ್ಸೆ ಪರಿಣಾಮಕಾರಿ

ಕಿನ್ನಿಗೋಳಿ: ಜಿಲ್ಲೆಯಲ್ಲಿ ಆಯುಷ್ ಚಿಕಿತ್ಸೆ ಪರಿಣಾಮಕಾರಿ ಮೂಡಿ ಬರುತ್ತಿದೆ. ಮಂಗಳೂರು ವೆನ್‌ಲಾಕ್ ಆಸ್ಪತ್ರೆಯಲ್ಲಿ ೫೦ ಬೆಡ್‌ನ ಇಂಟಿಗ್ರೇಟೆಡ್ ಆಸ್ಪತ್ರೆ ಚಾಲನೆಯಲ್ಲಿದೆ. ಪ್ರಾಕೃತಿಕ ಚಿಕಿತ್ಸಾ ಪದ್ಧತಿಯಿಂದ ಯಾವುದೇ ದುಷ್ಪರಿಣಾಮ ಇಲ್ಲ ಎಂದು ಕೆರೆಕಾಡು ಸರಕಾರಿ ಯುನಾನಿ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ. ಮಹಮ್ಮದ್ ನೂರುಲ್ಲಾ ಹೇಳಿದರು.
ಪಡುಪಣಂಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳ್ಳಾಯರು ಕೆರೆಕಾಡು ಸ್ವಾಮಿ ಕೊರಗಜ್ಜನ ಸಭಾ ವೇದಿಕೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಸೋಮವಾರ ನಡೆದ ಉಚಿತ ಆಯುಷ್ ಚಿಕಿತ್ಸಾ ಶಿಬಿರದಲ್ಲಿ ಅವರು ಮಾತನಾಡಿದರು.
ಪಡುಪಣಂಬೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮೋಹನ್ ದಾಸ್ ಅಧ್ಯಕ್ಷತೆ ವಹಿಸಿದ್ದರು.
ದ.ಕ.ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ, ಪಡುಪಣಂಬೂರು ಗ್ರಾಮ ಪಂಚಾಯಿತಿ ಹಾಗೂ ಕೆ.ಟಿ.ಎಂ. ಫ್ರೆಂಡ್ಸ್‌ನ ಸಂಯುಕ್ತ ಆಶ್ರಯದಲ್ಲಿ ಶಿಬಿರ ನಡೆಸಲಾಯಿತು.
ಪಡುಪಣಂಬೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೊಲ್ಲು ಅವರ ಆರೋಗ್ಯ ತಪಾಸಣೆ ನಡೆಸುವ ಮೂಲಕ ಶಿಬಿರಕ್ಕೆ ಚಾಲನೆ ನೀಡಲಾಯಿತು.
ಮುಂಬಯಿ ಬಂಟರ ಸಂಘದ ಮಾಜಿ ಅಧ್ಯಕ್ಷ ಕೊಲ್ನಾಡು ಉತ್ರುಂಜೆ ಭುಜಂಗ ಎಂ. ಶೆಟ್ಟಿ, ಪಡುಪಣಂಬೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸುರೇಖಾ ಕರುಣಾಕರ್, ಸದಸ್ಯೆ ಶ್ವೇತಾ, ಕಾರ್ಯದರ್ಶಿ ಲೋಕನಾಥ ಭಂಡಾರಿ, ದಿನಕರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ಸವಿತಾ ಶರತ್ ಬೆಳ್ಳಾಯರು, ಕೆ.ಟಿ.ಎಂ. ಫ್ರೇಂಡ್ಸ್‌ನ ಅಧ್ಯಕ್ಷ ರಮೇಶ್, ಶಿಬಿರದ ವೈದ್ಯಾಧಿಕಾರಿಗಳಾದ ಡಾ.ಮಹಮ್ಮದ್ ಅಶಾಕ್, ಡಾ.ಬಸವರಾಜ್, ಡಾ.ದೀಪ್ತಿ, ಡಾ.ರಾಫತ್ ಉಪಸ್ಥಿತರಿದ್ದರು.
ಬಳ್ಕುಂಜೆ ಕೊಲ್ಲೂರು ಆಯುರ್ವೇದ ಚಿಕಿತ್ಸಾಲಯದ ಡಾ.ಶೋಭಾರಾಣಿ ಸ್ವಾಗತಿಸಿ ಕಾರ್ಯಕ್ರಮ , ನಿರೂಪಿಸಿದರು.

Kinnigoli-29121707

Comments

comments

Comments are closed.

Read previous post:
Kinnigoli-29121706
ಸಾಮಾಜಿಕ ಕಾರ್ಯಕರ್ತರಿಗೆ ಸನ್ಮಾನ

ಕಿನ್ನಿಗೋಳಿ: ಸಾಮಾಜಿಕ ಕಾರ್ಯಕರ್ತರ ಸಾಧನೆಯನ್ನು ಗುರುತಿಸಿ ಗೌರವಿಸುವುದು ಶ್ಲಾಘನಿಯ ಎಂದು ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಸದಸ್ಯ ಎಚ್, ವಸಂತ್ ಬೆರ್ನಾಡ್ ಹೇಳಿದರು. ಹಳೆಯಂಗಡಿ ಕೊಪ್ಪಳದಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ...

Close