ಕಾಂಗ್ರೆಸ್ ಕಾರ್ಯಕರ್ತರ ಸಭೆ

ಕಿನ್ನಿಗೋಳಿ: ಮೂಲ್ಕಿ ಮೂಡಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಭಾನುವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರೂ. 79 ಕೋ. ರೂ ವೆಚ್ಚದ ವಿವಿಧ ಯೋಜನೆಗಳಿಗೆ ಮೂಡಬಿದಿರೆಯಲ್ಲಿ ಅಧಿಕೃತವಾಗಿ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮೂಲ್ಕಿ ಬ್ಲಾಕ್ ಕಾಂಗ್ರೆಸ್‌ನಿಂದ 5 ಸಾವಿರ ಮಂದಿ ಭಾಗವಹಿಸಲಿದ್ದಾರೆ ಎಂದು ಮುಲ್ಕಿ ಮೂಡಬಿದಿರೆ ಶಾಸಕ ಕೆ. ಅಭಯಚಂದ್ರ ಜೈನ್ ಹೇಳಿದರು.
ಹಳೆಯಂಗಡಿಯ ಹರಿ ಓಂ ಸಭಾಂಗಣದಲ್ಲಿ ಗುರುವಾರ ಮೂಲ್ಕಿ ಬ್ಲಾಕ್ ಕಾಂಗ್ರೆಸ್‌ನ ವತಿಯಿಂದ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾಧ್ಯಮದೊಂದಿಗೆ ಅವರು ಮಾತನಾಡಿದರು.
ಮೂಡಬಿದಿರೆ, ಬಜಪೆ ಹಾಗೂ ಮೂಲ್ಕಿ ಬ್ಲಾಕ್‌ಗಳಿಂದ ಪ್ರತ್ಯೇಕವಾಗಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ವಿವಿಧ ಯೋಜನೆಯ ಫಲಾನುಭವಿಗಳು ತಮ್ಮ ಸರಕಾರಿ ಸವಲತ್ತುಗಳನ್ನು ಪಡೆಯಲಿದ್ದಾರೆ. ಕೊಟ್ಟ 160 ಭರವಸೆಗಳೂ ಸಹ ಪೂರೈಸಿ ಕೆಲವು ಹೊಸ ಯೋಜನೆಗಳು ಜಾರಿಯಾಗಿದೆ ಎಂದರು.
ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಂಜಯ ಮಟ್ಟು ಅಧ್ಯಕ್ಷತೆ ವಹಿಸಿದ್ದರು.
ಕೆಪಿಸಿಸಿ ಸದಸ್ಯ ಎಚ್.ವಸಂತ ಬೆರ್ನಾಡ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಮೂಲ್ಕಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಂ ಮೂಲ್ಕಿ, ಎಪಿಎಂಸಿ ಅಧ್ಯಕ್ಷ ಪ್ರಮೋದ್‌ಕುಮಾರ್, ಕೆಪಿಸಿಸಿ ಮೊಗವೀರ ಸಮಿತಿಯ ಕ್ಷೇತ್ರದ ಅಧ್ಯಕ್ಷ ತಾರಾನಾಥ್, ಪ್ರಧಾನ ಕಾರ್ಯದರ್ಶಿ ಸಂದೀಪ್ ಚಿತ್ರಾಪು, ಇಂಟಕ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿರಂಜೀವಿ ಅಂಚನ್, ಹಳೆಯಂಗಡಿ ಗ್ರಾ.ಪಂ. ಅಧ್ಯಕ್ಷೆ ಜಲಜಾ ಮೂಲ್ಕಿ ಬ್ಲಾಕ್‌ನ ವಿವಿಧ ವಲಯದ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

Comments

comments

Comments are closed.

Read previous post:
Kinnigoli-05011801
ಫೇಮಸ್ ಯೂತ್ ಕ್ಲಬ್ 30ನೇ ವಾರ್ಷಿಕೋತ್ಸವ

ಕಿನ್ನಿಗೋಳಿ: ಸಂಘಟನೆ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಉಪಯುಕ್ತ ಮಾಹಿತಿ ಹಾಗೂ ಸಹಾಯ ಹಸ್ತ ನೀಡಿದಾಗ ಸುಶಿಕ್ಷಿತ ಸಮಾಜ ನಿರ್ಮಾಣ ಸಾಧ್ಯ ಎಂದು ಮಂಗಳೂರು ಮಹಾನಗರಪಾಲಿಕೆ ಮೇಯರ್ ಕವಿತಾ...

Close